ಬೆಂಗಳೂರು: ಸರ್ಕಾರದ ಸಾಲು ಸಾಲು ವೈಫಲ್ಯಗಳು ರಾಜ್ಯದ ಅಭಿವೃದ್ಧಿಯನ್ನು ರಿವರ್ಸ್ ಗೇರ್‌ನಲ್ಲಿರಿಸಿದೆ ಎಂದು ರಾಜ್ಯ ಸರ್ಕಾರದ ವಿರುದ್ಧ ಬಿಜೆಪಿ ಟೀಕೆ ಮಾಡಿದೆ.
ನಿರ್ಲಕ್ಷ್ಯ ಮಾಡಿದರೆ ಮತ್ತೆ ಪತ್ರ ಬರೆಯುತ್ತೇನೆ ಎಂದು ಶಾಸಕ ಬಿ.ಆರ್ ಪಾಟೀಲ್ ಅವರ ಹೇಳಿಕೆಯನ್ನು ಉಲ್ಲೇಖಿಸಿ ಬಿಜೆಪಿ ಈ ರೀತಿ ಹೇಳಿದೆ.
ಈ ಬಗ್ಗೆ ಸಾಮಾಜಿಕ ಜಾಲತಾಣ ‘ಎಕ್ಸ್’ನಲ್ಲಿ ಬರೆದುಕೊಂಡಿರುವ ಬಿಜೆಪಿ, ರಾಜ್ಯದ ಎಟಿಎಂ ಸರ್ಕಾರದಲ್ಲಿ ಶಾಸಕ-ಸಚಿವರ ಒಳಜಗಳಗಳು ಸದ್ಯಕ್ಕೆ ಮುಗಿಯುವ ಲಕ್ಷಣಗಳು ಕಾಣುತ್ತಿಲ್ಲ.
ಸ್ವಪಕ್ಷೀಯ ಶಾಸಕರನ್ನೇ ನಿರ್ಲಕ್ಷಿಸುವ ಸಚಿವರುಗಳು, ಇನ್ನು ಜನ ಸಾಮಾನ್ಯರ ಕಷ್ಟಗಳಿಗೆ ಸ್ಪಂದಿಸುತ್ತಾರೆಯ? ಎಂದು ಪ್ರಶ್ನಿಸಿದೆ.
‘ಭ್ರಷ್ಟಾಚಾರ, ವರ್ಗಾವಣೆ ದಂಧೆ, ಒಳಜಗಳ, ಕುರ್ಚಿ ತಿಕ್ಕಾಟ, ಹೀಗೆ ಕಾಂಗ್ರೆಸ್ ಸರ್ಕಾರದ ಸಾಲು ಸಾಲು ವೈಫಲ್ಯಗಳು ರಾಜ್ಯದ ಅಭಿವೃದ್ಧಿಯನ್ನು ರಿವರ್ಸ್ ಗೇರ್‌ನಲ್ಲಿರಿಸಿದೆ’ ಎಂದು ಬಿಜೆಪಿ ಹೇಳಿದೆ.
ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.