ಬೆಂಗಳೂರು: ‘ಕನ್ನಡಿಗರ ಹಕ್ಕು ಮತ್ತು ಹಿತಾಸಕ್ತಿಗಳ ವಿಷಯದಲ್ಲಿ ಕೇಂದ್ರದ ಮೋದಿ ಸರ್ಕಾರದ ತಾರತಮ್ಯ ಧೋರಣೆಯನ್ನು ಪ್ರಶ್ನಿಸದ ಬಿಜೆಪಿ ನಾಯಕರು ಕರ್ನಾಟಕಕ್ಕೆ ದ್ರೋಹ ಮಾಡುತ್ತಿದ್ದಾರೆ’ ಎಂದು ರಾಜ್ಯ ಕಾಂಗ್ರೆಸ್ ಉಸ್ತುವಾರಿ ರಣದೀಪ್ ಸಿಂಗ್ ಸುರ್ಜೇವಾಲಾ ಟೀಕಿಸಿದರು.

ಸುದ್ದಿಗಾರರ ಜೊತೆ ಭಾನುವಾರ ಮಾತನಾಡಿದ ಅವರು, ‘ಕರ್ನಾಟಕಕ್ಕೆ ಬಿಜೆಪಿ ಹಾನಿಕಾರಕ. ಆ ಪಕ್ಷದವರಿಗೆ ಕನ್ನಡಿಗರ ಮತ ಪಡೆಯುವ ಅರ್ಹತೆ ಇಲ್ಲ’ ಎಂದು ವಾಗ್ದಾಳಿ ನಡೆಸಿದರು.

‘14ನೇ ಮತ್ತು 15ನೇ ಹಣಕಾಸು ಆಯೋಗದಲ್ಲಿ ಕರ್ನಾಟಕಕ್ಕೆ ಬರಬೇಕಿದ್ದ ₹ 79,770 ಕೋಟಿಯನ್ನು ಕೇಂದ್ರ ನೀಡಿಲ್ಲ. ಜಿಎಸ್ಟಿ ಅವೈಜ್ಞಾನಿಕ ಜಾರಿಯಿಂದ ₹59,274, ಹೊಸ ಜಿಎಸ್ಟಿ ಪರಿಷ್ಕರಣೆಯಿಂದ ₹9 ಸಾವಿರ ಕೋಟಿ ಕರ್ನಾಟಕಕ್ಕೆ ನಷ್ಟವಾಗಿದೆ. ಜಲಜೀವನ್ ಮಿಷನ್ ಅಡಿಯಲ್ಲಿ ₹10,889 ಕೋಟಿ ಅನುದಾನವನ್ನು ಬಿಡುಗಡೆ ಮಾಡಿಲ್ಲ’ ಎಂದೂ ಆರೋಪಿಸಿದರು.

ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ
260406-51-1562070760

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.