ಗುರುವಾರ, 2 ಮೇ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಗೃಹ ಲಕ್ಷ್ಮಿ ಗ್ಯಾರಂಟಿ ಕುರಿತು ಪೂರ್ಣ ಮಾಹಿತಿ ಇಲ್ಲಿದೆ

Published 2 ಜೂನ್ 2023, 15:25 IST
Last Updated 2 ಜೂನ್ 2023, 15:25 IST
ಅಕ್ಷರ ಗಾತ್ರ

ಬೆಂಗಳೂರು: ಗ್ಯಾರಂಟಿಗಳನ್ನು ಜಾರಿಗೊಳಿಸಿ ಸತತ ಸಭೆಗಳ ನಂತರ ಕೊನೆಗೂ ಕಾಂಗ್ರೆಸ್ ಸರ್ಕಾರ ಗ್ಯಾರಂಟಿ ಯೋಜನೆಗಳನ್ನು ಘೋಷಿಸಿದೆ. ಸಿಎಂ ಸಿದ್ದರಾಮಯ್ಯ ಸುದ್ದಿಗೋಷ್ಟಿ ನಡೆಸುವ ಮೂಲಕ 5 ಗ್ಯಾರಂಟಿಗಳ ಮಾಹಿತಿ ನೀಡಿದ್ದು ಈ ವರ್ಷವೇ ಎಲ್ಲಾ ಯೋಜನೆ ಜಾರಿ ತರುತ್ತೇವೆ ಎಂದು ತಿಳಿಸಿದ್ದಾರೆ.

ಗೃಹ ಲಕ್ಷ್ಮಿ: ರಾಜ್ಯದಲ್ಲಿರುವ ಬಿಪಿಎಲ್‌ ಹಾಗೂ ಎಪಿಎಲ್‌ ಕುಟುಂಬಗಳ ಯಜಮಾನಿಯ ಖಾತೆಗೆ ಮಾಸಿಕ 2000 ರೂ. ಮೊತ್ತ ವರ್ಗಾವಣೆ ಮಾಡಲಾಗುವುದು. ಈ ಯೋಜನೆಯ ಸೌಲಭ್ಯ ಪಡೆಯಲು ಮಹಿಳೆಯರು ಅರ್ಜಿ ಸಲ್ಲಿಸಬೇಕು. ಇದರಲ್ಲಿ ಮನೆಯ ಯಜಮಾನಿ ಯಾರು ಎಂಬುದನ್ನು ಘೋಷಿಸಬೇಕು; ಬ್ಯಾಂಕ್‌ ಖಾತೆ ಸಂಖ್ಯೆ, ಆಧಾರ್‌ ಸಂಖ್ಯೆ ಮಾಹಿತಿ ಒದಗಿಸಬೇಕು. ಜೂನ್‌ 15 ರಿಂದ ಜುಲೈ 15 ರ ವರೆಗೆ ಅರ್ಜಿ ಸಲ್ಲಿಸಲು ಅವಕಾಶ ಕಲ್ಪಿಸಲಾಗುವುದು. ಜುಲೈ 15 ರಿಂದ ಆಗಸ್ಟ್‌ 15ರ ಅವಧಿಯಲ್ಲಿ ಅರ್ಜಿಗಳನ್ನು ಪರಿಶೀಲಿಸಿ, ಅಗತ್ಯ ತಂತ್ರಾಂಶಗಳನ್ನು ಅಭಿವೃದ್ಧಿ ಪಡಿಸಿ, ಆಗಸ್ಟ್‌ 15 ರಂದು ಸ್ವಾತಂತ್ರ್ಯ ದಿನಾಚರಣೆಯ ದಿನ ಈ ಯೋಜನೆಗೆ ಚಾಲನೆ ನೀಡಲಾಗುವುದು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT