ಬೆಂಗಳೂರು: ‘ಸಿದ್ದರಾಮಯ್ಯ ಮತ್ತು ಡಿ.ಕೆ.ಶಿವಕುಮಾರ್ ಅವರು ಮುಖ್ಯಮಂತ್ರಿ ಬದಲಾವಣೆ ವಿಷಯದಲ್ಲಿನ ಗೊಂದಲ ಬಗೆಹರಿಸಿಕೊಂಡು, ರಾಜ್ಯದ ಜನರ ಸಮಸ್ಯೆಗಳನ್ನು ಬಗೆಹರಿಸಲು ಗಮನ ಕೊಡಬೇಕು’ ಎಂದು ಬಿಜೆಪಿ ರಾಜ್ಯ ಘಟಕದ ಅಧ್ಯಕ್ಷ ಬಿ.ವೈ.ವಿಜಯೇಂದ್ರ ಆಗ್ರಹಿಸಿದರು.

ಬುಧವಾರ ಸುದ್ದಿಗಾರರ ಜತೆ ಮಾತನಾಡಿದ ಅವರು, ‘ಒಂದು ತಿಂಗಳಿನಿಂದ ಮುಖ್ಯಮಂತ್ರಿ, ಉಪ ಮುಖ್ಯಮಂತ್ರಿ ಮತ್ತು ಸಚಿವರು ದೆಹಲಿಯಲ್ಲಿಯೇ ಮೊಕ್ಕಾಂ ಹೂಡಿದ್ದಾರೆ. ರಾಜ್ಯದಲ್ಲಿ ಆಡಳಿತ ವ್ಯವಸ್ಥೆ ಕುಸಿದುಬಿದ್ದಿದೆ’ ಎಂದರು.

‘ರಾಜ್ಯದ ಜನರ, ರೈತರ, ಕಬ್ಬು ಬೆಳೆಗಾರರ ಸಮಸ್ಯೆಗಳನ್ನು ಬಗೆಹರಿಸುವ ಬಗ್ಗೆ ಸರ್ಕಾರಕ್ಕೆ ಆಸಕ್ತಿ ಇದ್ದಂತಿಲ್ಲ. ಎಲ್ಲರೂ ನಾಲ್ಕು ದಿನ ದೆಹಲಿಯಲ್ಲಿ, ಮೂರು ದಿನ ರಾಜ್ಯದಲ್ಲಿ ಇದ್ದರೆ ಸರ್ಕಾರ ಹೇಗೆ ನಡೆಯುತ್ತದೆ. ಹೀಗಾಗಿಯೇ, ವಿಧಾನಸಭೆಯನ್ನು ವಿಸರ್ಜನೆ ಮಾಡಿ ಚುನಾವಣೆಗೆ ಹೋಗಿ ಎಂದು ಸವಾಲು ಹಾಕಿದ್ದೆ’ ಎಂದು ಪ್ರಶ್ನೆಯೊಂದಕ್ಕೆ ಉತ್ತರಿಸಿದರು.

‘ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಅವರಿಗೆ ರಾಜಕಾರಣದಲ್ಲಿ 50 ವರ್ಷಗಳ ಅನುಭವವಿದೆ. ಸಿದ್ದರಾಮಯ್ಯ ಮತ್ತು ಶಿವಕುಮಾರ್ ಅವರ ವಿಚಾರಲ್ಲಿ ಖರ್ಗೆ ಅಂತಹವರೂ ಅಸಹಾಯಕರಾಗಿದ್ದಾರೆ. ಸಿದ್ದರಾಮಯ್ಯ ಅವರು ಬೆಳಗಾವಿ ಅಧಿವೇಶನಕ್ಕೆ ಬರುವುದಕ್ಕ ಮುನ್ನ ಈ ಗೊಂದಲಗಳನ್ನು ಬಗೆಹರಿಸಿಕೊಂಡು ಬರಲಿ’ ಎಂದರು.

‘ಜನರು ನಮ್ಮನ್ನು ವಿರೋಧ ಪಕ್ಷದ ಸ್ಥಾನದಲ್ಲಿ ಕೂರಿಸಿದ್ದಾರೆ. ನಾವು ಆ ಕೆಲಸವನ್ನು ಅಚ್ಚುಕಟ್ಟಾಗಿ ಮಾಡುತ್ತಿದ್ದೇವೆ. ಕಾಂಗ್ರೆಸ್ನ ಒಳಜಗಳದ ಲಾಭ ಪಡೆದುಕೊಂಡು, ಸರ್ಕಾರ ರಚಿಸುವ ಅಗತ್ಯ ನಮಗೆ ಇಲ್ಲ’ ಎಂದು ಪ್ರಶ್ನೆಯೊಂದಕ್ಕೆ ಉತ್ತರಿಸಿದರು.