ಮಂಗಳವಾರ, 25 ಜೂನ್ 2024
×
ADVERTISEMENT
ಈ ಕ್ಷಣ :
ADVERTISEMENT

ಮೈಸೂರು, ಕಾಲೇಜು ದಿನಗಳನ್ನು ನೆನಪಿಸಿಕೊಂಡ ಸಿಎಂ ಸಿದ್ದರಾಮಯ್ಯ

Published 24 ಮೇ 2024, 7:21 IST
Last Updated 24 ಮೇ 2024, 7:21 IST
ಅಕ್ಷರ ಗಾತ್ರ

ಬೆಂಗಳೂರು: ಕರ್ನಾಟಕದ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಮೈಸೂರು ಹಾಗೂ ಕಾಲೇಜು ದಿನಗಳನ್ನು ನೆನಪಿಸಿಕೊಂಡಿದ್ದಾರೆ.

ಈ ಕುರಿತು ಸಾಮಾಜಿಕ ಮಾಧ್ಯಮ 'ಎಕ್ಸ್' ಅಧಿಕೃತ ಖಾತೆಯಲ್ಲಿ ಬರೆದುಕೊಂಡಿದ್ದಾರೆ.

'ಇಂದು ಬೆಳಗ್ಗೆ ಮೈಸೂರಿನ ಮೈಲಾರಿ ಹೋಟೆಲ್‌ನಲ್ಲಿ ತಿಂಡಿ ತಿನ್ನುವಾಗ ನನ್ನ ಕಾಲೇಜು ದಿನಗಳು ನೆನಪಾದವು. ನನ್ನ ಬದುಕಿನ ಅವಿಸ್ಮರಣೀಯ ನೆನಪುಗಳೆಲ್ಲವೂ ಮೈಸೂರಿನ ಜೊತೆ ಬೆಸೆದುಕೊಂಡಿವೆ ಎಂದು ಹೇಳಿದ್ದಾರೆ.

'ಮೈಸೂರು ನನಗೆ ಹುಟ್ಟೂರು ಮಾತ್ರವಲ್ಲ ಬದುಕು ಕೊಟ್ಟ ಊರು. ದೈಹಿಕವಾಗಿ ದೂರವಿದ್ದಾಗಲೂ ಮೈಸೂರಿನ ನೆನಪು ಮನಸ್ಸಿಗೆ ಸದಾ ಹತ್ತಿರವಾಗಿರುತ್ತದೆ. ಈ ಮಣ್ಣಿನ ಋಣ ಬಹಳ ದೊಡ್ಡದು, ಅದರೆದುರು ನಾವು ಸಣ್ಣವರು' ಎಂದು ಬರೆದಿದ್ದಾರೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT