ಗುರುವಾರ, 2 ಮೇ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ವಿಧಾನ ಮಂಡಲದ ಜಂಟಿ ಅಧಿವೇಶನ ಆರಂಭ: ಕೇಸರಿ ಶಾಲು ಧರಿಸಿ ಸದನಕ್ಕೆ ಬಂದ BJP ಶಾಸಕರು

Published 12 ಫೆಬ್ರುವರಿ 2024, 5:57 IST
Last Updated 12 ಫೆಬ್ರುವರಿ 2024, 5:57 IST
ಅಕ್ಷರ ಗಾತ್ರ

ಬೆಂಗಳೂರು: ವಿಧಾನ ಮಂಡಲದ ಜಂಟಿ‌ ಅಧಿವೇಶನ ಸೋಮವಾರ ಬೆಳಿಗ್ಗೆ 11ಕ್ಕೆ ಆರಂಭವಾಗಿದ್ದು, ಬಿಜೆಪಿ ಸದಸ್ಯರು ಕೇಸರಿ ಶಾಲು ಧರಿಸಿ ಕಲಾಪದಲ್ಲಿ ಭಾಗವಹಿಸಿದ್ದಾರೆ.

ರಾಜ್ಯಪಾಲ ಥಾವರಚಂದ್ ಗೆಹಲೋತ್ ಅವರು ಬೆಳಿಗ್ಗೆ 11ಕ್ಕೆ ಸರಿಯಾಗಿ ವಿಧಾನಸಭೆ ಆಗಮಿಸಿದರು. ವಿಧಾನಸಭೆ ಅಧ್ಯಕ್ಷ ಯು.ಟಿ. ಖಾದರ್, ವಿಧಾನ ಪರಿಷತ್ ಸಭಾಪತಿ ಬಸವರಾಜ ಹೊರಟ್ಟಿ, ಮುಖ್ಯಮಂತ್ರಿ ಸಿದ್ದರಾಮಯ್ಯ, ಕಾನೂನು ಸಚಿವ ಎಚ್.ಕೆ. ಪಾಟೀಲ ಮತ್ತಿತರರು ರಾಜ್ಯಪಾಲರನ್ನು ಸ್ವಾಗತಿಸಿದರು. ವಿಧಾನಸಭೆ ಮತ್ತು ವಿಧಾನ ಪರಿಷತ್ ಸದಸ್ಯರನ್ನು ಒಳಗೊಂಡ ಜಂಟಿ ಅಧಿವೇಶನ ಉದ್ದೇಶಿಸಿ ರಾಜ್ಯಪಾಲರು ಮಾತನಾಡುತ್ತಿದ್ದಾರೆ.

ಬಿಜೆಪಿಯ ಹಲವು ಸದಸ್ಯರು ಕೊರಳಿಗೆ ಕೇಸರಿ ಶಾಲು ಧರಿಸಿ ಸದನಕ್ಕೆ ಬಂದಿದ್ದರು. ಉಳಿದವರಿಗೆ ಸದನ ಪ್ರವೇಶಿಸುವ ಮೊದಲು ಬಿಜೆಪಿ ಶಾಸಕಾಂಗ ಪಕ್ಷದ ಕಚೇರಿ ಸಿಬ್ಬಂದಿ ಕೇಸರಿ ಶಾಲುಗಳನ್ನು ವಿತರಿಸಿದರು. ಅವುಗಳನ್ನು ಧರಿಸಿ ಬಿಜೆಪಿ ಶಾಸಕರು ವಿಧಾನಸಭೆ ಪ್ರವೇಶಿಸಿದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT