ಬೆಂಗಳೂರು: ಖಾಲಿ ಹುದ್ದೆಗಳಿಗೆ ನೇಮಕಾತಿ ಪ್ರಕ್ರಿಯೆ ಆರಂಭಿಸಲು ಅಗತ್ಯ ಸಿದ್ಧತೆಗಳು ಮುಂದುವರಿಯಲಿದ್ದು, ಎರಡು ಕ್ಷೇತ್ರಗಳಿಗೆ ಏಪ್ರಿಲ್ 9ರಂದು ನಡೆಯಲಿರುವ ಉಪ ಚುನಾವಣೆಯ ಬಳಿಕ ಸಂಪುಟ ಸಭೆಯಲ್ಲಿ ಒಳ ಮೀಸಲಾತಿ ಕುರಿತು ಚರ್ಚಿಸಿ ತೀರ್ಮಾನ ತೆಗೆದುಕೊಳ್ಳಲು ರಾಜ್ಯ ಸರ್ಕಾರ ನಿರ್ಧರಿಸಿದೆ.

‘ಬಾಗಲಕೋಟೆ ಮತ್ತು ದಾವಣಗೆರೆ ದಕ್ಷಿಣ ಕ್ಷೇತ್ರಗಳಿಗೆ ನಡೆಯಲಿರುವ ಉಪ ಚುನಾವಣೆಯ ಕಾರಣಕ್ಕೆ ಜಾರಿಯಲ್ಲಿರುವ ಮಾದರಿ ನೀತಿ ಸಂಹಿತೆ ಕುರಿತು ಗುರುವಾರ ರಾತ್ರಿ ನಡೆದ ಸಚಿವ ಸಂಪುಟ ಸಭೆಯಲ್ಲಿ ಚರ್ಚೆ ನಡೆಯಿತು’ ಎಂದು ಸಭೆಯ ಬಳಿಕ ಕಾನೂನು ಸಚಿವ ಎಚ್.ಕೆ. ಪಾಟೀಲ ತಿಳಿಸಿದರು.

ಜಲಸಂಪನ್ಮೂಲ ಇಲಾಖೆಯಲ್ಲಿ 2003ರಲ್ಲಿ ನೇಮಕಾತಿ ಹೊಂದಿ ಇಲಾಖಾ ಬೇರ್ಪಡಿಸುವಿಕೆಯ ಸಂದರ್ಭದಲ್ಲಿ, ಯಾವ ಇಲಾಖೆಗೆ ಸೇರುತ್ತೇವೆಂದು ಅಭಿಮತ ಸಲ್ಲಿಸದೇ ಜಲಸಂಪನ್ಮೂಲ ಇಲಾಖೆಯಲ್ಲಿಯೇ ಮುಂದುವರೆದಿರುವ 379 ಅಧಿಕಾರಿ, ನೌಕರರನ್ನು ಜಲಸಂಪನ್ಮೂಲ ಇಲಾಖೆಯ ಆಯಾ ವೃಂದದ ಜ್ಯೇಷ್ಠತಾ ಪಟ್ಟಿಯಲ್ಲಿ ಪರಿಗಣಿಸುವ ಪ್ರಸ್ತಾವಕ್ಕೆ ಸಂಪುಟ ಒಪ್ಪಿಗೆ ನೀಡಿದೆ ಎಂದು ತಿಳಿಸಿದರು.

‘ರಾಷ್ಟ್ರೀಯ ಬಾಲ ಸ್ವಾಸ್ಥ್ಯ ಕಾರ್ಯಕ್ರಮ (ಆರ್ಬಿಎಸ್ಕೆ) ಯೋಜನೆಯಡಿ ಅನುಮತಿ ನೀಡಲಾದ 148 ಚಿಕಿತ್ಸಾ ಕಾರ್ಯವಿಧಾನಗಳಷ್ಟೇ ಅಲ್ಲದೆ, ಒಪ್ಪಂದದಲ್ಲಿ ಸೇರದೇ ಇರುವ ಹೆಚ್ಚಿನ ಚಿಕಿತ್ಸೆಗಳನ್ನು ಕೈಗೊಂಡಿದ್ದಕ್ಕಾಗಿ 2015-16 ರಿಂದ 2018-19ವರೆಗೆ ಆಗಿರುವ ವೆಚ್ಚದ ಬಾಕಿ ₹ 23.30 ಕೋಟಿಯ ಬಿಲ್ಲುಗಳನ್ನು ಸುವರ್ಣ ಆರೋಗ್ಯ ಸುರಕ್ಷತಾ ಟ್ರಸ್ಟ್ (ಎಸ್ಎಎಸ್ಟಿ) ಅನುದಾನದಿಂದ ಪಾವತಿಸಲು ಸಭೆಗೆ ಒಪ್ಪಿಗೆ ನೀಡಿದೆ’ ಎಂದರು.

‘ವಿಧಾನ ಸಭೆಯಲ್ಲಿ ಅಂಗೀಕಾರಗೊಂಡಿರುವ ಶಿಕ್ಷಣ ಸಂಸ್ಥೆಗಳ ಭೂಮಿಯನ್ನು ಸಂರಕ್ಷಿಸುವ ಉದ್ದೇಶದ ‘ಕರ್ನಾಟಕ ಸರ್ಕಾರಿ ಶೈಕ್ಷಣಿಕ ಸಂಸ್ಥೆಗಳ ಭೂಮಿ ರಕ್ಷಣೆ ಮತ್ತು ಸಕ್ರಮಾತಿ) ಮಸೂದೆ ಮತ್ತು ಶಿಕ್ಷಕರ ವರ್ಗಾವಣೆ ಸ್ವರೂಪದಲ್ಲಿ ಆಮೂಲಾಗ್ರ ಬದಲಾವಣೆ ತರುವ ಉದ್ದೇಶದ ಕರ್ನಾಟಕ ರಾಜ್ಯ ಸಿವಿಲ್ ಸೇವೆಗಳು (ಶಿಕ್ಷಕರ ವರ್ಗಾವಣೆ ನಿಯಂತ್ರಣ) (ತಿದ್ದುಪಡಿ) ಮಸೂದೆ ಮತ್ತು ರಾಜ್ಯದಲ್ಲಿ ಸಂಚರಿಸುವ ಬಾಡಿಗೆ ವಾಹನಗಳು ಮತ್ತು ಇತರ ವಾಹನಗಳ ತೆರಿಗೆ ಪರಿಷ್ಕರಣೆಗೆ ಅವಕಾಶ ಕಲ್ಪಿಸುವ ‘ಕರ್ನಾಟಕ ಮೋಟಾರು ವಾಹನಗಳ ತೆರಿಗೆ ನಿರ್ಧರಣೆ (ತಿದ್ದುಪಡಿ) ಮಸೂದೆಗೆ ಸಭೆ ಘಟನೋತ್ತರ ಅನುಮೋದನೆ ನೀಡಿದೆ’ ಎಂದು ತಿಳಿಸಿದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.