ಬೆಂಗಳೂರು: ಸಾಮಾಜಿಕ ಮತ್ತು ಶೈಕ್ಷಣಿಕ ಸಮೀಕ್ಷೆ–2025ರ (ಜಾತಿವಾರು ಸಮೀಕ್ಷೆ) ಸುಳ್ಳು ಅಂಕಿಅಂಶಗಳನ್ನು ಸಾಮಾಜಿಕ ಜಾಲತಾಣಗಳಲ್ಲಿ ಹಂಚಿಕೊಳ್ಳುತ್ತಿರುವ ಕಿಡಿಗೇಡಿಗಳ ವಿರುದ್ಧ ಕ್ರಿಮಿನಲ್ ಪ್ರಕರಣ ದಾಖಲಿಸುವಂತೆ ಕೋರಿ ಕರ್ನಾಟಕ ರಾಜ್ಯ ಹಿಂದುಳಿದ ವರ್ಗಗಳ ಆಯೋಗದ ಸದಸ್ಯ ಕಾರ್ಯದರ್ಶಿ ಕೆ.ಎ.ದಯಾನಂದ್ ಅವರು ಹೈಗ್ರೌಂಡ್ಸ್ ಠಾಣೆಗೆ ದೂರು ನೀಡಿದ್ದಾರೆ.

ರಾಜ್ಯದಲ್ಲಿ ಸೆ.22ರಿಂದ ಅ.31ರವರೆಗೆ ಸಮೀಕ್ಷೆ ನಡೆಸಲಾಗಿತ್ತು. ಸಮೀಕ್ಷೆಯಲ್ಲಿ ಭಾಗವಹಿಸದ ಜನರಿಗೆ ಆನ್ಲೈನ್ ಮೂಲಕ ಭಾಗವಹಿಸಲು ಇದೇ ನ.30ರವರೆಗೆ ಅವಕಾಶ ನೀಡಲಾಗಿದ್ದು, ಸಮೀಕ್ಷಾ ಕಾರ್ಯ ಇನ್ನೂ ಪ್ರಗತಿಯಲ್ಲಿದೆ. ಹೈಕೋರ್ಟ್ನಲ್ಲಿ ಹಲವು ಪ್ರಕರಣಗಳು ವಿಚಾರಣೆ ಹಂತದಲ್ಲಿವೆ. ಮಾಹಿತಿ ಸೋರಿಕೆಯಾಗದಂತೆ ಸಲ್ಲಿಸಿದ ಅಫಿಡವಿಟ್ ಪ್ರಕಾರ ಗೋಪ್ಯತೆ ಕಾಪಾಡಲಾಗಿದೆ. ಆದರೆ, ಕೆಲ ವಾಟ್ಸ್ಆ್ಯಪ್ ಗ್ರೂಪ್ಗಳಲ್ಲಿ ‘ಕರ್ನಾಟಕದ ಜಾತಿ ಗಣತಿ ವರದಿ’ ಎಂಬ ಶೀರ್ಷಿಕೆ ಅಡಿ ವಿವಿಧ ಜಾತಿಗಳ ಒಟ್ಟು ಜನಸಂಖ್ಯೆಯನ್ನು ನಮೂದಿಸಿ ಹಂಚಿಕೊಂಡಿದ್ದಾರೆ. ಈ ಕುರಿತು ಪ್ರಕರಣ ದಾಖಲಿಸಿಕೊಂಡು ತನಿಖೆ ನಡೆಸಬೇಕು ಎಂದು ಕೋರಿದ್ದಾರೆ.

‘ಆಯೋಗದ ಗಮನಕ್ಕೆ ಬಂದ ಮೊದಲ ಮೊಬೈಲ್ ನಂಬರ್ ಚಿಕ್ಕಮಗಳೂರಿನ ಶಿವ ಅವರಿಗೆ ಸೇರಿದ್ದು, ಅವರನ್ನು ತನಿಖೆಗೆ ಒಳಪಡಿಸಬೇಕು. ಈ ಕೃತ್ಯದ ಹಿಂದೆ ಇರುವವರನ್ನು ಪತ್ತೆ ಮಾಡಬೇಕು. ಸಾರ್ವಜನಿಕರಲ್ಲಿ ಗೊಂದಲ ಮೂಡಿಸುವ ಇಂತಹ ಕಿಡಿಗೇಡಿಗಳ ವಿರುದ್ಧ ಕಾನೂನು ಕ್ರಮ ಕೈಗೊಳ್ಳಬೇಕು’ ಎಂದು ಮನವಿ ಮಾಡಿದ್ದಾರೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.