ಬೆಂಗಳೂರು: ರಾಷ್ಟ್ರೀಯ ಅರ್ಹತಾ ಪ್ರವೇಶ ಪರೀಕ್ಷೆಯನ್ನು ರದ್ದು ಮಾಡಿದ್ದರಿಂದ, ಎಂಜಿನಿಯರಿಂಗ್ ಸೇರಿದಂತೆ ವಿವಿಧ ವೃತ್ತಿ ಶಿಕ್ಷಣ ಕೋರ್ಸ್ಗಳ ಸೀಟು ಹಂಚಿಕೆಯೂ ವಿಳಂಬವಾಗುವ ಸಾಧ್ಯತೆ ಇದೆ.

2026–27ನೇ ಸಾಲಿನಲ್ಲಿ ನೀಟ್ಗೆ ಕರ್ನಾಟಕದ 1.45 ಲಕ್ಷ ವಿದ್ಯಾರ್ಥಿಗಳು ಸೇರಿದಂತೆ ದೇಶದಲ್ಲಿ 22.05 ಲಕ್ಷ ವಿದ್ಯಾರ್ಥಿಗಳು ಪರೀಕ್ಷೆಗೆ ಹಾಜರಾಗಿದ್ದರು. ವೈದ್ಯಕೀಯದಲ್ಲಿ ರಾಜ್ಯ ಕೋಟಾದ 10,559 ಸೀಟುಗಳು ಲಭ್ಯವಿದ್ದು, ನೀಟ್ ಅರ್ಹತಾ ಪಟ್ಟಿಯ ಆಧಾರದಲ್ಲಿ ಈ ಸೀಟುಗಳನ್ನು ಕರ್ನಾಟಕ ಪರೀಕ್ಷಾ ಪ್ರಾಧಿಕಾರ (ಕೆಇಎ) ಹಂಚಿಕೆ ಮಾಡುತ್ತದೆ. ವೈದ್ಯಕೀಯ ಸೀಟುಗಳ ಮೊದಲ ಸುತ್ತಿನ ಸೀಟು ಹಂಚಿಕೆಯ ನಂತರ ಸಿಇಟಿ ಅರ್ಹತಾ ಪಟ್ಟಿಯ ಪ್ರಕಾರ ಎಂಜಿನಿಯರಿಂಗ್ ಸೇರಿದಂತೆ ವಿವಿಧ ವೃತ್ತಿ ಶಿಕ್ಷಣ ಕೋರ್ಸ್ಗಳ ಪ್ರವೇಶಕ್ಕೆ ಕೌನ್ಸೆಲಿಂಗ್ ನಡೆಯುತ್ತದೆ.

ನೀಟ್ ಫಲಿತಾಂಶದ ಪಟ್ಟಿಯ ಆಧಾರದಲ್ಲಿ ವೈದ್ಯಕೀಯ ಕೌನ್ಸೆಲಿಂಗ್ ಪರಿಷತ್ತು (ಎಂಸಿಸಿ) ದೇಶದಲ್ಲಿ ಲಭ್ಯವಿರುವ ವೈದ್ಯಕೀಯ ಮತ್ತು ದಂತ ವೈದ್ಯಕೀಯ ಕೋರ್ಸ್ಗಳ ಒಟ್ಟು ಸೀಟುಗಳಲ್ಲಿ ಶೇ 15ರಷ್ಟು ಹಂಚಿಕೆ ಮಾಡುತ್ತದೆ. ಎನ್ಟಿಎ ಪರೀಕ್ಷೆ ನಡೆಸಿ 90 ದಿನಗಳು ಕಳೆದರೂ ಮೊದಲ ಸುತ್ತಿನ ಸೀಟು ಹಂಚಿಕೆ ಪ್ರಕ್ರಿಯೆಯನ್ನೇ ಎಂಸಿಸಿ ಆರಂಭಿಸಿರಲಿಲ್ಲ. ವಿಳಂಬದಿಂದಾಗಿ ಎರಡನೇ ಮತ್ತು ಕೊನೆಯ ಸುತ್ತನಲ್ಲಿ ಸೀಟು ಪಡೆದ ವಿದ್ಯಾರ್ಥಿಗಳು ಸಂಕಷ್ಟ ಅನುಭವಿಸಿದ್ದರು. ಈ ಬಾರಿ ನೀಟ್ ರದ್ದಾಗಿರುವುದರಿಂದ ಸಿಇಟಿ ಬರೆದಿದ್ದ ರಾಜ್ಯದ 3.31 ಲಕ್ಷ ವಿದ್ಯಾರ್ಥಿಗಳು ಸಂಕಷ್ಟಕ್ಕೆ ಸಿಲುಕಿದ್ದಾರೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.