ಮಂಗಳವಾರ, 14 ಮೇ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ದೆಹಲಿಯಲ್ಲಿ ಸಂಪುಟ ಸರ್ಕಸ್‌: ಬೆಂಬಲಿಗರಿಗೆ ಸಚಿವ ಸ್ಥಾನ ಕೊಡಿಸಲು ಸಿದ್ದು, ಡಿಕೆ ಲಾಬಿ

Published 25 ಮೇ 2023, 7:30 IST
Last Updated 25 ಮೇ 2023, 7:30 IST
ಅಕ್ಷರ ಗಾತ್ರ

ನವದೆಹಲಿ: ಸಚಿವ ಸಂಪುಟ ವಿಸ್ತರಣೆ ಸಂಬಂಧ ದೆಹಲಿಗೆ ತೆರಳಿರುವ ಮುಖ್ಯಮಂತ್ರಿ ಸಿದ್ದರಾಮಯ್ಯ ಹಾಗೂ ಉಪಮುಖ್ಯಮಂತ್ರಿ ಡಿ.ಕೆ ಶಿವಕುಮಾರ್ ಹೈಕಮಾಂಡ್‌ ನಾಯಕರೊಂದಿಗೆ ಸಭೆ ನಡೆಸಿದ್ದಾರೆ.

ಸಭೆಯಲ್ಲಿ ಮಲ್ಲಿಕಾರ್ಜುನ ಖರ್ಗೆ, ಕಾಂಗ್ರೆಸ್‌ ಕಾರ್ಯದರ್ಶಿ ಕೆ.ಸಿ ವೇಣುಗೋಪಾಲ್ ಹಾಗೂ ಕರ್ನಾಟಕ ಕಾಂಗ್ರೆಸ್‌ ಉಸ್ತುವಾರಿ ರಣದೀಪ್‌ ಸಿಂಗ್‌ ಸುರ್ಜೇವಾಲ ಇದ್ದರು. ಇಂದು ಬೆಳಿಗ್ಗೆ ಸಿದ್ದರಾಮಯ್ಯ ಹಾಗೂ ಡಿ.ಕೆ ಶಿವಕುಮಾರ್‌ ಅವರು ವೇಣುಗೋಪಾಲ್‌ ಅವರ ಜತೆ ಮಾತುಕತೆ ನಡೆಸಿದ ಬಳಿಕ ಖರ್ಗೆ ಅವರ ಜತೆ ಸಭೆ ನಡೆಯಿತು. ಯಾರಿಗೆಲ್ಲಾ ಸಚಿವ ಸ್ಥಾನ ಕೊಡಬೇಕು, ಯಾವ ಖಾತೆ ನೀಡಬೇಕು ಎನ್ನುವುದು ಇಂದು ನಿರ್ಧಾರವಾಗಲಿದೆ ಎಂದು ಮೂಲಗಳು ತಿಳಿಸಿವೆ.

ಇಂದು ಬೆಳಿಗ್ಗೆ ಸಿದ್ದರಾಮಯ್ಯ ಹಾಗೂ ಡಿ.ಕೆ ಶಿವಕುಮಾರ್‌ ಅವರ ಆಪ್ತರು ಕರ್ನಾಟಕದ ಭವನದಲ್ಲಿ ಇಬ್ಬರೂ ನಾಯಕರನ್ನು ಭೇಟಿ ಮಾಡಿ ಮಾತುಕತೆ ನಡೆಸಿದರು.

ಉಭಯ ನಾಯಕರು ತಮ್ಮ ಆಪ್ತರನ್ನು ಸಚಿವರನ್ನಾಗಿ ಮಾಡಲು ಹಾಗೂ ಉತ್ತಮ ಖಾತೆ ಹಂಚಲು ಒತ್ತಡ ಹೇರುತ್ತಿದ್ದಾರೆ. ಹೀಗಾಗಿ ಖಾತೆ ಹಂಚಿಕೆ ವಿಳಂಬವಾಗುತ್ತಿದೆ ಎನ್ನಲಾಗಿದೆ.

ಸದ್ಯ 20 ಮಂದಿಯನ್ನು ಸಂಪುಟಕ್ಕೆ ಸೇರಿಸಿಕೊಂಡು, ಉಳಿದ ಸ್ಥಾನಗಳನ್ನು ಮತ್ತೆ ಭರ್ತಿ ಮಾಡಲಾಗುತ್ತದೆ ಎಂದು ಗೊತ್ತಾಗಿದೆ.

ಸಚಿವ ಸ್ಥಾನದ ಮೇಲೆ ಕಣ್ಣಿಟ್ಟಿರುವ ಲಕ್ಷ್ಮಣ ಸವದಿ, ಕೃಷ್ಣಭೈರೇಗೌಡ, ದಿನೇಶ್‌ ಗುಂಡೂರಾವ್‌ ಹಾಗೂ ಲಕ್ಷ್ಮೀ ಹೆಬ್ಬಾಳಕರ ಈಗಾಗಲೇ ದೆಹಲಿಯಲ್ಲಿದ್ದು, ಹೈಕಮಾಂಡ್‌ ನಾಯಕರೊಂದಿಗೆ ಮಾತುಕತೆ ನಡೆಸಿದ್ದಾರೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT