ಕೃಷಿ ಕ್ಷೇತ್ರದಲ್ಲಿ ಸುಧಾರಣೆ ತರಲು ಪ್ರಧಾನಮಂತ್ರಿ @narendramodi ಸರ್ಕಾರ ಕೃಷಿ ಮಸೂದೆಗಳನ್ನು ಜಾರಿಗೆ ತಂದಿದೆ. ಕೃಷಿ ಉತ್ಪನ್ನಗಳನ್ನು ಸರ್ಕಾರ ಖರೀದಿಸುವ ಪ್ರಕ್ರಿಯೆ, ಕನಿಷ್ಠ ಬೆಂಬಲ ಬೆಲೆ ವ್ಯವಸ್ಥೆ ಖಚಿತವಾಗಿ ಮುಂದುವರಿಯಲಿದೆ. ಜೊತೆಗೆ ರೈತರಿಗೆ ಹೆಚ್ಚಿನ ಅವಕಾಶ, ಆಯ್ಕೆ ಮತ್ತು ಆದಾಯ ಹೆಚ್ಚಿಸಲು ನೂತನ ಕಾಯ್ದೆ ನೆರವಾಗಲಿದೆ. (1/2)
— B.S. Yediyurappa (@BSYBJP) December 8, 2020
ಜನರ ವಿಶ್ವಾಸ ಕಳೆದುಕೊಂಡು ಚುನಾವಣೆಗಳಲ್ಲಿ ಸತತ ಸೋಲುಗಳಿಂದ ಹತಾಶಗೊಂಡಿರುವ ವಿಪಕ್ಷಗಳು ರೈತರನ್ನು ದಿಕ್ಕು ತಪ್ಪಿಸಲು ಯತ್ನಿಸುತ್ತಿವೆ. ಕೇಂದ್ರ ಸರ್ಕಾರದ ಕೃಷಿ ಮಸೂದೆಗಳು ವಿಸ್ತೃತ ಮಾರುಕಟ್ಟೆ ಕಲ್ಪಿಸಿ, ಅನ್ನದಾತರ ಆದಾಯ ಹೆಚ್ಚಿಸುವ ಸದುದ್ದೇಶ ಹೊಂದಿದ್ದು, ಈಗಿರುವ ಎಪಿಎಂಸಿ, ಕನಿಷ್ಠ ಬೆಂಬಲ ಬೆಲೆ ವ್ಯವಸ್ಥೆ ಸಹ ಮುಂದುವರೆಯಲಿದೆ.(1/4) pic.twitter.com/jr7ovODlYH
— Dr Sudhakar K (@mla_sudhakar) December 8, 2020
ಯುಪಿಎ ಅಧಿಕಾರದಲ್ಲಿದ್ದಾಗ ಇದೇ ರೀತಿಯ ಕೃಷಿ ಸುಧಾರಣೆಗಳನ್ನು ತರಲು ಮುಂದಾಗಿತ್ತು ಮತ್ತು ಕಾಂಗ್ರೆಸ್ ಪಕ್ಷದ ಪ್ರಣಾಳಿಕೆಯಲ್ಲೂ ಇದೇ ಭರವಸೆ ನೀಡಲಾಗಿತ್ತು. ಅಂದಿನ ಕೇಂದ್ರ ಕೃಷಿ ಸಚಿವರಾಗಿದ್ದ ಶ್ರೀ ಶರದ್ ಪವಾರ್ ಅವರು ಈ ಸುಧಾರಣೆಗಳನ್ನು ತರಲು ಎಲ್ಲಾ ರಾಜ್ಯಗಳ ಮುಖ್ಯಮಂತ್ರಿಗಳಿಗೆ ಪತ್ರ ಬರೆದಿದ್ದರು. (2/4)#FarmersWithModi pic.twitter.com/bJVnjfUg9A
— Dr Sudhakar K (@mla_sudhakar) December 8, 2020
ಡಿಎಂಕೆ ಪ್ರಣಾಳಿಕೆ, ಪಂಜಾಬ್ ಮುಖ್ಯಮಂತ್ರಿ ಕ್ಯಾಪ್ಟನ್ ಆಮ್ರಿಂದರ್ ಸಿಂಗ್ ಅವರ ಹೇಳಿಕೆಗಳೂ ಈ ಹಿಂದೆ ಈ ಸುಧಾರಣೆಗಳನ್ನು ಬೆಂಬಲಿಸಿದ್ದವು. ದೆಹಲಿ ಮುಖ್ಯಮಂತ್ರಿ ಶ್ರೀ ಅರವಿಂದ್ ಕೇಜ್ರಿವಾಲ್ ಅವರು ಈಗಾಗಲೇ ನವೆಂಬರ್ 23ರಂದು ಕೇಂದ್ರದ ಮಸೂದೆಗಳು ಜಾರಿಗೆ ಬರುವಂತೆ ಗೆಜೆಟ್ ಅಧಿಸೂಚನೆ ಹೊರಡಿಸಿದ್ದಾರೆ. (3/4)#FarmersWithModi pic.twitter.com/1cJiifI8xW
— Dr Sudhakar K (@mla_sudhakar) December 8, 2020
ಈ ಹಿಂದೇ ತಾವೇ ಬೆಂಬಲಿಸಿದ್ದ ಸುಧಾರಣೆಗಳ್ನು ಈಗ ವಿನಾಕಾರಣ ವಿರೋಧಿಸುತ್ತಿರುವ ವಿಪಕ್ಷಗಳ ನಡೆ ರಾಜಕೀಯ ದುರುದ್ದೇಶದಿಂದ ಕೂಡಿದೆ. ಪ್ರಧಾನಿ ಶ್ರೀ ನರೇಂದ್ರ ಮೋದಿ ಅವರ ಸರ್ಕಾರ ರೈತರ ಹಿತಾಸಕ್ತಿ ಕಾಪಾಡಲು ಕಟಿಬದ್ಧವಾಗಿದ್ದು ಪಟ್ಟಭದ್ರ ಹಿತಾಸಕ್ತಿಗಳ ಅಪಪ್ರಚಾರದ ವಿರುದ್ಧ ಬಿಜೆಪಿ ಹೋರಾಟ ನಡೆಸುತ್ತದೆ. (4/4)#FarmersWithModi pic.twitter.com/dAr0MdSyaY
— Dr Sudhakar K (@mla_sudhakar) December 8, 2020
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.