ನವದೆಹಲಿ: ಬಿಜೆಪಿ ರಾಜ್ಯ ಘಟಕದ ಅಧ್ಯಕ್ಷ ಬಿ.ವೈ. ವಿಜಯೇಂದ್ರ ಬಣ ಹಾಗೂ ಶಾಸಕ ಬಸನಗೌಡ ಪಾಟೀಲ ಯತ್ನಾಳ ಬಣಗಳ ನಡುವಿನ ಕಿತ್ತಾಟ ವರಿಷ್ಠರ ಅಂಗಳಕ್ಕೆ ತಲುಪಿದೆ.

ಬಣಗಳ ಕಿತ್ತಾಟ ತಾರಕಕ್ಕೇರಿರುವ ನಡುವೆಯೇ ಶುಕ್ರವಾರ ರಾತ್ರಿ ರಾಷ್ಟ್ರ ರಾಜಧಾನಿಗೆ ಧಾವಿಸಿದ ವಿಜಯೇಂದ್ರ ಅವರು ಶನಿವಾರ ಬೆಳಿಗ್ಗೆ ಪಕ್ಷದ ವರಿಷ್ಠ ನಾಯಕರನ್ನು ಭೇಟಿ ಮಾಡಿ ಭಿನ್ನಮತೀಯ ನಾಯಕರ ವಿರುದ್ಧ ದೂರಿತ್ತರು.

‘ಕಾಂಗ್ರೆಸ್ ಸರ್ಕಾರದ ಮುಡಾ ಹಗರಣ ಹಾಗೂ ವಾಲ್ಮೀಕಿ ಅಭಿವೃದ್ಧಿ ನಿಗಮದ ಭ್ರಷ್ಟಾಚಾರಗಳ ವಿರುದ್ಧ ದೊಡ್ಡಮಟ್ಟದ ಹೋರಾಟ ನಡೆಸಲಾಗಿದೆ. ಸಂಘಟನೆಗೆ ಚುರುಕು ನೀಡಲಾಗಿದೆ. ಅದೇ ಹೊತ್ತಿನಲ್ಲಿ, ಯತ್ನಾಳ ಬಣದ ನಾಯಕರು ಪ್ರತ್ಯೇಕ ಹೋರಾಟಗಳನ್ನು ನಡೆಸಿ ಕಾರ್ಯಕರ್ತರಲ್ಲಿ ಗೊಂದಲ ಸೃಷ್ಟಿಸುತ್ತಿದ್ದಾರೆ. ನಮ್ಮ ಕುಟುಂಬದ ವಿರುದ್ಧ ನಿತ್ಯ ಹೇಳಿಕೆಗಳನ್ನು ನೀಡುತ್ತಿದ್ದಾರೆ. ಇಂತಹ ಚಟುವಟಿಕೆಗಳಿಗೆ ಕಡಿವಾಣ ಹಾಕಬೇಕು’ ಎಂದು ವರಿಷ್ಠರಲ್ಲಿ ಒತ್ತಾಯಿಸಿದರು ಎಂದು ಮೂಲಗಳು ತಿಳಿಸಿವೆ.

‘ಪಕ್ಷದ ನಾಯಕರ ವಿರುದ್ಧ ಹೇಳಿಕೆ ನೀಡುತ್ತಿದ್ದ ಕಾರಣಕ್ಕೆ ಯತ್ನಾಳ ಅವರನ್ನು 2–3 ಸಲ ಕರೆಸಿ ಮಾತುಕತೆ ನಡೆಸಲಾಗಿದೆ. ಪಕ್ಷದ ರಾಜ್ಯ ನಾಯಕರು ಎಲ್ಲ ಒಗ್ಗಟ್ಟಾಗಿ ಪಕ್ಷದ ವೇದಿಕೆಯಲ್ಲೇ ಹೋರಾಟ ನಡೆಸುವಂತೆ ಸೂಚಿಸಲಾಗಿದೆ. ಅವರನ್ನು ಇನ್ನೊಮ್ಮೆ ಕರೆಸಿ ಮಾತನಾಡುತ್ತೇವೆ’ ಎಂದು ವರಿಷ್ಠರು ಭರವಸೆ ನೀಡಿದರು.

ಯತ್ನಾಳ ವಿರುದ್ಧ ಶಿಸ್ತುಕ್ರಮ ಕೈಗೊಳ್ಳಬೇಕು. ಇಲ್ಲದಿದ್ದರೆ ಪಕ್ಷ ಸಂಘಟನೆ ಮಾಡುವುದು ಕಷ್ಟವಾಗಲಿದೆ ಎಂದು ವಿಜಯೇಂದ್ರ ಅವರು ವರಿಷ್ಠರ ಗಮನಕ್ಕೆ ತಂದರು. ‘ಎರಡೂ ಬಣಗಳ ಮುಖಂಡರು ಕಿತ್ತಾಡುತ್ತಿರುವುದು ನಮ್ಮ ಗಮನಕ್ಕೆ ಬಂದಿದೆ. ಇಂತಹ ಚಟುವಟಿಕೆಗಳ ಕಡಿವಾಣಕ್ಕೆ ಕ್ರಮ ಕೈಗೊಳ್ಳುತ್ತೇವೆ’ ಎಂದೂ ವರಿಷ್ಠರು ಭರವಸೆ ನೀಡಿದರು ಎಂದು ಮೂಲಗಳು ತಿಳಿಸಿವೆ.

ಸಂಸದರ ನಿಯೋಗದಿಂದ ಶಾ, ನಡ್ಡಾ ಭೇಟಿ:

ಬಿ.ವೈ. ವಿಜಯೇಂದ್ರ, ಜಗದೀಶ ಶೆಟ್ಟರ್, ರಾಜ್ಯಸಭಾ ಸದಸ್ಯ ಈರಣ್ಣ ಕಡಾಡಿ ನೇತೃತ್ವದಲ್ಲಿ ರಾಜ್ಯದ ಬಿಜೆಪಿ ಸಂಸದರು ಕೇಂದ್ರ ಗೃಹ ಸಚಿವ ಅಮಿತ್ ಶಾ ಹಾಗೂ ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಜೆ.ಪಿ.ನಡ್ಡಾ ಅವರನ್ನು ಭೇಟಿ ಮಾಡಿ ಪಕ್ಷದ ರಾಜ್ಯ ಘಟಕದಲ್ಲಿನ ಗೊಂದಲಗಳನ್ನು ಬಗೆಹರಿಸುವಂತೆ ಮನವಿ ಮಾಡಿದರು. ‘ಕಳೆದ ಕೆಲವು ದಿನಗಳಿಂದ ಎರಡೂ ಬಣಗಳ ನಡುವಿನ ಜಟಾಪಟಿ ತೀವ್ರಗೊಂಡಿದೆ. ಇದಕ್ಕೆ ಕಡಿವಾಣ ಹಾಕಬೇಕು. ಇಲ್ಲದಿದ್ದರೆ ಪಕ್ಷಕ್ಕೆ ಭಾರಿ ಹೊಡೆತ ಬೀಳಲಿದೆ. ಎರಡೂ ಬಣದ ನಾಯಕರನ್ನು ಕರೆಸಿ ನಿರ್ದೇಶನಗಳನ್ನು ನೀಡಬೇಕು’ ಎಂದು ಅವರು ಆಗ್ರಹಿಸಿದರು.

‘ರಾಜ್ಯದಲ್ಲಿ ಪಕ್ಷದ ಬೆಳವಣಿಗೆಯಲ್ಲಿ ಅನೇಕ ನಾಯಕರ ಶ್ರಮ ಇದೆ. ಸಾವಿರಾರು ಕಾರ್ಯಕರ್ತರ ಪರಿಶ್ರಮ ಇದೆ. ಈಗಿನ ಬೆಳವಣಿಗೆಗಳಿಂದ ಅವರೆಲ್ಲ ನೊಂದಿದ್ದಾರೆ. ಕಾಂಗ್ರೆಸ್ ಸರ್ಕಾರದ ಭ್ರಷ್ಟಾಚಾರದ ವಿರುದ್ಧ ಹೋರಾಟ ಮಾಡುವ ಬದಲು ನಮ್ಮ ನಾಯಕರು ತಾವೇ ಕಚ್ಚಾಟದಲ್ಲಿ ತೊಡಗಿದ್ದಾರೆ. ಪಕ್ಷದ ವರಿಷ್ಠರು ಕೂಡಲೇ ಮಧ್ಯಪ್ರವೇಶ ಮಾಡಬೇಕು’ ಎಂದು ಒತ್ತಾಯಿಸಿದರು.

‘ಪಕ್ಷಕ್ಕೆ ಮುಜುಗರ ಉಂಟಾಗುವಂತಹ ಹೇಳಿಕೆ ನೀಡದಂತೆ ಯತ್ನಾಳ ಅವರಿಗೆ ಈ ಹಿಂದೆ ಸೂಚನೆ ನೀಡಲಾಗಿತ್ತು. ಆದರೆ, ಹೇಳಿಕೆ ನೀಡುತ್ತಲೇ ಇದ್ದಾರೆ. ಶೀಘ್ರದಲ್ಲಿ ಅವರನ್ನು ದೆಹಲಿಗೆ ಕರೆಸಿಕೊಂಡು ಚರ್ಚೆ ನಡೆಸುತ್ತೇವೆ’ ಎಂದು ಶಾ ಹಾಗೂ ನಡ್ಡಾ ಭರವಸೆ ನೀಡಿದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.