ಬೆಂಗಳೂರು: ವಿಧಾನಸಭೆ ಉಪಚುನಾವಣೆ ನಡೆಯುತ್ತಿರುವ 15 ಕ್ಷೇತ್ರಗಳಲ್ಲೂ ತಮ್ಮ ಹಕ್ಕು ಚಲಾಯಿಸಲು ಮತದಾರರು ಮುಂದಾಗಿಲ್ಲ. ಎಲ್ಲೆಡೆ ನೀರಸ ಪ್ರತಿಕ್ರಿಯೆ ವ್ಯಕ್ತವಾಗಿದೆ.

ಬೆಳಿಗ್ಗೆ 11 ಗಂಟೆ ವೇಳೆಗೆ 15 ಕ್ಷೇತ್ರಗಳಲ್ಲಿ ಸರಾಸರಿ ಶೇ 17.60ರಷ್ಟು ಮತದಾನವಾಗಿದೆ. ಶಿವಾಜಿನಗರ ಕ್ಷೇತ್ರದಲ್ಲಿ ಅತಿ ಕಡಿಮೆ ಶೇ 9.2ರಷ್ಟು ಮಂದಿ ಮತದಾನ ಮಾಡಿದ್ದಾರೆ. ಕೆ.ಆರ್.ಪುರದಲ್ಲಿ ಶೇ 10.97, ಯಶವಂತಪುರದಲ್ಲಿ ಶೇ 13.13, ಮಹಾಲಕ್ಷ್ಮಿ ಲೇಔಟ್‌ನಲ್ಲಿ ಶೇ 15.71ರಷ್ಟು ಮಂದಿ ಮತ ಹಾಕಿದ್ದಾರೆ.

ಬೆಂಗಳೂರು ನಗರ ವ್ಯಾಪ್ತಿಯಲ್ಲಿ ಇರುವ ನಾಲ್ಕೂ ಕ್ಷೇತ್ರಗಳಲ್ಲಿ ಹೆಚ್ಚಿನ ಸಂಖ್ಯೆಯ ಜನರು ಮನೆಯಿಂದ ಹೊರ ಬಂದಂತೆ ಕಾಣುತ್ತಿಲ್ಲ. ರಾಜ್ಯದ ಉಳಿದ ಕ್ಷೇತ್ರಗಳಲ್ಲೂ ಅಂತಹ ಉತ್ಸಾಹ ಕಂಡುಬರದಿದ್ದರೂ ಶೇ 20ಕ್ಕೂ ಹೆಚ್ಚಿನ ಪ್ರಮಾಣದಲ್ಲಿ ಮತದಾನವಾಗಿದೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.