ಕಲಬುರಗಿ: ನಿಯೋಜಿತ ಮುಖ್ಯಮಂತ್ರಿ ಡಿ. ಕೆ. ಶಿವಕುಮಾರ್ ನೇತೃತ್ವದಲ್ಲಿ ಕರ್ನಾಟಕದಲ್ಲಿ ಹೊಸ ಸಚಿವ ಸಂಪುಟ ರಚನೆ ಕುರಿತು ಯಾವುದೇ ಪ್ರಸ್ತಾವನೆ ಈವರೆಗೆ ಕೇಂದ್ರ ನಾಯಕತ್ವದ ಮುಂದೆ ಬಂದಿಲ್ಲ ಎಂದು ಕಾಂಗ್ರೆಸ್ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಭಾನುವಾರ ಹೇಳಿದ್ದಾರೆ.

ಜೂನ್ 3ರಂದು ನಡೆಯಲಿರುವ ಪ್ರಮಾಣವಚನ ಸ್ವೀಕಾರ ಸಮಾರಂಭದ ನಂತರ ಸಮಾಲೋಚನೆ ನಡೆಸಿ, ಸಚಿವರು, ಉಪಮುಖ್ಯಮಂತ್ರಿಗಳು ಮತ್ತು ಪ್ರಮುಖ ನೇಮಕಾತಿಗಳ ಕುರಿತು ನಿರ್ಧಾರ ತೆಗೆದುಕೊಳ್ಳಲಾಗುವುದು ಎಂದು ಅವರು ಹೇಳಿದ್ದಾರೆ.

ಸರ್ಕಾರ ರಚನೆ ಪ್ರಕ್ರಿಯೆಯ ವಿವಿಧ ಅಂಶಗಳ ಕುರಿತು ಚರ್ಚೆಗಳು ನಡೆಯುತ್ತಿವೆ. ಆದರೆ, ಇಲ್ಲಿಯವರೆಗೆ ಯಾವುದೇ ಅಧಿಕೃತ ಪ್ರಸ್ತಾವನೆ ಪಕ್ಷದ ನಾಯಕತ್ವದ ಮುಂದೆ ಇಡಲಾಗಿಲ್ಲ ಎಂದು ಹೇಳಿದ್ದಾರೆ.

ಪ್ರಮಾಣವಚನ ಸಮಾರಂಭದ ನಂತರವೇ ಪಕ್ಷಕ್ಕೆ ಸ್ಪಷ್ಟತೆ ಸಿಗಲಿದೆ ಎಂದ ಖರ್ಗೆ, ಈ ಎಲ್ಲಾ ವಿಷಯಗಳು ಚರ್ಚೆಯಲ್ಲಿವೆ. ಜೂನ್ 3ರ ನಂತರ ನಮಗೆ ತಿಳಿಯುತ್ತದೆ ಎಂದು ಸ್ಪಷ್ಟಪಡಿಸಿದ್ದಾರೆ.

ಸಚಿವ ಸಂಪುಟವನ್ನು ಹಂತ ಹಂತವಾಗಿ ವಿಸ್ತರಿಸುವ ಸಾಧ್ಯತೆಯನ್ನು ಉಲ್ಲೇಖಿಸಿದ ಅವರು, ಮೊದಲು ಒಂದು ಹಂತ ಪೂರ್ಣಗೊಳ್ಳಬಹುದು. ನಂತರ, 15 ದಿನಗಳು ಅಥವಾ ಒಂದು ತಿಂಗಳ ನಂತರ, ಮತ್ತೊಂದು ಹಂತ ನಡೆಯಲಿದೆ ಎಂದು ಹೇಳಿದ್ದಾರೆ.

ಸಂಪುಟಕ್ಕೆ ಯಾ ರನ್ನು ಸೇರ್ಪಡೆ ಮಾಡಿಕೊಳ್ಳಬೇಕು ಎಂಬ ಬಗ್ಗೆ ಚರ್ಚೆಗಳು ನಡೆಯುತ್ತಿವೆ. ಅಂತಿಮ ನಿರ್ಧಾರ ಇನ್ನೂ ಪಕ್ಷದ ನಾಯಕತ್ವದ ಮುಂದೆ ಬಂದಿಲ್ಲ ಎಂದಿದ್ದಾರೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.