ಮಂಗಳವಾರ, 30 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಯುಪಿಎಸ್‌ಸಿ ಸೇರಿದಂತೆ ವಿವಿಧ ಪರೀಕ್ಷೆಗಳಿಗೆ ಉಚಿತ ‘ಆನ್‌ಲೈನ್‌ ಕೋಚಿಂಗ್‌’

Last Updated 4 ಮಾರ್ಚ್ 2022, 10:59 IST
ಅಕ್ಷರ ಗಾತ್ರ

ಬೆಂಗಳೂರು: ಕೆಪಿಎಸ್‌ಸಿ, ಯುಪಿಎಸ್‌ಸಿ, ಎಸ್‌ಎಸ್‌ಸಿ, ಬ್ಯಾಂಕಿಂಗ್‌, ರೈಲ್ವೆ, ಸಿಡಿಎಸ್, ನೀಟ್, ಜೆಇಇ ಮುಂತಾದ ವಿವಿಧ ಸ್ಪರ್ಧಾತ್ಮಕ ಪರೀಕ್ಷೆಗಳಿಗೆ ಸರ್ಕಾರದ ವತಿಯಿಂದ ಆನ್‌ಲೈನ್‌ ಕೋಚಿಂಗ್‌ ನೀಡಲಾಗುವುದು ಎಂದು ಸಿಎಂ ಬೊಮ್ಮಾಯಿ ಘೋಷಿಸಿದರು.

ರಾಜ್ಯ ಬಜೆಟ್‌ ಮಂಡಿಸುತ್ತಿರುವ ಅವರು, 'ಮುಖ್ಯಮಂತ್ರಿ ವಿದ್ಯಾರ್ಥಿ ಮಾರ್ಗದರ್ಶಿನಿ' ಎಂಬ ಹೊಸ ಯೋಜನೆಯಡಿ ವಿದ್ಯಾರ್ಥಿಗಳಿಗೆ ಆನ್‌ಲೈನ್ ವೇದಿಕೆಯ ಮೂಲಕ ಉಚಿತ ಕೋಚಿಂಗ್ ಸೌಲಭ್ಯವನ್ನು ನೀಡಲಾಗುವುದು ಎಂದು ತಿಳಿಸಿದರು.

ಈ ಯೋಜನೆ ಅಡಿಯಲ್ಲಿ ಕೆಪಿಎಸ್‌ಸಿ, ಯುಪಿಎಸ್‌ಸಿ, ಎಸ್‌ಎಸ್‌ಸಿ, ಬ್ಯಾಂಕಿಂಗ್‌, ರೈಲ್ವೆ, ಸಿಡಿಎಸ್, ನೀಟ್, ಜೆಇಇ ಮುಂತಾದ ವಿವಿಧ ಸ್ಪರ್ಧಾತ್ಮಕ ಪರೀಕ್ಷೆಗಳಿಗೆ ತರಬೇತಿ ನೀಡಲಾಗುವುದು ಎಂದು ಮುಖ್ಯಮಂತ್ರಿ ಬೊಮ್ಮಾಯಿ ಹೇಳಿದರು.

ಇದೇ ರಾಜ್ಯದ ಪ್ರತಿ ತಾಲೂಕುಗಳಲ್ಲೂ ನೀಟ್‌ ಪರೀಕ್ಷೆಗೆ ತರಬೇತಿ ನೀಡುವುದಾಗಿ ಬೊಮ್ಮಾಯಿ ಘೋಷಿಸಿದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT