ಬೆಂಗಳೂರು: ವೇತನ ಪರಿಷ್ಕರಣೆ ಸೇರಿದಂತೆ ಬೇರೆ ಬೇರೆ ಬೇಡಿಕೆಗಳ ಈಡೇರಿಕೆಗೆ ಆಗ್ರಹಿಸಿ ರಾಜ್ಯ ಸಾರಿಗೆ ಒಕ್ಕೂಟಗಳ ಜಂಟಿ ಕ್ರಿಯಾ ಸಮಿತಿ ಕರೆ ನೀಡಿರುವ ಅನಿರ್ದಿಷ್ಟಾವಧಿ ಮುಷ್ಕರದಿಂದ ಸಾರಿಗೆ ಬಸ್ಗಳ ಸಂಚಾರ ಬಹುತೇಕ ಸ್ತಬ್ಧ ಸ್ತಬ್ಧಗೊಂಡಿದೆ.

ಇದರಿಂದಗಿ ಸಾರ್ವಜನಿಕರ ಪ್ರಯಾಣಕ್ಕೆ ತೊಂದರೆ ಉಂಟಾಗಿದೆ. ಬಿಎಂಟಿಸಿ, ಕೆಎಸ್ಆರ್ಟಿಸಿ ಬಸ್ಗಳನ್ನೇ ಅವಲಂಬಿಸಿರುವ ಜನರು ಕೆಲಸಗಳಿಗೆ, ಶಾಲೆಗಳಿಗೆ ಕಾಲೇಜುಗಳಿಗೆ ಹೋಗಲು ಪರದಾಡುವಂತಾಗಿದೆ.
.LIVE | ಸಾರಿಗೆ ನೌಕರರ ಮುಷ್ಕರ: ರಸ್ತೆಗಿಳಿಯದ KSRTC ಬಸ್ಗಳು; ಸಂಚಾರದಲ್ಲಿ ಭಾರಿ ವ್ಯತ್ಯಯ.ಬಾಗಲಕೋಟೆ | ಸಾರಿಗೆ ನೌಕರರ ಮುಷ್ಕರ: ಬಸ್ಗಳಿಲ್ಲದೆ ಪ್ರಯಾಣಿಕರ ಪರದಾಟ.
ಶಿವಮೊಗ್ಗ, ಬಾಗಲಕೋಟೆ, ಕಲಬುರಗಿ, ಸೇರಿ ರಾಜ್ಯ ಎಲ್ಲಕಡೆಗಳಲ್ಲಿ ಬಸ್ ಸಂಚಾರ ಸ್ಥಗಿತಗೊಂಡಿದ್ದು ಪ್ರಯಾಣಿಕರು ಪರದಾಡುವಂತಾಗಿದೆ.

ಸಾರಿಗೆ ನಿಗಮಗಳು ತಮ್ಮದೇ ಆದ ವ್ಯವಸ್ಥೆ ಮಾಡಿಕೊಂಡಿದ್ದು ಸಾರ್ವಜನಿಕರಿಗೆ ತೊಂದರೆಯಾಗದು ಎಂದು ರಾಜ್ಯ ಸರ್ಕಾರ ಹೇಳಿದೆ.

ಶಿವಮೊಗ್ಗ ಜಿಲ್ಲೆಯಲ್ಲಿ ಸಾರಿಗೆ ನೌಕರರಿಂದ ಮಿಶ್ರ ಪ್ರತಿಕ್ರಿಯೆ ವ್ಯಕ್ತವಾಗಿದೆ. ಸಂಸ್ಥೆಯ ಕಾಯಂ ನೌಕರರು ಕರ್ತವ್ಯಕ್ಕೆ ಹಾಜರಾಗದ ಕಾರಣ ಶೇ 60 ರಷ್ಟು ಕೆಎಸ್ ಆರ್ ಟಿಸಿ ಬಸ್ ಗಳು ರಸ್ತೆಗೆ ಇಳಿಯಲಿಲ್ಲ.

ವಿಜಯನಗರ ಜಿಲ್ಲೆಯಲ್ಲಿ ಬಸ್ ಸಂಚಾರಕ್ಕೆ ಧಕ್ಕೆ ಇಲ್ಲ

ಹೊಸಪೇಟೆ ನಗರದಲ್ಲಿ ಹಾಗೂ ಜಿಲ್ಲೆಯ ಬಹುತೇಕ ಕಡೆಗಳಲ್ಲಿ ಬೆಳಿಗ್ಗೆಯಿಂದಲೇ ಬಸ್ ಸಂಚಾರ ಸಹಜವಾಗಿದೆ. ನಗರದಲ್ಲಿ ಬೆಳಿಗ್ಗೆ 7 ಗಂಟೆ ಸುಮಾರಿಗೆ ಮಳೆ ಅರಂಭವಾಯಿತು, ಹೀಗಾಗಿ ಕೆಲವು ಬಸ್ಗಳು ಡಿಪೋದಿಂದ ಬಸ್ ನಿಲ್ದಾಣಕ್ಕೆ ಬರುವುದು ವಿಳಂಬವಾಯಿತು. ಅದು ಬಿಟ್ಟರೆ ಕೂಡ್ಲಿಗಿ, ಹಗರಿಬೊಮ್ಮನಹಳ್ಳಿ, ಹಂಪಿ, ಹುಲಿಗಿ ಮುಂತಾದ ಕಡೆಗಳಿಗೆ ವಿರಳವಾಗಿ ಬಸ್ಗಳು ಓಡಾಡಿದವು.
.ಸಾರಿಗೆ ನೌಕರರ ಮುಷ್ಕರ: ಹುಬ್ಬಳ್ಳಿಯಲ್ಲಿ ಪ್ರಯಾಣಿಕರ ಪರದಾಟ.ಸಾರಿಗೆ ನೌಕರರ ಮುಷ್ಕರ: ಕಲಬುರಗಿಯಲ್ಲಿ ಬಸ್ ಸಂಚಾರ ಬಹುತೇಕ ಸ್ತಬ್ಧ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.