ಬೆಂಗಳೂರು: ರಾಜ್ಯದಲ್ಲಿ ಸೆ. 22ರಿಂದ ಸಾಮಾಜಿಕ ಮತ್ತು ಶೈಕ್ಷಣಿಕ ಸಮೀಕ್ಷೆ (ಜಾತಿವಾರು ಸಮೀಕ್ಷೆ) ನಡೆಯುತ್ತಿದ್ದು, ಶನಿವಾರದವರೆಗೆ (ಸೆ. 27) 12.87 ಲಕ್ಷ ಮನೆಗಳಿಂದ ದತ್ತಾಂಶ ಸಂಗ್ರಹಿಸಲಾಗಿದೆ.

ಶನಿವಾರ ಸಂಜೆವರೆಗೆ 1.47 ಕೋಟಿ ಮನೆಗಳ ಸಮೀಕ್ಷೆಯ ಗುರಿ ನಿಗದಿಪಡಿಸಲಾಗಿತ್ತು. ಆದರೆ, ಆರಂಭದಲ್ಲಿ 2–3 ದಿನ ಸಮೀಕ್ಷೆಯಲ್ಲಿ ಯಾವುದೇ ಪ್ರಗತಿ ಕಂಡಿರಲಿಲ್ಲ. ಕಳೆದ ಎರಡು ದಿನಗಳಿಂದ ಚುರುಕುಗೊಂಡಿದ್ದು, ಶನಿವಾರ ಒಂದೇ ದಿನ 8.19 ಲಕ್ಷ ಮನೆಗಳಲ್ಲಿ ಸಮೀಕ್ಷೆ ನಡೆದಿದೆ ಎಂದು ಹಿಂದುಳಿದ ವರ್ಗಗಳ ಆಯೋಗ ತಿಳಿಸಿದೆ.

ಅ. 7ರವರೆಗೆ ಸಮೀಕ್ಷೆ ನಡೆಯಲಿದೆ. ಯಾವುದೇ ಕಾರಣಕ್ಕೂ ಅಂತಿಮ ಗಡುವನ್ನು ವಿಸ್ತರಿಸುವುದಿಲ್ಲ ಎಂದು ಸ್ಪಷ್ಟಪಡಿಸಿರುವ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ದತ್ತಾಂಶ ಸಂಗ್ರಹ ಕಾರ್ಯ ಚುರುಕುಗೊಳಿಸುವಂತೆ ಅಧಿಕಾರಿಗಳಿಗೆ ನಿರ್ದೇಶನ ನೀಡಿದ್ದರು.

ಸಮೀಕ್ಷೆಯ ಅವಧಿಯಲ್ಲಿ ಸುಮಾರು 1.75 ಲಕ್ಷ ಸಮೀಕ್ಷಕರು (ಹೆಚ್ಚಾಗಿ ಸರ್ಕಾರಿ ಶಾಲಾ ಶಿಕ್ಷಕರು) ರಾಜ್ಯದ 2 ಕೋಟಿ ಕುಟುಂಬಗಳ ಅಂದಾಜು 7 ಕೋಟಿ ಜನರ ದತ್ತಾಂಶ ಸಂಗ್ರಹಿಸುವ ಗುರಿ ಹೊಂದಿದ್ದಾರೆ. ಈ ಉದ್ದೇಶಕ್ಕೆ ರಾಜ್ಯ ಸರ್ಕಾರ ₹ 420 ಕೋಟಿ ಅನುದಾನ ಮೀಸಲಿಟ್ಟಿದೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.