ಬೆಂಗಳೂರು: ‘ಮಹಾತ್ಮ ಗಾಂಧಿ ರಾಷ್ಟ್ರೀಯ ಗ್ರಾಮೀಣ ಉದ್ಯೋಗ ಖಾತರಿ (ನರೇಗಾ) ಕಾಯ್ದೆಯನ್ನು ಮುಂದುವರಿಸಲು ಮತ್ತು ಈ ಕುರಿತು ಕ್ರಿಯಾ ಯೋಜನೆ ಸಿದ್ಧಪಡಿಸಲು ಅವಕಾಶ ಕಲ್ಪಿಸಬೇಕು’ ಎಂದು ಕೋರಿ ಸುಪ್ರೀಂ ಕೋರ್ಟ್ ಮೆಟ್ಟಿಲೇರಲು ರಾಜ್ಯ ಸರ್ಕಾರ ಮುಂದಡಿ ಇಟ್ಟಿದೆ.

ಗುರುವಾರ ನಡೆದ ಸಚಿವ ಸಂಪುಟ ಸಭೆಯಲ್ಲಿ ಈ ಕುರಿತ ನಿರ್ಣಯವನ್ನು ಸರ್ಕಾರ ತೆಗೆದುಕೊಂಡಿದೆ.

ಸಭೆ ಬಳಿಕ ಸುದ್ದಿಗೋಷ್ಠಿಯಲ್ಲಿ ಈ ವಿಷಯ ತಿಳಿಸಿದ ಕಾನೂನು ಮತ್ತು ಸಂಸದೀಯ ವ್ಯವಹಾರಗಳ ಸಚಿವ ಎಚ್.ಕೆ. ಪಾಟೀಲ, ‘ಸಾರ್ವಜನಿಕ ಹಿತದೃಷ್ಟಿಯಿಂದ ‘ನರೇಗಾ ಕಾಯ್ದೆ– 2025’ ಅನ್ನು ಮುಂದುವರಿಸುವುದು ಅನಿವಾರ್ಯವಾಗಿದೆ’ ಎಂದರು.

‘ನರೇಗಾ ಕಾಯ್ದೆಯ ಬದಲು ಕೇಂದ್ರ ಸರ್ಕಾರ ವಿಬಿ ಜಿ ರಾಮ್ ಜಿ (ವಿಕಸಿತ ಭಾರತ್ – ಗ್ಯಾರಂಟಿ ಫಾರ್ ರೋಜ್ಗಾರ್ ಆ್ಯಂಡ್ ಆಜೀವಿಕ ಮಿಷನ್ (ಗ್ರಾಮೀಣ) ಕಾಯ್ದೆಯನ್ನು ಜಾರಿಗೊಳಿಸಿದೆ. ಆದರೆ, ಈ ಕಾಯ್ದೆಯನ್ನು ಜಾರಿಗೊಳಿಸಲು ಕೇಂದ್ರ ಸರ್ಕಾರ ಇನ್ನೂ ಅಧಿಸೂಚನೆ ಹೊರಡಿಸಿಲ್ಲ. ಪರ್ಯಾಯವಾದ ಯಾವುದೇ ವ್ಯವಸ್ಥೆಯನ್ನೂ ಮಾಡಿಲ್ಲ. ಕೇಂದ್ರ ಸರ್ಕಾರದ ಈ ನಿಲುವಿನ ಮೂಲಕ ರಾಜ್ಯ ಸರ್ಕಾರಗಳ ಸಾಂವಿಧಾನಿಕ ಹಕ್ಕುಗಳನ್ನು ದಮನಿಸಿದಂತಾಗಿದೆ. ಹೀಗಾಗಿ, ಈ ವಿಚಾರವನ್ನೂ ಕೋರ್ಟ್ನಲ್ಲಿ ಪ್ರಶ್ನಿಸಲು ಸಚಿವ ಸಂಪುಟ ಸಭೆಯಲ್ಲಿ ತೀರ್ಮಾನಿಸಲಾಗಿದೆ’ ಎಂದು ಅವರು ತಿಳಿಸಿದರು.

‘ಕೇಂದ್ರ ಸರ್ಕಾರ ಜಾರಿಗೆ ತಂದಿರುವ ವಿಬಿ ಜಿ ರಾಮ್ ಜಿ ಕಾಯ್ದೆಯ ಕುರಿತು ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಇಲಾಖೆ ಮಂಡಿಸಿದ ಪ್ರಸ್ತಾವದ ಕುರಿತು ಸಭೆಯಲ್ಲಿ ವಿಸ್ಕೃತವಾಗಿ ಚರ್ಚಿಸಲಾಯಿತು. ವಿಬಿ ಜಿ ರಾಮ್ ಜಿ ಯೋಜನೆಯು ಕೇಂದ್ರ ಪುರಸ್ಕೃತ ಯೋಜನೆಯ ವ್ಯಾಪ್ತಿಯಲ್ಲಿ ಇದೆ. ಹೀಗಾಗಿ, ಈ ರೀತಿಯ ಯೋಜನೆಗಳನ್ನು ಅನುಷ್ಠಾನಗೊಳಿಸುವ ಮೊದಲು ಕೇಂದ್ರ ಸರ್ಕಾರವು ರಾಜ್ಯ ಸರ್ಕಾರಗಳ ಜೊತೆಗೆ ಸಮಾಲೋಚನೆ ನಡೆಸಬೇಕಾಗಿದೆ. ಆದರೆ, ಕೇಂದ್ರ ಸರ್ಕಾರವು ರಾಜ್ಯ ಸರ್ಕಾರಗಳ ಜೊತೆ ಸಮಾಲೋಚನೆ ಮಾಡದೆ ಏಕಾಏಕಿ, ನರೇಗಾ ಕಾಯ್ದೆಯನ್ನು ರದ್ದುಪಡಿಸಿ, ಹೊಸ ಕಾಯ್ದೆ ಜಾರಿಗೆ ತಂದಿದೆ. ಈ ಎಲ್ಲ ಅಂಶಗಳ ಬಗ್ಗೆ ಸಭೆಯಲ್ಲಿ ಚರ್ಚೆ ನಡೆಯಿತು’ ಎಂದರು.

‘ನರೇಗಾ ಯೋಜನೆಯು ಗ್ರಾಮೀಣ ಭಾಗದ ಜನರಿಗೆ ಮಹತ್ವದ ಯೋಜನೆಯಾಗಿದೆ. ಆದರೆ, ಮೇ ತಿಂಗಳು ಬಂದರೂ ಕೇಂದ್ರ ಸರ್ಕಾರ ವಿಬಿ ಜಿ ರಾಮ್ ಜಿ ಯೋಜನೆಯ ಕುರಿತಂತೆ ಅಧಿಸೂಚನೆ ಹೊರಡಿಸಿಲ್ಲ. ನರೇಗಾ ಬಾಕಿ ಕೆಲಸಗಳನ್ನು ಮುಂದುವರಿಸುವ ಬಗ್ಗೆ ಸುತ್ತೋಲೆ ಹೊರಡಿಸಿದ್ದರೂ, ಅದಕ್ಕೆ ಬೇಕಾದ ಯಾವುದೇ ಅನುದಾನ ಕೊಟ್ಟಿಲ್ಲ. ಮುಂಬರುವ ದಿನಗಳಲ್ಲಿ ಮಳೆಯ ಕೊರತೆ ಬಗ್ಗೆ ಮುನ್ನೆಚ್ಚರಿಕೆ ಕ್ರಮ ಕೈಗೊಳ್ಳುವಂತೆ ಸೂಚನೆ ನೀಡಿರುವ ಕೇಂದ್ರ ಸರ್ಕಾರ, ಬಡವರ ಬಗ್ಗೆ ಯಾವುದೇ ಚಿಂತನೆ ಮಾಡಿಲ್ಲ. ಹೀಗಾಗಿ, ರಾಜ್ಯ ಸರ್ಕಾರ ನ್ಯಾಯಾಲಯದ ಕದ ತಟ್ಟಲು ತೀರ್ಮಾನಿಸಿದೆ’ ಎಂದೂ ಅವರು ಸಮರ್ಥಿಸಿಕೊಂಡರು.

‘ನರೇಗಾ ರದ್ದುಪಡಿಸಿದ ನಂತರ ಬಡ ಜನರಿಗೆ ಅನುಕೂಲ ಮಾಡಿಕೊಡಲು ಪರ್ಯಾಯ ವ್ಯವಸ್ಥೆಯನ್ನಾದರೂ ಕೇಂದ್ರ ಸರ್ಕಾರ ಮಾಡಬೇಕಿತ್ತು. ಅದನ್ನೂ ಮಾಡಿಲ್ಲ. ಆದ ಕಾರಣ, ಕಾರ್ಮಿಕರ, ಬಡವರ ಹಿತದೃಷ್ಟಿಯಿಂದ ನರೇಗಾ ಯೋಜನೆಯನ್ನೇ ಮುಂದುವರಿಸುವುದು ಅನಿವಾರ್ಯವಾಗಿದೆ. ಹೀಗಾಗಿ, ಕ್ರಿಯಾ ಯೋಜನೆ ಸಿದ್ಧಪಡಿಸಲು ಕೇಂದ್ರ ಸರ್ಕಾರವು ರಾಜ್ಯಕ್ಕೆ ಅವಕಾಶ ಕಲ್ಪಿಸಬೇಕು’ ಎಂದರು.

ಸಂಪುಟ ಉಪ ಸಮಿತಿಗೆ ಎಸ್ಇಪಿ ವರದಿ

ರಾಜ್ಯ ಶಿಕ್ಷಣ ನೀತಿ ಆಯೋಗ ಸಲ್ಲಿಸಿರುವ ವರದಿಯ ಅನುಷ್ಠಾನಕ್ಕೆ ಸಂಪುಟ ಉಪ ಸಮಿತಿ ರಚಿಸಲು ಸರ್ಕಾರ ತೀರ್ಮಾನಿಸಿದೆ.

ಪ್ರೊ. ಸುಖದೇವ್ ಥೋರಟ್ ಅಧ್ಯಕ್ಷತೆಯ ಆಯೋಗ ಕಳೆದ ಜುಲೈನಲ್ಲಿ ಸಲ್ಲಿಸಿದ್ದ ಅಂತಿಮ ವರದಿಯ ಕುರಿತು ಸಂಪುಟ ಸಭೆಯಲ್ಲಿ ವಿಸ್ತೃತವಾಗಿ ಚರ್ಚೆ ನಡೆಯಿತು. ಆಯೋಗದ ವರದಿಯನ್ನು ಅಧ್ಯಯನ ಮಾಡಿ, ಶಿಫಾರಸುಗಳ ಅನುಷ್ಠಾನಕ್ಕೆ ವರದಿ ನೀಡಲು ಉಪ ಸಮಿತಿ ರಚಿಸಲು ನಿರ್ಧರಿಸಲಾಯಿತು. ಸಮಿತಿಯ ರಚನೆ ಅಧಿಕಾರವನ್ನು ಮುಖ್ಯಮಂತ್ರಿಗೆ ಸಭೆ ನೀಡಿತು ಎಂದು ಸಚಿವ ಎಚ್.ಕೆ. ಪಾಟೀಲ ತಿಳಿಸಿದರು.

ಗುರುವಾರ ನಡೆದ ಸಭೆಯಲ್ಲಿ ಹಾಜರಿದ್ದ ಥೋರಟ್ ಅವರು ತಮ್ಮ ವರದಿಯ ಕುರಿತು ಸಚಿವರಿಗೆ ವಿವರಣೆ ನೀಡಿದರು. ಈ ವೇಳೆ, ಆರೋಗ್ಯ ಸಮಸ್ಯೆಯಿಂದ ಅವರು ಕೆಲಹೊತ್ತು ನಿತ್ರಾಣಗೊಂಡರು. ವೈದ್ಯರನ್ನು ಕರೆಯಿಸಿ ಉಪಚರಿಸಲಾಯಿತು ಎಂದು ಗೊತ್ತಾಗಿದೆ.

ವರದಿಯಲ್ಲಿ ಏನಿದೆ?: ಬಿಜೆಪಿ ಆಡಳಿತದ ಅವಧಿಯಲ್ಲಿ ತರಾತುರಿಯಲ್ಲಿ ಸಿದ್ಧಪಡಿಸಿದ್ದ ರಾಷ್ಟ್ರೀಯ ಹೊಸ ಶಿಕ್ಷಣ ನೀತಿಯನ್ನು ರದ್ದು ಮಾಡುವುದಾಗಿ ಕಾಂಗ್ರೆಸ್ ಚುನಾವಣಾ ಸಮಯದಲ್ಲಿ ನೀಡಿದ್ದ ಭರವಸೆಯಂತೆ ರಾಷ್ಟ್ರೀಯ ಶಿಕ್ಷಣ ನೀತಿ ಬದಲು ರಾಜ್ಯ ಶಿಕ್ಷಣ ನೀತಿ ರೂಪಿಸಲು ಸುಖದೇವ್ ಥೋರಟ್ ಅಧ್ಯಕ್ಷತೆಯಲ್ಲಿ ಆಯೋಗ ರಚಿಸಲಾಗಿತ್ತು. 2,197 ಪುಟಗಳಿರುವ ಮೂರು ಸಂಪುಟ ಒಳಗೊಂಡ ತನ್ನ ಅಂತಿಮ ವರದಿಯನ್ನು ಜುಲೈ 8ರಂದು ಸರ್ಕಾರಕ್ಕೆ ಅಂತಿಮ ವರದಿ ಸಲ್ಲಿಸಿತ್ತು.

ಮೂರು ಸಂಪುಟಗಳನ್ನು ಶಾಲಾ ಶಿಕ್ಷಣ, ಉನ್ನತ ಶಿಕ್ಷಣ ಹಾಗೂ ವೃತ್ತಿ ಶಿಕ್ಷಣ ಎಂದು ವರ್ಗೀಕರಿಸಲಾಗಿದ್ದು, ಶಾಲಾ ಶಿಕ್ಷಣದಲ್ಲಿ ದ್ವಿಭಾಷಾ ನೀತಿ ಕಡ್ಡಾಯವಾಗಿ ಅನುಷ್ಠಾನಗೊಳಿಸ ಬೇಕು. ಕನ್ನಡ ಸೇರಿದಂತೆ ಇತರೆ ಮಾತೃ ಭಾಷೆಗಳನ್ನು ಪ್ರಥಮ ಭಾಷೆಯಾಗಿ, ಇಂಗ್ಲಿಷ್ ಅನ್ನು ದ್ವಿತೀಯ ಭಾಷೆಯಾಗಿ ನಿಗದಿ ಮಾಡಬೇಕು ಈ ಐದನೇ ತರಗತಿಯವರೆಗೆ ಮಾತೃಭಾಷಾ ಮಾಧ್ಯಮದಲ್ಲೇ ಬೋಧನೆಗೆ ಅವಕಾಶ ನೀಡಬೇಕು. ಪೂರ್ವ ಪ್ರಾಥಮಿಕ ಶಿಕ್ಷಣವನ್ನು ಎಲ್ಲ ಸರ್ಕಾರಿ ಶಾಲೆಗಳಲ್ಲೂ ಆರಂಭಿಸಬೇಕು ಎಂದು ಆಯೋಗ ತನ್ನ ವರದಿಯಲ್ಲಿ ಹೇಳಿದೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.