ಬೆಂಗಳೂರು: ‘ವೈದ್ಯಕೀಯ ಕೋರ್ಸ್ಗಳ ಪ್ರವೇಶಕ್ಕೆ ರಾಷ್ಟ್ರೀಯ ಪರೀಕ್ಷಾ ಸಂಸ್ಥೆ ನಡೆಸುವ ರಾಷ್ಟ್ರೀಯ ಅರ್ಹತಾ ಪ್ರವೇಶ ಪರೀಕ್ಷೆ (ನೀಟ್) ಫಲಿತಾಂಶಕ್ಕೆ ಕಾಯದೆ ಎಂಜಿನಿಯರಿಂಗ್ ಸೇರಿದಂತೆ ವಿವಿಧ ವೃತ್ತಿಶಿಕ್ಷಣ ಕೋರ್ಸ್ಗಳಿಗೆ ಸೀಟು ಹಂಚಿಕೆ ಮಾಡುವ ಕುರಿತು ಚಿಂತನೆ ನಡೆದಿದೆ’ ಎಂದು ಉನ್ನತ ಶಿಕ್ಷಣ ಸಚಿವ ಎಂ.ಸಿ.ಸುಧಾಕರ್ ಹೇಳಿದರು.

ಮಲ್ಲೇಶ್ವರದ ಸಿಇಟಿ ಪರೀಕ್ಷಾ ಕೇಂದ್ರಕ್ಕೆ ಶುಕ್ರವಾರ ಭೇಟಿ ನೀಡಿದ ಅವರು ಸುದ್ದಿಗಾರರ ಜತೆ ಮಾತನಾಡಿ ಈ ವಿಷಯ ತಿಳಿಸಿದರು.

‘ಕಳೆದ ವರ್ಷ ನೀಟ್ ಫಲಿತಾಂಶ ಹಾಗೂ ಸೀಟು ಹಂಚಿಕೆ ಪ್ರಕ್ರಿಯೆ ಸಾಕಷ್ಟು ವಿಳಂಬವಾಯಿತು. ಇದರಿಂದ ಹಲವು ವಿದ್ಯಾರ್ಥಿಗಳಿಗೆ ತೊಂದರೆಯಾಗಿದೆ. ಇದುವರೆಗೂ ನೀಟ್ ಪ್ರಕ್ರಿಯೆ ಆರಂಭವಾದ ನಂತರವೇ ಸಿಇಟಿ ಸೀಟು ಹಂಚಿಕೆ ಪ್ರಕ್ರಿಯೆ ಆರಂಭಿಸಲಾಗುತ್ತಿತ್ತು. ಈ ಬಾರಿ ಫಲಿತಾಂಶಕ್ಕೂ ಮೊದಲೇ ಆರಂಭಿಸಿದರೆ ಸಿಇಟಿ ವಿದ್ಯಾರ್ಥಿಗಳಿಗೆ ಅನುಕೂಲವಾಗಲಿದೆ’ ಎಂದರು.

‘ನೀಟ್ ಫಲಿತಾಂಶಕ್ಕೂ ಮೊದಲು ಸಿಇಟಿ ಸೀಟು ಹಂಚಿಕೆ ಮಾಡಿದರೆ ವೈದ್ಯಕೀಯ ಪ್ರವೇಶ ಸಾಧ್ಯವಾಗದ ಕೆಲ ಪ್ರತಿಭಾವಂತರಿಗೆ ಪ್ರತಿಷ್ಠಿತ ಕಾಲೇಜುಗಳಲ್ಲಿ ಪ್ರವೇಶ ಸಾಧ್ಯವಾಗದು. ಈ ಎಲ್ಲ ವಿಚಾರಗಳನ್ನೂ ಚರ್ಚಿಸಿ, ಅಂತಿಮ ನಿರ್ಧಾರ ತೆಗೆದುಕೊಳ್ಳಲಾಗುವುದು’ ಎಂದು ಹೇಳಿದರು.

‘ಎಂಜಿನಿಯರಿಂಗ್ ಕಾಲೇಜುಗಳು ಶೇ 20ರಷ್ಟು ಶುಲ್ಕ ಹೆಚ್ಚಳಕ್ಕೆ ಬೇಡಿಕೆ ಸಲ್ಲಿಸಿವೆ. ಹಿಂದಿನ ಸರ್ಕಾರ ಪ್ರತಿ ವರ್ಷ ಶೇ 10ರಷ್ಟು ಶುಲ್ಕ ಹೆಚ್ಚಳಕ್ಕೆ ಸಮ್ಮತಿಸಿತ್ತು. ಕಾಂಗ್ರೆಸ್ ಅಧಿಕಾರಕ್ಕೆ ಬಂದ ಬಳಿಕ ರದ್ದುಗೊಳಿಸಲಾಯಿತು. ಈ ವರ್ಷ ಶೇ 7.5ರಷ್ಟು ಶುಲ್ಕ ಹೆಚ್ಚಿಸುವ ಬಗ್ಗೆ ಇನ್ನೂ ಅಂತಿಮ ನಿರ್ಧಾರ ತೆಗೆದುಕೊಂಡಿಲ್ಲ’ ಎಂದರು.

ಕೆಇಎನಲ್ಲೇ ಕೌಶಲ ಶುಲ್ಕ ಸಂಗ್ರಹ

‘ಸಿಇಟಿ ತೇರ್ಗಡೆಯಾಗಿ ವಿವಿಧ ಖಾಸಗಿ ಕಾಲೇಜುಗಳಿಗೆ ಪ್ರವೇಶ ಪಡೆಯುವ ವಿದ್ಯಾರ್ಥಿಗಳಿಂದ ₹20 ಸಾವಿರದವರೆಗೆ ‘ಸ್ಕಿಲ್ ಲ್ಯಾಬ್’ ಶುಲ್ಕ ಪಡೆಯಲು ಅನುಮತಿ ನೀಡಲಾಗಿದೆ. ವಿಶ್ರಾಂತ ಕುಲಪತಿ ಕರಿಸಿದ್ದಪ್ಪ ಸಮಿತಿ ಶಿಫಾರಸಿನಂತೆ ತೀರ್ಮಾನ ತೆಗೆದುಕೊಳ್ಳಲಾಗಿತ್ತು. ಆದರೆ ಕೆಲ ಕಾಲೇಜುಗಳು ಹೆಚ್ಚು ಶುಲ್ಕ ವಸೂಲಿ ಮಾಡುತ್ತಿರುವ ಕುರಿತು ದೂರುಗಳು ಬಂದಿವೆ. ಹಾಗಾಗಿ ಕೆಇಎನಲ್ಲೇ ಶುಲ್ಕ ಸಂಗ್ರಹಿಸಲು ನಿರ್ಧರಿಸಲಾಗಿದೆ’ ಎಂದು ಸುಧಾಕರ್ ಮಾಹಿತಿ ನೀಡಿದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.