ಬೆಂಗಳೂರು: ಕೇಂದ್ರ ಸರ್ಕಾರವು ‘ಜನಗಣತಿ 2027’ರ ಪ್ರಕ್ರಿಯೆಯಡಿ ಸ್ವಯಂ ಗಣತಿ ವ್ಯವಸ್ಥೆ ಪರಿಚಯಿಸಿದ್ದು, ರಾಜ್ಯ ಸರ್ಕಾರದ ಮುಖ್ಯ ಕಾರ್ಯದರ್ಶಿ ಶಾಲಿನಿ ರಜನೀಶ್ ಮತ್ತು ರಾಜ್ಯ ಪೊಲೀಸ್ ಮಹಾನಿರ್ದೇಶಕ ಎಂ.ಎ.ಸಲೀಂ ಅವರು ತಮ್ಮ ಮೊಬೈಲ್ಗಳ ಮೂಲಕ ಸ್ವಯಂ ಗಣತಿ ದಾಖಲಾತಿ ಪೂರ್ಣಗೊಳಿಸಿದರು.

ಇದೇ 1ರಿಂದ 15ರವರೆಗೆ ಎಲ್ಲಾ ನಾಗರಿಕರು ಅಧಿಕೃತ ಪೋರ್ಟಲ್ se.census.gov.in ಮೂಲಕ ತಮ್ಮ ಮಾಹಿತಿಯನ್ನು ಆನ್ಲೈನ್ನಲ್ಲಿ ದಾಖಲಿಸಿಕೊಳ್ಳಬೇಕೆಂದು ಶಾಲಿನಿ ಅವರು ಮನವಿ ಮಾಡಿದರು.

‘ನಮ್ಮ ಜನಗಣತಿ–ನಮ್ಮ ಅಭಿವೃದ್ಧಿ ಎಂಬ ಧ್ಯೇಯ ವಾಕ್ಯದೊಂದಿಗೆ ಜನಗಣತಿ ನಡೆಯಲಿದೆ. ಇದರ ಅಂಗವಾಗಿ ಪರಿಚಯಿಸಿರುವ ಸ್ವಯಂ ಗಣತಿ ವ್ಯವಸ್ಥೆಯು ಸರಳ ಮತ್ತು ಸುರಕ್ಷಿತವಾಗಿದೆ’ ಎಂದರು.

‘ಮೊಬೈಲ್ ಸಂಖ್ಯೆ ಮತ್ತು ಒಟಿಪಿ ಮೂಲಕ ಸುಲಭವಾಗಿ 5ರಿಂದ 10 ನಿಮಿಷಗಳಲ್ಲಿ ಸ್ವಯಂ ಗಣತಿ ಪೂರ್ಣಗೊಳಿಸಬಹುದು. ಈ ಪ್ರಕ್ರಿಯೆ ಪೂರ್ಣಗೊಂಡ ಬಳಿಕ ನಿಮ್ಮ ಅರ್ಜಿಯ ಸಂಖ್ಯೆ ದೊರೆಯುವುದು. ಈ ಸಂಖ್ಯೆಯನ್ನು ಏ. 16ರಿಂದ ಮೇ 15ರವರೆಗೆ ಮನೆ ಮನೆಗೆ ಭೇಟಿ ನೀಡುವ ಗಣತಿದಾರರಿಗೆ ನೀಡಿದರೆ ಗಣತಿದಾರರು ಅಲ್ಪ ಸಮಯದಲ್ಲಿ ಗಣತಿ ಪೂರ್ಣಗೊಳಿಸಲು ಹಾಗೂ ಯಾವುದಾದರೂ ತಿದ್ದುಪಡಿ ಇದ್ದರೆ ಮಾಡಿಕೊಳ್ಳಲು ಸಹಾಯಕವಾಗುತ್ತದೆ. ಒಂದು ವೇಳೆ ಮೊಬೈಲ್ ಅಥವಾ ಕಂಪ್ಯೂಟರ್ ಇಲ್ಲದಿದ್ದಲ್ಲಿ ಸಮೀಪದ ಕಂಪ್ಯೂಟರ್ ಕೇಂದ್ರಗಳಿಂದ ಅಥವಾ ಸ್ನೇಹಿತರ ಮೊಬೈಲ್ನಿಂದ ಮಾಹಿತಿ ಸಲ್ಲಿಸಿ, ನೋಂದಣಿ ಸಂಖ್ಯೆಯನ್ನು ಪಡೆಯಬೇಕು’ ಎಂದು ಅವರು ಹೇಳಿದರು.

‘ಜನಗಣತಿ ನಮ್ಮ ರಾಜ್ಯ ಮತ್ತು ದೇಶದ ಭವಿಷ್ಯ ರೂಪಿಸುವ ಮಹತ್ವದ ಕಾರ್ಯ. ಇದು ದತ್ತಾಂಶ ಆಧಾರಿತ ನಿರ್ಧಾರಗಳಿಗೆ ಸಹಾಯ ಮಾಡುತ್ತದೆ. ಆರೋಗ್ಯ, ಶಿಕ್ಷಣ, ವಸತಿ ಮತ್ತು ಮೂಲ ಸೌಕರ್ಯ ಕ್ಷೇತ್ರಗಳಲ್ಲಿ ಸಮರ್ಪಕ ಸಂಪನ್ಮೂಲ ಹಂಚಿಕೆಗೆ ದಾರಿ ತೋರುತ್ತದೆ. ಪ್ರತಿಯೊಬ್ಬ ನಾಗರಿಕನ ಭಾಗವಹಿಸುವಿಕೆ ಅತ್ಯಂತ ಮುಖ್ಯ. ಇದು ಕೇವಲ ಕರ್ತವ್ಯವಲ್ಲ. ಕರ್ನಾಟಕ ಅಭಿವೃದ್ಧಿಗೆ ಪ್ರತಿಯೊಬ್ಬರ ಕೊಡುಗೆಯಾಗಿದೆ. ಇಂದು ನೀಡುವ ನಿಖರ ಮಾಹಿತಿ, ನಾಳೆಯ ಉತ್ತಮ ನೀತಿಗಳು ಮತ್ತು ಸೇವೆಗಳಿಗೆ ಆಧಾರವಾಗುತ್ತದೆ’ ಎಂದು ಹೇಳಿದ್ದಾರೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.