ಬೆಂಗಳೂರು: ಮುಖ್ಯಮಂತ್ರಿ ಸಿದ್ದರಾಮಯ್ಯ ದಾಖಲೆಯ 17ನೇ ಬಾರಿಗೆ ರಾಜ್ಯ ಬಜೆಟ್ ಮಂಡಿಸಿದ್ದು, ಬಜೆಟ್ ಗಾತ್ರ ₹4.48 ಲಕ್ಷ ಕೋಟಿಯಾಗಿದೆ. ಆದರೆ, ಈ ಬಾರಿ ₹1.32 ಲಕ್ಷ ಕೋಟಿ ಸಾಲ ಮಾಡುವುದಾಗಿ ಅವರು ಹೇಳಿದ್ದಾರೆ. ಹೀಗಾಗಿ, ಮತ್ತಷ್ಟು ಸಾಲದ ಭಾರ ರಾಜ್ಯದ ಜನತೆ ಮೇಲೆ ಬಿದ್ದಿದೆ.

ಈ ಬಗ್ಗೆ ತೀವ್ರ ಟೀಕೆ ವ್ಯಕ್ತಪಡಿಸಿರುವ ರಾಜ್ಯ ಬಿಜೆಪಿ, ಸಾಲ ಮಾಡುವುದರಲ್ಲಿ ಸಿಎಂ ಸಿದ್ದರಾಮಯ್ಯನವರು ನಿಸ್ಸೀಮರು! ಕನ್ನಡಿಗರಿಗೆ 'ಸಾಲದ ಭಾಗ್ಯ' ನೀಡುವುದೇ ನಿಮ್ಮ ಬಜೆಟ್ನ ಅಸಲಿ ಸಾಧನೆಯೇ ? ಎಂದು ಟೀಕಿಸಿದೆ.

ಅಭಿವೃದ್ಧಿಯತ್ತ ಹೆಜ್ಜೆ ಹಾಕಬೇಕಿದ್ದ ಕರ್ನಾಟಕದ ಕಾಂಗ್ರೆಸ್ ಸರ್ಕಾರ, ರಾಜ್ಯವನ್ನು ಸಾಲದ ಕೂಪಕ್ಕೆ ತಳ್ಳಿದೆ. ಕರ್ನಾಟಕದ ಒಟ್ಟು ಸಾಲ ₹8.24 ಲಕ್ಷ ಕೋಟಿ ರೂಪಾಯಿಗಳಿಗೂ ಮೀರಿದ್ದು, ಪ್ರತಿ ಕನ್ನಡಿಗನ ಮೇಲೆ ₹1.17 ಲಕ್ಷ ರೂಪಾಯಿ ಸಾಲದ ಹೊರೆ ಹೊರಿಸಲಾಗಿದೆ. ಸಾಲ ಮಾಡುವುದರಲ್ಲಿ ನಂಬರ್ 1, ಅಭಿವೃದ್ಧಿ ಮಾತ್ರ ಶೂನ್ಯ. ಇದುವೇ ಕಾಂಗ್ರೆಸ್ ಸರ್ಕಾರದ ಸಾಧನೆ! ಎಂದು ಬಿಜೆಪಿ ಟೀಕಿಸಿದೆ.

ರಾಜ್ಯದ ಅತಿಥಿ ಶಿಕ್ಷಕರಿಗೆ ಕಳೆದ 5 ತಿಂಗಳಿಂದ ಗೌರವ ಧನ ನೀಡದ ಈ ಭ್ರಷ್ಟ ಕಾಂಗ್ರೆಸ್ ಸರ್ಕಾರಕ್ಕೆ ನಾಚಿಕೆಯಾಗಬೇಕು, ಬಡ ಶಿಕ್ಷಕರಿಗೆ ನೀಡುವ ಒಂದು ಸಾವಿರ ನೀಡಲೂ ಸರ್ಕಾರದ ಬಳಿ ಹಣವಿಲ್ಲವೇ? ಕಳೆದ 5 ತಿಂಗಳಿನಿಂದ ಸಂಬಳವಿಲ್ಲದೆ ಶಿಕ್ಷಕರ ಜೀವನ ಬೀದಿಗೆ ಬಂದಿದೆ. ಹಬ್ಬ-ಹರಿದಿನಗಳು ಸಾಲದ ಸುಳಿಯಲ್ಲಿ ಕಳೆದುಹೋಗಿವೆ. ವರ್ಗಾವಣೆ, ಕಮಿಷನ್ ದಂಧೆಯಲ್ಲಿ ಮುಳುಗಿರುವ ಭ್ರಷ್ಟ ಕಾಂಗ್ರೆಸ್ ಸರ್ಕಾರಕ್ಕೆ ಶಿಕ್ಷಣ ವ್ಯವಸ್ಥೆ ಬಗ್ಗೆ ಕಿಂಚಿತ್ತೂ ಕಾಳಜಿಯಿಲ್ಲ. ಸಿಎಂ ಸಿದ್ದರಾಮಯ್ಯನವರೇ ಕೂಡಲೇ ಬಾಕಿ ಹಣ ಬಿಡುಗಡೆ ಮಾಡಿ ನೊಂದ ಶಿಕ್ಷಕರಿಗೆ ನೆರವಾಗಿ, ಇಲ್ಲದಿದ್ದರೆ ಕುರ್ಚಿ ಖಾಲಿ ಮಾಡಿ ಹೊರಡಿ! ಎಂದು ಒತ್ತಾಯಿಸಿದೆ.

ಭ್ರಷ್ಟ ಕಾಂಗ್ರೆಸ್ ಸರ್ಕಾರದ ಸಾಲ ಪರ್ವತದೆತ್ತರಕ್ಕೆ ಬೆಳೆದಿದೆ. ಮುಖ್ಯಮಂತ್ರಿ ಸಿದ್ದರಾಮಯ್ಯವರು ಈ ಬಾರಿಯ ಬಜೆಟ್ನಲ್ಲಿ ₹1.32 ಲಕ್ಷ ಕೋಟಿ ಸಾಲ ಮಾಡುವುದಾಗಿ ಘೋಷಣೆ ಮಾಡಿದ್ದಾರೆ. ರಾಜ್ಯದ ಒಟ್ಟು ಸಾಲ ಈಗ ₹8,24,389 ಲಕ್ಷ ಕೋಟಿ ದಾಟಲಿದೆ.

2024-25 ನೇ ಸಾಲಿನಲ್ಲಿ ₹1,05,246 ಕೋಟಿ ಸಾಲ, 2025-26 ನೇ ಸಾಲಿನಲ್ಲಿ ₹1.16 ಲಕ್ಷ ಕೋಟಿ ಸಾಲ, 2026-27 ಸಾಲಿನಲ್ಲಿ ₹1.32 ಲಕ್ಷ ಕೋಟಿ ಸಾಲ ಮಾಡಲಾಗಿದೆ. ಕನ್ನಡಿಗರ ಮೇಲೆ ಸಾಲದ ಹೊರೆ ಹೇರಿದ್ದೇ ಈ ಸ್ವ-ಘೋಷಿತ ಆರ್ಥಿಕ ತಜ್ಞ ಸಿದ್ದರಾಮಯ್ಯನವರ ಸಾಧನೆ ಎಂದು ಟೀಕಿಸಿದೆ.
.ಮಡಿವಾಳರಿಗೆ ಬೆಂಗಳೂರು, ಮೈಸೂರಿನಲ್ಲಿ ಲಾಂಡ್ರಿ;ಸಲೂನ್ಗಾಗಿ ಸವಿತಾ ಸಮಾಜಕ್ಕೆ ಸಾಲ.Karnataka Budget 2026: ಈ ಬಾರಿಯ ಬಜೆಟ್ನಲ್ಲಿ ಬೆಂಗಳೂರಿಗೆ ಸಿಕ್ಕಿದ್ದೇನು? .

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.