ಬೆಂಗಳೂರು: ಜಾತಿ ಮೀರಿ ಪ್ರೀತಿಸುವ, ಮದುವೆಯಾದವರನ್ನು ಮರ್ಯಾದೆ ಹೆಸರಿನಲ್ಲಿ ಹಲ್ಲೆ, ಹತ್ಯೆ ಹಾಗೂ ಬಹಿಷ್ಕರಿಸುವವರನ್ನು ಕಠಿಣ ಶಿಕ್ಷೆಗೆ ಗುರಿಪಡಿಸುವ ಉದ್ದೇಶದ ‘ಇವ ನಮ್ಮವ, ಇವ ನಮ್ಮವ’ ಮಸೂದೆಗೆ ಗುರುವಾರ ನಡೆದ ಸಚಿವ ಸಂಪುಟ ಸಭೆ ಒಪ್ಪಿಗೆ ನೀಡಿದೆ.

ರಾಜ್ಯದ ವಿವಿಧ ಜಿಲ್ಲೆಗಳಲ್ಲಿ ‘ಮರ್ಯಾದೆಗೇಡು ಹತ್ಯೆ’ ಹೆಸರಿನಲ್ಲಿ ನಡೆದ ಕೊಲೆ, ದೌರ್ಜನ್ಯಗಳ ಬಗ್ಗೆ ಸಾರ್ವಜನಿಕ ವಲಯದಲ್ಲಿ ತೀವ್ರ ಆಕ್ರೋಶ ವ್ಯಕ್ತವಾಗಿತ್ತು. ಇಂತಹ ಕೃತ್ಯಗಳ ತಡೆಗೆ ಕಠಿಣ ಕಾನೂನು ತರಬೇಕೆಂದು ನಾಗರಿಕರು, ವಿವಿಧ ಸಂಸ್ಥೆಗಳು ಸರ್ಕಾರದ ಮೇಲೆ ಒತ್ತಡ ಹೇರಿದ್ದವು. ಕಾಯ್ದೆ ರೂಪಿಸುವುದಾಗಿ ಮುಖ್ಯಮಂತ್ರಿ ಸಿದ್ದರಾಮಯ್ಯ ಭರವಸೆ ನೀಡಿದ್ದರು.

ಸಂಪುಟ ಸಭೆ ಅನುಮೋದನೆ ನೀಡಿದ ಮಸೂದೆಯನ್ನು ಇದೇ ಅಧಿವೇಶನದಲ್ಲಿ ಮಂಡಿಸಲಾಗುವುದು ಎಂದು ಮೂಲಗಳು ತಿಳಿಸಿವೆ.

ಅಂತರರಾಷ್ಟ್ರೀಯ ಕ್ರಿಕೆಟ್ ಸ್ಟೇಡಿಯಂ:

ಬೆಂಗಳೂರು ಜಿಲ್ಲೆ ಆನೇಕಲ್ ತಾಲ್ಲೂಕಿನಲ್ಲಿರುವ ಸೂರ್ಯನಗರ ಬಡಾವಣೆಯಲ್ಲಿ ₹800 ಕೋಟಿ ವೆಚ್ಚದಲ್ಲಿ ಅಂತರರಾಷ್ಟ್ರೀಯ ಕ್ರಿಕೆಟ್ ಸ್ಟೇಡಿಯಂ ನಿರ್ಮಿಸಲು ಸಚಿವ ಸಂಪುಟ ಸಭೆ ಒಪ್ಪಿಗೆ ನೀಡಿದೆ.

ಈ ಕ್ರೀಡಾಂಗಣವು ಆಧುನಿಕ ಸೌಲಭ್ಯಗಳನ್ನು ಹೊಂದಿರಲಿದೆ. ಕ್ರಿಕೆಟ್ ಸ್ಟೇಡಿಯಂ 80 ಸಾವಿರ ಆಸನಗಳ ಸಾಮರ್ಥ್ಯವನ್ನು ಹೊಂದಿರಲಿದೆ ಎಂದು ಮೂಲಗಳು ತಿಳಿಸಿವೆ.

ಇತರ ಪ್ರಮುಖ ತೀರ್ಮಾನಗಳು:

76 ಮೌಲಾನಾ ಆಜಾದ್ ಆಂಗ್ಲ ಮಾದರಿ ಶಾಲೆಗಳು ಮತ್ತು 41 ಉರ್ದು ಮಾಧ್ಯಮ ಶಾಲೆಗಳನ್ನು ₹683.33 ಕೋಟಿ ವೆಚ್ಚದಲ್ಲಿ ಕರ್ನಾಟಕ ಪಬ್ಲಿಕ್ ಶಾಲೆಗಳಾಗಿ ಉನ್ನತೀಕರಣ

ಮಾಧ್ಯಮಕ್ಕೆ ಸಂಬಂಧಿಸಿದ ನೂತನ ಜಾಹೀರಾತು ನೀತಿಗೆ ಅನುಮೋದನೆ

15 ನೇ ಹಣಕಾಸು ಆಯೋಗದ ಅನುದಾನದಡಿ 27 ಆಯುಷ್ಮಾನ್ ಆರೋಗ್ಯ ಮಂದಿರಗಳನ್ನು ₹17.55 ಕೋಟಿ ವೆಚ್ಚದಲ್ಲಿ ನಿರ್ಮಾಣ

ಖೇಲೋ ಇಂಡಿಯಾ ಯೋಜನೆಯಡಿ ಮಂಡ್ಯ ಜಿಲ್ಲೆಯ ಕೃಷಿ ವಿಜ್ಞಾನ ವಿಶ್ವವಿದ್ಯಾಲಯದಲ್ಲಿ ₹14 ಕೋಟಿ ವೆಚ್ಚದಲ್ಲಿ ಒಳಾಂಗಣ ಕ್ರೀಡಾಂಗಣ ನಿರ್ಮಾಣ

ಕರ್ನಾಟಕ ಕೈಮಗ್ಗ ಅಭಿವೃದ್ಧಿ ನಿಗಮ ನಿಯಮಿತದ ಅಧಿಕೃತ ಷೇರು ಬಂಡವಾಳವನ್ನು ₹95 ಕೋಟಿಯಿಂದ ₹125 ಕೋಟಿಗೆ ಹೆಚ್ಚಿಸಲು ಅನುಮೋದನೆ

ಮೈಸೂರು ಷುಗರ್ ಕಂಪನಿಯ ಬಾಯ್ಲಿಂಗ್ ಹೌಸ್ ದುರಸ್ತಿ ಮತ್ತು 5000 ಟನ್ ಕಬ್ಬು ನುರಿಸಲು ಹೊಸ ಯಂತ್ರೋಪಕರಣ ಅಳವಡಿಕೆಗೆ ₹60 ಕೋಟಿ

ಬನ್ನೇರುಘಟ್ಟ ರಾಷ್ಟ್ರೀಯ ಉದ್ಯಾನದ ವ್ಯಾಪ್ತಿಯಲ್ಲಿ ಮಾನವ–ವನ್ಯಜೀವಿ ಸಂಘರ್ಷ ತಡೆಗಟ್ಟಲು ರೈಲ್ವೆ ಬ್ಯಾರಿಕೇಡ್ ನಿರ್ಮಾಣ ಕಾಮಗಾರಿಗೆ ₹10.83 ಕೋಟಿ

ಮಂಡ್ಯ ವಿಧಾನಸಭಾ ಕ್ಷೇತ್ರ ವ್ಯಾಪ್ತಿಯಲ್ಲಿ ಬರುವ ಕಾವೇರಿ ಶಾಖಾ ನಾಲೆ, ಕೆರಗೋಡು ಶಾಖಾ ನಾಲೆ,ಶಿಂಷಾ ನಾಲೆ ಮತ್ತು ಹೊಸ ಮದ್ದೂರು ಶಾಖಾ ನಾಲೆಗಳಡಿ ವಿತರಣಾ ನಾಲೆ ಮತ್ತು ಪಿಕಪ್ ನಾಲೆಗಳ ಆಧುನೀಕರಣಕ್ಕೆ ₹100 ಕೋಟಿ

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.