ಮಂಡ್ಯ: ‘ನ್ಯಾಯಯುತವಾಗಿ ಮುಖ್ಯಮಂತ್ರಿ ಸ್ಥಾನ ಡಿ.ಕೆ. ಶಿವಕುಮಾರ್ಗೆ ಸಿಗಬೇಕಿತ್ತು. ರಾಹುಲ್ ಗಾಂಧಿ, ಸೋನಿಯಾ ಗಾಂಧಿ ಬಲಹೀನರಾಗಿದ್ದು, ಎಲ್ಲರಿಗೂ ಹೆದರಿಕೊಳ್ಳುವ ಹೈಕಮಾಂಡ್ ಆಗಿದೆ. ಅದಕ್ಕೆ ಸಿದ್ದರಾಮಯ್ಯ ಮುಖ್ಯಮಂತ್ರಿಯಾದರು’ ಎಂದು ಮಾಜಿ ಸಂಸದ ಪ್ರತಾಪ್ ಸಿಂಹ ಆರೋಪಿಸಿದರು.

‘ಸಿದ್ದರಾಮಯ್ಯನವರು ಡಿ.ಕೆ.ಶಿವಕುಮಾರ್ ಅವರಿಗೆ ಸೀಟು ಬಿಟ್ಟು ಕೊಡ್ತಾರೆ ಅಂತ ಅನಿಸುತ್ತಿಲ್ಲ. ದೇವೇಗೌಡರ ಗರಡಿಯಲ್ಲಿ ಪಳಗಿದ ಸಿದ್ದರಾಮಯ್ಯನವರು ಅಭಿವೃದ್ಧಿ ಕೆಲಸ ಕಲಿತಿದ್ರೆ ರಾಜ್ಯಕ್ಕೆ ಒಳ್ಳೆಯದಾಗುತ್ತಿತ್ತು. ಆದರೆ, ಬರೀ ಪಾಲಿಟಿಕ್ಸ್ ಕಲಿತರು. ಎರಡೂವರೆ ವರ್ಷ ಒಳ್ಳೆಯ ಕೆಲಸ ಮಾಡಿದ್ರೆ, ಸಿದ್ದರಾಮಯ್ಯ ಮುಂದುವರಿಯಲಿ ಅಂತ ಜನರೇ ಧ್ವನಿ ಎತ್ತುತ್ತಿದ್ದರು. ಕೆಟ್ಟ ಆಡಳಿತ ನೀಡಿದರೂ ಸೀಟು ಬಿಟ್ಟು ಕೊಡುವ ಮನಸಿಲ್ಲ’ ಎಂದು ಮಂಗಳವಾರ ಪತ್ರಿಕಾಗೋಷ್ಠಿಯಲ್ಲಿ ಕುಟುಕಿದರು.

‘2013ರಲ್ಲಿ ಡಾ.ಜಿ. ಪರಮೇಶ್ವರ್ ಕೆಪಿಸಿಸಿ ಅಧ್ಯಕ್ಷರಾಗಿದ್ದರು. ಮೂಲ ಕಾಂಗ್ರೆಸ್ಸಿಗರಾದ ಪರಮೇಶ್ವರ್ಗೆ ಅವಕಾಶ ಸಿಗುತ್ತೆ ಅಂತ ಸಿದ್ದರಾಮಯ್ಯನವರು ಸ್ವಜಾತಿಯವರನ್ನು ಛೂ ಬಿಟ್ಟು ಸೋಲಿಸಿ, ಇವರು ಸಿಎಂ ಆಗ್ಬಿಟ್ರು. 2023ರಲ್ಲಿ ಡಿ.ಕೆ.ಶಿವಕುಮಾರ್ ಅವರನ್ನು ಸೋಲಿಸಲು ಸಾಧ್ಯವಾಗಲಿಲ್ಲ. ಡಿಕೆಶಿ ಹುಟ್ಟು ಹೋರಾಟಗಾರ, ರಾಜಕಾರಣ ಚೆನ್ನಾಗಿ ಮಾಡ್ತಾರೆ’ ಎಂದರು.

‘ನವೆಂಬರ್ ಕ್ರಾಂತಿ ಡಿಸೆಂಬರ್ನಲ್ಲಿ ಬ್ರಾಂತಿ ಆಗುತ್ತೆ. ಸತೀಶ್ ಜಾರಕಿಹೋಳಿ ಅವರನ್ನು ಎತ್ತಿ ಕಟ್ಟುವುದು, ಶಾಸಕರನ್ನು ಹಿಡಿದಿಟ್ಟುಕೊಳ್ಳುವ ಕೆಲಸ ಮಾತ್ರ ಆಗುತ್ತಿದೆ. ನಾವು ರೈತರ ಪರ ಧ್ವನಿ ಎತ್ತಿ ಸರ್ಕಾರವನ್ನು ಎಚ್ಚರಿಸುವ ಕೆಲಸ ಮಾಡುತ್ತೇವೆ. ರಾಜ್ಯದಾದ್ಯಂತ ವಿಜಯೇಂದ್ರ, ಆರ್.ಅಶೋಕ್ ನೇತೃತ್ವದಲ್ಲಿ ಹೋರಾಟದ ಕಹಳೆ ಮೊಳಗಲಿದೆ’ ಎಂದರು.

‘ರಾಜ್ಯದಲ್ಲಿ ಸರ್ಕಾರ ಸತ್ತು ಹೋಗಿದೆ. ಸಿದ್ದರಾಮಯ್ಯ ಮತ್ತು ಡಿಕೆಶಿ ಇಬ್ಬರೂ ಹೆಣವನ್ನು ಹೊರುತ್ತಿದ್ದಾರೆ. ಕಬ್ಬು ಬೆಳೆಗಾರರಿಗೆ ಬೆಂಬಲ ಬೆಲೆ ಕೊಡುವಲ್ಲಿ ಸರ್ಕಾರ ವಿಫಲವಾಗಿದೆ. ₹38 ಸಾವಿರ ಕೋಟಿ ಮದ್ಯದಿಂದ ಬರ್ತಿದೆ.

ರೈತರಿಗೆ ಯಾಕೆ ಮೋಸ ಮಾಡ್ತಿರಿ? ಭತ್ತ ಖರೀದಿ ಕೇಂದ್ರ ಆರಂಭವಾಗಿಲ್ಲ. ಪಂಚ ಗ್ಯಾರಂಟಿಗಳು ಕೂಡ ಜನರನ್ನು ಸರಿಯಾಗಿ ತಲುಪುತ್ತಿಲ್ಲ. ಸಾಲದ ಹೊರೆ ಹೆಚ್ಚಾಗಿದೆ’ ಎಂದು ಆರೋಪಿಸಿದರು.

ಮುಡಾ ಹಗರಣ ವಿರುದ್ಧ ಪಾದಯಾತ್ರೆ ಸೇರಿದಂತೆ ವಿಜಯೇಂದ್ರ ಮತ್ತು ಆರ್.ಅಶೋಕ್ ನೇತೃತ್ವದಲ್ಲಿ ಹಲವಾರು ಹೋರಾಟಗಳು ನಡೆದಿವೆ. ಬಿಜೆಪಿ ರೈತ ಮೋರ್ಚಾ ನೇತೃತ್ವದಲ್ಲಿ ರೈತರು ಎದುರಿಸುತ್ತಿರುವ ಸಮಸ್ಯೆಗಳ ಬಗ್ಗೆ ಹೋರಾಟ ನಡೆಯಲಿದೆ. ರೈತರ ಹೆಸರಲ್ಲಿ ಪ್ರಮಾಣ ವಚನ ಸ್ವೀಕರಿಸಿದ್ದ ಯಡಿಯೂರಪ್ಪನವರು 2008ರಲ್ಲಿ ರೈತರಿಗೆ ಕೃಷಿ ಬಜೆಟ್ ಕೊಟ್ಟಿದ್ದರು. ಭಾಗ್ಯಲಕ್ಷ್ಮಿ, ಸೈಕಲ್, ಹಾಲಿಗೆ ಪ್ರೋತ್ಸಾಧನ ಕೊಟ್ಟಿದ್ದು ಬಿಎಸ್ವೈ. ರೈತರ ಸಾಲ ಮತ್ತು ಬಡ್ಡಿಯನ್ನು ಮನ್ನಾ ಮಾಡಿದ್ದು ಕುಮಾರಸ್ವಾಮಿ ಎಂದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.