ಶುಕ್ರವಾರ, 3 ಮೇ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ರಾಜ್ಯಪಾಲರಿಗೆ ಸಿದ್ದರಾಮಯ್ಯ ದೂರವಾಣಿ ಕರೆ: ಸಂಜೆ ಸರ್ಕಾರ ರಚನೆಗೆ ಹಕ್ಕು ಮಂಡನೆ

Published 18 ಮೇ 2023, 11:36 IST
Last Updated 18 ಮೇ 2023, 11:36 IST
ಅಕ್ಷರ ಗಾತ್ರ

ಬೆಂಗಳೂರು: ಮುಖ್ಯಮಂತ್ರಿಯಾಗಿ ಘೋಷಣೆಯಾದ ಬಳಿಕ ಸಿದ್ದರಾಮಯ್ಯ ಅವರು, ರಾಜ್ಯಪಾಲ ಥಾವರ್‌ಚಂದ್‌ ಗೆಹಲೋತ್‌ ಅವರನ್ನು ಫೋನ್‌ ಮೂಲಕ ಸಂಪರ್ಕಿಸಿ ಮಾತುಕತೆ ನಡೆಸಿದ್ದಾರೆ. ಇಂದು ಸಂಹೆ ರಾಜ್ಯಪಾಲರನ್ನು ಭೇಟಿ ಮಾಡಿ ಸರ್ಕಾರ ರಚನೆಯ ಹಕ್ಕು ಮಂಡಿಸಲಿದ್ದಾರೆ ಎಂದು ಮೂಲಗಳನ್ನು ಉಲ್ಲೇಖಿಸಿ ಎಎನ್‌ಐ ವರದಿ ಮಾಡಿದೆ.

‘ಕರ್ನಾಟಕದ ನಿಯೋಜಿತ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ರಾಜ್ಯಪಾಲ ಥಾವರ್‌ಚಂದ್‌ ಗೆಹಲೋತ್‌ ಅವರೊಂದಿಗೆ ಫೋನ್‌ನಲ್ಲಿ ಮಾತನಾಡಿದ್ದಾರೆ. ರಾಜ್ಯಪಾಲರಿಗೆ ಹುಟ್ಟುಹಬ್ಬದ ಶುಭಾಶಯ ತಿಳಿಸಿದ ಸಿದ್ದರಾಮಯ್ಯ ಅವರು, ಪ್ರಮಾಣವಚನ ಸ್ವೀಕಾರ ಸಮಾರಂಭದ ಬಗ್ಗೆ ಮಾತುಕತೆ ನಡೆಸಿದ್ದಾರೆ. ಮೇ 20 ರಂದು ಮಧ್ಯಾಹ್ನ 12:30 ಗಂಟೆಗೆ ಪ್ರಮಾಣವಚನ ಸ್ವೀಕಾರ ಸಮಾರಂಭ ನಡೆಯಲಿದೆ. ರಾತ್ರಿ ರಾಜ್ಯಪಾಲರನ್ನು ಭೇಟಿ ಮಾಡಲಿರುವ ಸಿದ್ದರಾಮಯ್ಯ ಸರ್ಕಾರ ರಚನೆಗೆ ಹಕ್ಕುಮಂಡಿಸುವರು‘ ಎಂದು ಮೂಲಗಳಿಂದ ಗೊತ್ತಾಗಿದೆ.

ಈ ಮೊದಲು ಕಾಂಗ್ರೆಸ್‌ ಶಾಸಕ ಜಿ. ಪರಮೇಶ್ವರ ಅವರು, ಕಾಂಗ್ರೆಸ್‌ ಪಕ್ಷದ ಪ್ರತಿನಿಧಿಯಾಗಿ ರಾಜಭವನಕ್ಕೆ ತೆರಳಿ ರಾಜ್ಯಪಾಲರನ್ನು ಭೇಟಿ ಮಾಡಿದ್ದು, ಸರ್ಕಾರ ರಚನೆ ಬಗ್ಗೆ ಮಾಹಿತಿ ನೀಡಿದ್ದಾರೆ.

ಸದ್ಯ ಸಿದ್ದರಾಮಯ್ಯ ಹಾಗೂ ಡಿ.ಕೆ ಶಿವಕುಮಾರ್‌ ಅವರು ದೆಹಲಿಯಿಂದ ಬೆಂಗಳೂರಿಗೆ ಆಗಮಿಸುತ್ತಿದ್ದು, ರಾತ್ರಿ ಕಾಂಗ್ರೆಸ್‌ ಶಾಸಕಾಂಗ ಪಕ್ಷದ ಸಭೆ ನಡೆಯಲಿದೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT