ಶನಿವಾರ, 4 ಮೇ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ರತ್ನಪ್ರಭಾ ಅವಧಿ ವಿಸ್ತರಣೆ: ಪ್ರಧಾನಿ ಕಚೇರಿಗೆ ಪತ್ರ

Last Updated 19 ಜೂನ್ 2018, 20:06 IST
ಅಕ್ಷರ ಗಾತ್ರ

ಬೆಂಗಳೂರು: ರಾಜ್ಯ ಸರ್ಕಾರದ ಮುಖ್ಯ ಕಾರ್ಯದರ್ಶಿ ಕೆ.ರತ್ನಪ್ರಭಾ ಅವರ ಸೇವಾ ಅವಧಿಯನ್ನು ಇನ್ನೂ ಮೂರು ತಿಂಗಳ ಅವಧಿಗೆ ವಿಸ್ತರಣೆ ಮಾಡಲು ಅನುಮತಿ ಕೋರಿ ಪ್ರಧಾನಿ ಕಚೇರಿಗೆ ಮುಖ್ಯಮಂತ್ರಿ ಎಚ್‌.ಡಿ.ಕುಮಾರಸ್ವಾಮಿ ಪತ್ರ ಬರೆದಿದ್ದಾರೆ.

ಹೊಸದಾಗಿ ರಚನೆ ಆಗಿರುವ ಸಮ್ಮಿಶ್ರ ಸರ್ಕಾರಕ್ಕೆ ಅನುಭವಿ ಮತ್ತು ಸಾಮರ್ಥ್ಯವುಳ್ಳ ಅಧಿಕಾರಿಯ ಅವಶ್ಯಕತೆ ಇದೆ. ಅಂತಹ ಅರ್ಹತೆಯನ್ನು ರತ್ನಪ್ರಭಾ ಹೊಂದಿದ್ದಾರೆ ಎಂದು ಪತ್ರದಲ್ಲಿ ಮನವರಿಕೆ ಮಾಡಲಾಗಿದೆ. ಪ್ರಧಾನಿ ಕಚೇರಿಯ ಅನುಮತಿ ಸಿಕ್ಕಿದರೆ ಅವಧಿ ವಿಸ್ತರಣೆ ಆಗುತ್ತದೆ ಎಂದು ಮುಖ್ಯಮಂತ್ರಿ ಕಚೇರಿ ಮೂಲಗಳು ತಿಳಿಸಿವೆ.

ಈಗಾಗಲೇ ಸೇವಾ ಅವಧಿ ವಿಸ್ತರಣೆ ಯಲ್ಲಿರುವ ರತ್ನಪ್ರಭಾ ಅವರನ್ನು ಸೆಪ್ಟೆಂಬರ್‌ವರೆಗೆ ಮುಂದುವರಿಸಲು ತೀರ್ಮಾನಿಸಲಾಗಿದೆ. ಈ ಪತ್ರವನ್ನು ಮಂಗಳವಾರ ಪ್ರಧಾನಿ ಕಚೇರಿಗೆ ಕಳಿಸಲಾಗಿದೆ ಎಂದು ಮೂಲಗಳು ಹೇಳಿವೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT