ಬೆಂಗಳೂರು: ರಾಜ್ಯದ 1,120 ಪ್ರಾಥಮಿಕ ಆರೋಗ್ಯ ಕೇಂದ್ರಗಳು ಮತ್ತು 2,032 ಆರೋಗ್ಯ ಮತ್ತು ಸ್ವಾಸ್ಥ್ಯ ಕೇಂದ್ರಗಳಲ್ಲಿ ಟೆಲಿಮೆಡಿಸಿನ್ ಸೌಲಭ್ಯ ಕಲ್ಪಿಸಲು ಸಚಿವ ಸಂಪುಟ ಸಭೆ ಒಪ್ಪಿಗೆ ನೀಡಿದೆ.

ಇದಕ್ಕಾಗಿ ರಾಷ್ಟ್ರೀಯ ಆರೋಗ್ಯ ಮಿಷನ್ನಿಂದ ₹18.96 ಕೋಟಿ ಸಿಗಲಿದ್ದು, ಕೆಟಿಟಿಪಿ ಕಾಯ್ದೆಯಡಿ ಅಗತ್ಯ ಸಾಧನ– ಸಲಕರಣೆಗಳನ್ನು ಖರೀದಿಸಲು ಒಪ್ಪಿಗೆ ನೀಡಲಾಗಿದೆ ಎಂದು ಮೂಲಗಳು ತಿಳಿಸಿವೆ. 2020–21 ನೇ ಸಾಲಿಗೆ 1 ರಿಂದ 10 ನೇ ತರಗತಿವರೆಗಿನ ವಿದ್ಯಾರ್ಥಿಗಳಿಗೆ ಉಚಿತ ಪಠ್ಯ ಪುಸ್ತಕಗಳನ್ನು ವಿತರಿಸಲು ₹153.91 ಕೋಟಿ ಅನುದಾನ ನೀಡಲು ಒಪ್ಪಿಗೆ ನೀಡಲಾಯಿತು. ಎಲ್ಲ ಸರ್ಕಾರಿ ಮತ್ತು ಅನುದಾನಿತ ಶಾಲಾ ವಿದ್ಯಾರ್ಥಿಗಳಿಗೆ ಹಾಗೂ 74 ಆದರ್ಶ ಶಾಲೆಗಳ(6 ನೇ ತರಗತಿಯಿಂದ 10 ನೇ ತರಗತಿ) ವಿದ್ಯಾರ್ಥಿಗಳಿಗೆ ಉಚಿತ ಪಠ್ಯ ಪುಸ್ತಕ ವಿತರಿಸಲಾಗುವುದು.

ಮಸೂದೆ ಮಂಡನೆಗೆ ಒಪ್ಪಿಗೆ:

* ಕರ್ನಾಟಕ ಸಹಕಾರಿ ಸೊಸೈಟಿಗಳ(ತಿದ್ದುಪಡಿ) ಮಸೂದೆ 2021 ಮತ್ತು ಕರ್ನಾಟಕ ಸೌಹಾರ್ದ ಸಹಕಾರಿ
(ತಿದ್ದುಪಡಿ) ಮಸೂದೆ

* ಕರ್ನಾಟಕ ವಿತ್ತೀಯ ಹೊಣೆಗಾರಿಕೆ ತಿದ್ದುಪಡಿ ಮಸೂದೆ 2021

* ಕರ್ನಾಟಕ ಸಾರ್ವಜನಿಕ ಸಂಗ್ರಹಣೆಯಲ್ಲಿ ಪಾರದರ್ಶಕ ತಿದ್ದುಪಡಿ ಮಸೂದೆ 2021

* ಕರ್ನಾಟಕ ರಾಜ್ಯ ಕೈಗಾರಿಕಾ ಭದ್ರತಾಪಡೆ ವೃಂದ ನೇಮಕ ನಿಯಮ 2021

* ಕರ್ನಾಟಕ ಕಾರಾಗೃಹ ಅಭಿವೃದ್ಧಿ ಮಂಡಳಿ ಮಸೂದೆ 2021

* ಕರ್ನಾಟಕ ನಗರ ಮತ್ತು ಪಟ್ಟಣ ಯೋಜನೆ 3ನೇ ತಿದ್ದುಪಡಿ ಮಸೂದೆ

ಪ್ರಮುಖ ನಿರ್ಣಯಗಳು

* ಲೋಕಾಯುಕ್ತಕ್ಕೆ ಗುತ್ತಿಗೆ ಆಧಾರದಲ್ಲಿ 12 ಹಿರಿಯ ಸಹಾಯಕ ಪಬ್ಲಿಕ್ ಪ್ರಾಸಿಕ್ಯೂಟರ್ ನೇಮಕ

* ರಾಣೆಬೆನ್ನೂರಿನಲ್ಲಿ ತಾಲ್ಲೂಕು ಮಟ್ಟದ ಆಸ್ಪತ್ರೆಯನ್ನು 50 ಹಾಸಿಗೆಗಳ ಸಾಮರ್ಥ್ಯದಿಂದ 100 ಹಾಸಿಗೆಗಳ ಸಾಮರ್ಥ್ಯಕ್ಕೆ ಮೇಲ್ದರ್ಜೆಗೇರಿಸಲು ಪರಿಷ್ಕೃತ ಅಂದಾಜು ₹10.84 ಕೋಟಿಗೆ ಅನುಮೋದನೆ.

* ಕಲ್ಯಾಣ ಕರ್ನಾಟಕ ಪ್ರದೇಶದಲ್ಲಿ ವಿಶೇಷ ನೇಮಕಾತಿಗೆ ಸಂಬಂಧಿಸಿದಂತೆ ಕರ್ನಾಟಕ ಆರೋಗ್ಯ ಮತ್ತು ಕುಟುಂಬ ಕಲ್ಯಾಣಗಳ ಸೇವೆಗಳ ನೇಮಕಾತಿ ವಿಶೇಷ ಕಾನೂನು 2020 ಕ್ಕೆ ಅನುಮೋದನೆ

* ಬೆಳಗಾವಿ ಜಿಲ್ಲೆ ಅಥಣಿ ತಾಲ್ಲೂಕಿನ ಸತ್ತಿ ಮತ್ತು ಇತರ ಎಂಟು ಗ್ರಾಮಗಳಿಗೆ ಬಹುಗ್ರಾಮ ಯೋಜನೆ ಜಾರಿಗೆ ₹45.39 ಕೋಟಿ ಅನುಮೋದನೆ. ಇದಕ್ಕೆ ಕೇಂದ್ರದ ಜಲ ಜೀವನ್ ಮಿಷನ್ ಮತ್ತು ನಬಾರ್ಡ್ನಿಂದ ನೆರವು ಸಿಗಲಿದೆ.

* ಬೆಳಗಾವಿ ಮತ್ತು ಮಂಗಳೂರಿನಲ್ಲಿ ₹31.66 ಕೋಟಿ ವೆಚ್ಚದಲ್ಲಿ ಕರ್ನಾಟಕ ಜರ್ಮನ್ ತಂತ್ರಜ್ಞಾನ ತರಬೇತಿ ಸಂಸ್ಥೆ ಕಟ್ಟಡ ನಿರ್ಮಾಣಕ್ಕೆ ಅನುಮೋದನೆ.

* ಮಂಗಳೂರು ಮಹಾನಗರ ಪಾಲಿಕೆ ವ್ಯಾಪ್ತಿಯಲ್ಲಿ ಕದ್ರಿ ಮಾರುಕಟ್ಟೆ ಸಂಕೀರ್ಣ ನಿರ್ಮಾಣಕ್ಕೆ ₹12.30 ಕೋಟಿ ನೀಡಲು ಅನುಮೋದನೆ

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.