ಶನಿವಾರ, 13 ಜುಲೈ 2024
×
ADVERTISEMENT
ಈ ಕ್ಷಣ :
ADVERTISEMENT

ಸಂಪುಟ ಪುನಾರಚನೆ ಇಲ್ಲ: ಮುಖ್ಯಮಂತ್ರಿ ಸಿದ್ದರಾಮಯ್ಯ

Published 29 ಜೂನ್ 2024, 15:52 IST
Last Updated 29 ಜೂನ್ 2024, 15:52 IST
ಅಕ್ಷರ ಗಾತ್ರ

ನವದೆಹಲಿ: ಕರ್ನಾಟಕದಲ್ಲಿ ಸಚಿವ ಸಂಪುಟ ಪುನಾರಚನೆ ಮಾಡುವುದಿಲ್ಲ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಶನಿವಾರ ಸ್ಪಷ್ಟಪಡಿಸಿದರು. 

‘ನಾಗೇಂದ್ರ ಅವರ ರಾಜೀನಾಮೆಯಿಂದ ಸಚಿವ ಸಂಪುಟದಲ್ಲಿ ಒಂದು ಸ್ಥಾನ ಖಾಲಿಯಿದ್ದರೂ ಅದನ್ನು ತುಂಬುವ ಯೋಜನೆ ಇಲ್ಲ. ನಾಗೇಂದ್ರ ಅವರ ಬಳಿ ಇದ್ದ ಪರಿಶಿಷ್ಟ ಪಂಗಡ ಕಲ್ಯಾಣ ಇಲಾಖೆ ಖಾತೆ ನನ್ನ ಬಳಿ ಇದೆ’ ಎಂದು ಅವರು ಹೇಳಿದರು. 

‘ಸಚಿವರ ಕಾರ್ಯವೈಖರಿಯನ್ನು ಪರಾಮರ್ಶೆ ಮಾಡುವ ಯಾವುದೇ ಪ್ರಸ್ತಾಪವೂ ಇಲ್ಲ. ಎಲ್ಲರೂ ಉತ್ತಮವಾಗಿ ಕಾರ್ಯನಿರ್ವಹಿಸುತ್ತಿದ್ದಾರೆ’ ಎಂದು ಅವರು ಹೇಳಿದರು.

ಕಾಂಗ್ರೆಸ್ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಮತ್ತು ಲೋಕಸಭೆಯ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ಅವರನ್ನು ಇಲ್ಲಿ ಭೇಟಿ ಮಾಡಿದ ಸಿದ್ದರಾಮಯ್ಯ, ‘ರಾಷ್ಟ್ರೀಯ ನಾಯಕರೊಂದಿಗೆ ರಾಜ್ಯ ರಾಜಕಾರಣದ ಬಗ್ಗೆ ಚರ್ಚಿಸಿಲ್ಲ’ ಎಂದು ಹೇಳಿದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT