ಬೆಂಗಳೂರು: ಮುಖ್ಯಮಂತ್ರಿ ಸಿದ್ದರಾಮಯ್ಯ ತಾವು ಮಂಡಿಸಿದ 2026–27ನೇ ಸಾಲಿನ ಬಜೆಟ್ನಲ್ಲಿ ಉಪಚುನಾವಣೆ ನಡೆಯಲಿರುವ ದಾವಣಗೆರೆ ದಕ್ಷಿಣ ವಿಧಾನಸಭಾ ಕ್ಷೇತ್ರ, ಬಾಗಲಕೋಟೆಯ ವಿಧಾನಸಭಾ ಕ್ಷೇತ್ರಗಳಿಗೆ ಭರ್ಜರಿ ಅನುದಾನ ಘೋಷಿಸಿದ್ದಾರೆ.

ರಾಜ್ಯ ರಾಜಕಾರಣದಲ್ಲಿ ಛಾಪು ಮೂಡಿಸಿದ್ದ ಶಾಮನೂರು ಶಿವಶಂಕರಪ್ಪ ನಿಧನದಿಂದ ದಾವಣಗೆರೆ ಉತ್ತರ ಕ್ಷೇತ್ರ ಮತ್ತು ಎಚ್.ವೈ. ಮೇಟಿ ನಿಧನದಿಂದ ಬಾಗಲಕೋಟೆ ನಗರ ಕ್ಷೇತ್ರ ತೆರವಾಗಿತ್ತು.

ದಾವಣಗೆರೆ ಜಿಲ್ಲೆಗೆ ಸಿಕ್ಕಿದ್ದು..

* ದಾವಣಗೆರೆ ದಕ್ಷಿಣ ವಿಧಾನಸಭಾ ಕ್ಷೇತ್ರದಲ್ಲಿ ಪರಿಶಿಷ್ಟ ಜಾತಿ, ಪರಿಶಿಷ್ಟ ಪಂಗಡ ಹಾಗೂ ಅಲ್ಪಸಂಖ್ಯಾತ ಸಮುದಾಯ ಹೆಚ್ಚಾಗಿ ವಾಸಿಸುತ್ತಿರುವ ವಿವಿಧ ಭಾಗಗಳ ಅಭಿವೃದ್ಧಿಗೆ ₹ 100 ಕೋಟಿ ಅನುದಾನ

* ತೋಟಗಾರಿಕಾ ಉತ್ಪನ್ನಗಳ ಸಂಸ್ಕರಣೆಗಾಗಿ 12,000 ಮೆಟ್ರಿಕ್ ಟನ್ ಸಾಮರ್ಥ್ಯದ ಶೀತಲಗೃಹ ನಿರ್ಮಾಣಕ್ಕೆ ₹64 ಕೋಟಿ ಅನುದಾನ

* ದಾವಣಗೆರೆ ತಾಲ್ಲೂಕಿನ ಮಾಯಕೊಂಡದ ಪ್ರಾಥಮಿಕ ಆರೋಗ್ಯ ಕೇಂದ್ರ ಸಮುದಾಯ ಆರೋಗ್ಯ ಕೇಂದ್ರವಾಗಿ ಮೇಲ್ದರ್ಜೆಗೆ ಏರಿಕೆ

* ಮೀನು ಆಹಾರ ಸೇವನೆಯನ್ನು ಉತ್ತೇಜಿಸಲು ಹಾಗೂ ಸಾರ್ವಜನಿಕರಿಗೆ ಸ್ವಚ್ಛ ಹಾಗೂ ಗುಣಮಟ್ಟದ ಮೀನು ಉತ್ಪನ್ನ ಲಭ್ಯವಾಗುವಂತೆ ಮಾಡಲು ದಾವಣಗೆರೆಯಲ್ಲಿ ಮತ್ಸ್ಯದರ್ಶಿನಿ ಸ್ಥಾಪನೆ

* ಹಿಂದುಳಿದ ವರ್ಗಗಳ ವಿದ್ಯಾರ್ಥಿಗಳ ಶೈಕ್ಷಣಿಕ ಅನುಕೂಲಕ್ಕಾಗಿ ದಾವಣಗೆರೆಯಲ್ಲಿ 150 ಸಂಖ್ಯಾಬಲದ ಹಾಸ್ಟೆಲ್ ಸ್ಥಾಪನೆ

* ದಾವಣಗೆರೆ ತಾಲ್ಲೂಕಿನ ಹೊನ್ನಾಳಿಯಲ್ಲಿ ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ನಿಗಮದ (ಕೆಎಸ್ಆರ್ಟಿಸಿ) ನೂತನ ಬಸ್ ನಿಲ್ದಾಣ ಹಾಗೂ ಡೀಪೊ ನಿರ್ಮಾಣ

ಬಾಗಲಕೋಟೆಗೆ ಸಿಕ್ಕಿದ್ದು..

* ಕೃಷ್ಣಾ ಮೇಲ್ದಂಡೆ ಯೋಜನೆಗೆ ಬೇಕಾದ ಭೂಮಿ ಸ್ವಾಧೀನ ಆರಂಭಿಸಲಾಗುವುದು ಎಂದು ಹೇಳಲಾಗಿದೆ. ಆದರೆ, ಅನುದಾನದ ಮೊತ್ತ ತಿಳಿಸಿಲ್ಲ

* ಬಾಗಲಕೋಟೆಯಲ್ಲಿ ಸರ್ಕಾರಿ ವೈದ್ಯಕೀಯ ಕಾಲೇಜು ಆರಂಭಕ್ಕೆ ಸೂಕ್ತ ಕ್ರಮ

* ಕೆರೂರು ಏತ ನೀರಾವರಿ ಪೂರ್ಣ, ಬಾದಾಮಿ ತಾಲ್ಲೂಕಿನಲ್ಲಿ ಮಲಪ್ರಭಾ ಎಡದಂಡೆ ಕಾಲುವೆ ಆಧುನೀಕರಣ

* ಬಾಗಲಕೋಟೆ, ಬಾದಾಮಿ, ಹುನಗುಂದ, ಮುಧೋಳದಲ್ಲಿ ಶ್ರಮಿಕ ವಸತಿ ಶಾಲೆ
.ಬಾಗಲಕೋಟೆ, ದಾವಣಗೆರೆ ದಕ್ಷಿಣ: ಉಪಚುನಾವಣೆಗೆ ಪ್ರಕ್ರಿಯೆ ಆರಂಭಿಸಿದ ಆಯೋಗ.ಮಡಿವಾಳ ಸಮುದಾಯವನ್ನು ಪರಿಶಿಷ್ಟ ಜಾತಿಗೆ ಸೇರಿಸಲು ಮಡಿವಾಳರ ಅಹೋರಾತ್ರಿ ಧರಣಿ.ಕರ್ನಾಟಕ ಬಜೆಟ್ 2026: ಜನಪ್ರಿಯತೆ – ಆರ್ಥಿಕ ಶಿಸ್ತಿನ ನಡುವಿನ ಹಗ್ಗದ ನಡಿಗೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.