ಬೆಂಗಳೂರು: ‘ಕೇಂದ್ರ ಸರ್ಕಾರ ರಾಜ್ಯಕ್ಕೆ ನೀಡಬೇಕಿರುವ ನ್ಯಾಯಯುತ ಆರ್ಥಿಕ ಪಾಲಿನ ಬಾಕಿ ಉಳಿಸಿಕೊಂಡಿರುವುದು ಬಜೆಟ್ ಮೇಲೂ ಪರಿಣಾಮ ಬೀರಿದೆ. ರಾಜ್ಯವನ್ನು ಪ್ರತಿನಿಧಿಸುವ ಕೇಂದ್ರ ಸಚಿವರನ್ನೂ ಒಳಗೊಂಡ ಸರ್ವಪಕ್ಷ ನಿಯೋಗ ತೆರಳಿ, ಒತ್ತಡ ಹಾಕಬೇಕು’ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿದರು.

ಬಜೆಟ್ ಮೇಲಿನ ಚರ್ಚೆಗೆ ವಿಧಾನ ಪರಿಷತ್ನಲ್ಲಿ ಗುರುವಾರ ಅವರು ಉತ್ತರ ನೀಡಿದರು.

‘ಗ್ಯಾರಂಟಿ ಯೋಜನೆಗಳನ್ನು ಬಿಟ್ಟರೆ ಯಾವುದೇ ಜನಪರ ಕಾರ್ಯಕ್ರಮ ಗಳನ್ನು ನೀಡಿಲ್ಲ. ಉತ್ತರ ತೃಪ್ತಿ ತಂದಿಲ್ಲ’ ಎಂದು ಆರೋಪಿಸಿ ವಿರೋಧ ಪಕ್ಷದ ನಾಯಕ ಛಲವಾದಿ ನಾರಾಯಣಸ್ವಾಮಿ ನೇತೃತ್ವದಲ್ಲಿ ಬಿಜೆಪಿ–ಜೆಡಿಎಸ್ ಸದಸ್ಯರು ಸಭಾತ್ಯಾಗ ಮಾಡಿದರು.

ವಿಪಕ್ಷ ಸದಸ್ಯರ ಅನುಪಸ್ಥಿತಿ ಯಲ್ಲಿಯೇ, ಧನ ವಿನಿಯೋಗದ ಮಸೂದೆಗಳಿಗೆ ಸರ್ಕಾರ ಅನುಮೋದನೆ ಪಡೆಯಿತು.

ಇದಕ್ಕೆ ಮೊದಲು ಮಾತನಾಡಿದ ಸಿದ್ದರಾಮಯ್ಯ ಅವರು, ‘ಕೇಂದ್ರ ಸರ್ಕಾರ ತೆರಿಗೆ, ಅನುದಾನ, ಯೋಜನೆಗಳ ಪಾಲು ಸೇರಿದಂತೆ ಎಲ್ಲ ರೀತಿಯಲ್ಲೂ ರಾಜ್ಯಕ್ಕೆ ಅನ್ಯಾಯ ಮಾಡಿದೆ. ಜಿಎಸ್ಟಿ ಪರಿಷ್ಕರಣೆಯಿಂದ ₹10 ಸಾವಿರ ಕೋಟಿ ನಷ್ಟವಾಗಿದೆ. 15ನೇ ಹಣಕಾಸು ಶಿಫಾರಸು ಮಾಡಿದ ₹11,495 ಕೋಟಿ, ಭದ್ರ ಮೇಲ್ಡಂಡೆ ಯೋಜನೆಗೆ 2023-24ನೇ ಸಾಲಿನ ಬಜೆಟ್ನಲ್ಲಿ ನೀಡಬೇಕಿರುವ ₹5,300 ಕೋಟಿ, ಜಲ ಜೀವನ್ ಮಿಷನ್ ಬಾಕಿ ₹15,000 ಕೋಟಿ ಸೇರಿದಂತೆ ಬಾಕಿ ಇದೆ’ ಎಂದರು.

‘ಎಲ್ಲ ಬಾಕಿ ಮೊತ್ತ ನೀಡುವಂತೆ ಕೇಂದ್ರ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಅವರನ್ನು ಕೊಡಮ್ಮ ತಾಯಿ ಎಂದು ಬೇಡಿಕೊಂಡರೂ ಸ್ಪಂದಿಸಿಲ್ಲ. ಹಲವು ಬಾರಿ ದೆಹಲಿಗೆ ತೆರಳಿ ದಮ್ಮಯ್ಯ ಎಂದರೂ ಹಣ ಬಿಡುಗಡೆ ಮಾಡಿಲ್ಲ. ರಾಜ್ಯದಲ್ಲಿ ಬಿಜೆಪಿ ಸರ್ಕಾರ ಇದ್ದಾಗ, ಭದ್ರಾ ಯೋಜನೆ ಯನ್ನು ರಾಷ್ಟ್ರೀಯ ಯೋಜನೆ ಎಂದು ಘೋಷಿಸುವುದಾಗಿ ಕೇಂದ್ರ ಸರ್ಕಾರ ಭರವಸೆ ನೀಡಿತ್ತು. ಈ ಯಾವ ಘೋಷಣೆಗಳು ಫಲ ಕಾಣಲಿಲ್ಲ. ರಾಜ್ಯಕ್ಕಾಗಿರುವ ಅನ್ಯಾಯವನ್ನು ರಾಜ್ಯ ಬಿಜೆಪಿ ನಾಯಕರು ಪ್ರಶ್ನಿಸಬೇಕು. ಈಗಲಾದರೂ ಸರ್ವಪಕ್ಷದ ನಿಯೋಗದ ಜತೆ ಬರಬೇಕು. ರಾಜ್ಯದ ಪರವಾಗಿ ಕೇಂದ್ರದ ಬಳಿ ಧ್ವನಿ ಎತ್ತಬೇಕು’ ಎಂದು ಹೇಳಿದರು.

‘ಕೃಷ್ಣಾ ಮೇಲ್ದಂಡೆ ಯೋಜನೆಗೆ ಕೇಂದ್ರ ಅಧಿಸೂಚನೆಯನ್ನೇ ಹೊರಡಿಸಿಲ್ಲ. ಇದರ ಜಾರಿಗೆ ಬಿಜೆಪಿ ಸಂಸದರೂ ಪ್ರಯತ್ನಿಸಬೇಕು. ಯೋಜನೆಯ ಭೂಸ್ವಾಧೀನಕ್ಕೆ ₹3,000 ಕೋಟಿ ಇಡಲಾಗಿದೆ. ಬಿಜೆಪಿ ಆಡಳಿತ ದಲ್ಲಿದ್ದಾಗ ಭೂ ಪರಿಹಾರ ನೀಡಬಹು ದಾಗಿತ್ತು. ನೀರಾವರಿ ಜಮೀನಿಗೆ ₹40 ಲಕ್ಷ ಹಾಗೂ ಖುಷ್ಕಿ ಜಮೀನಿಗೆ ₹30 ಲಕ್ಷ ನಿಗದಿ ಮಾಡಿದ್ದೇವೆ. ಪೂರಕ ಬಜೆಟ್ನಲ್ಲಿ ಮತ್ತಷ್ಟು ಅನುದಾನ ನೀಡಲಾಗುವುದು. ಮಹದಾಯಿ, ಮೇಕೆದಾಟು ಯೋಜನೆಗೂ ಕೇಂದ್ರ ಸರ್ಕಾರದ ಅನುಮತಿ ಸಿಕ್ಕಿಲ್ಲ’ ಎಂದು ದೂರಿದರು.

‘ಬಿಜೆಪಿ ಶ್ರೀಮಂತರ ಪರವಾಗಿದೆ. ಬಡವರ ವಿರೋಧಿ. ಅದಕ್ಕಾಗಿಯೇ ಬಡವರು, ಮಹಿಳೆಯರ ಸಬಲೀಕರಣದ ಗ್ಯಾರಂಟಿ ಯೋಜನೆಗಳನ್ನು ವಿರೋಧಿಸುತ್ತಿದೆ. ಮಹಿಳಾ ಪರ ಕಾರ್ಯಕ್ರಮಗಳನ್ನು ವಿರೋಧಿಸುವುದು ಮನುವಾದ’ ಎಂದು ಸಿದ್ದರಾಮಯ್ಯ ಟೀಕಿಸಿದರು.

ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ
260327-51-1894708387

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.