ಭಾನುವಾರ, 28 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

Budget 2024: ರಾಯಚೂರಿಗೆ ಏಮ್ಸ್‌ ಮಂಜೂರು ಕೋರಿ ಸಚಿವೆ ನಿರ್ಮಲಾಗೆ ಸಿಎಂ ಪತ್ರ

Published 30 ಜನವರಿ 2024, 10:53 IST
Last Updated 30 ಜನವರಿ 2024, 10:53 IST
ಅಕ್ಷರ ಗಾತ್ರ

ಬೆಂಗಳೂರು: ಫೆ.1 ರಂದು ಮಂಡಿಸುವ ಮಧ್ಯಂತರ ಬಜೆಟ್‌ನಲ್ಲಿ ರಾಯಚೂರಿಗೆ ಏಮ್ಸ್‌ ಮಂಜೂರು ಮಾಡಬೇಕು ಎಂದು ಕೋರಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಕೇಂದ್ರ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್‌ ಅವರಿಗೆ ಪತ್ರ ಬರೆದಿದ್ದಾರೆ.

‘ರಾಯಚೂರು, ಕಲ್ಯಾಣ ಕರ್ನಾಟಕ ಭಾಗದ ಮಹತ್ವದ ಜಿಲ್ಲೆಯಾಗಿದೆ. ಅಲ್ಲಿ ವೈದ್ಯಕೀಯ ಸೌಲಭ್ಯ, ಶಿಕ್ಷಣ ಹಾಗೂ ತಲಾ ಆದಾಯ ಕರ್ನಾಟಕದ ಉಳಿದ ಭಾಗಗಳಿಗಿಂತ ಕಡಿಮೆ ಇದೆ. ಅಲ್ಲಿ ಉತ್ತಮ ಗುಣಮಟ್ಟದ ವೈದ್ಯಕೀಯ ಕೇಂದ್ರ ಸ್ಥಾಪನೆಯ ಅಗತ್ಯ ಇದೆ’ ಎಂದು ಜ.29ರಂದು ಬರೆದ ಪತ್ರದಲ್ಲಿ ಮುಖ್ಯಮಂತ್ರಿ ಉಲ್ಲೇಖಿಸಿದ್ದಾರೆ.

ಕರ್ನಾಟಕದಲ್ಲಿ ಏಮ್ಸ್ ಸ್ಥಾಪನೆ ಬಗೆಗಿನ ಪ್ರಸ್ತಾಪ ಕಳೆದ ಹಲವು ವರ್ಷಗಳಿಂದ ಬಾಕಿ ಇದೆ. ಸಂಭವನೀಯ ಸ್ಥಳಗಳನ್ನು ಪರಿಗಣಿಸಿ, ಏಮ್ಸ್ ಸ್ಥಾಪಿಸಲು ರಾಯಚೂರು ಅತ್ಯಂತ ಸೂಕ್ತವಾದ ಸ್ಥಳವಾಗಿದೆ ಎಂದು ಪತ್ರದಲ್ಲಿ ಸಿಎಂ ಅಭಿಪ್ರಾಯಪಟ್ಟಿದ್ದಾರೆ.

‘ಹೀಗಾಗಿ 2024–25ರ ಬಜೆಟ್‌ನಲ್ಲಿ ರಾಯಚೂರಿಗೆ ಏಮ್ಸ್ ಮಂಜೂರು ಮಾಡುವಂತೆ ನಿಮ್ಮಲ್ಲಿ ಮನವಿ ಮಾಡುತ್ತೇನೆ’ ಎಂದು ಅವರು ಹೇಳಿದ್ದಾರೆ. ಅಲ್ಲದೆ 2023ರ ಜೂನ್ 17ರಂದು ತಾವು ಆರೋಗ್ಯ ಹಾಗೂ ಕುಟುಂಬ ಕಲ್ಯಾಣ ಇಲಾಖೆ ಸಚಿವ ಮನ್ಸುಖ್‌ ಎಲ್. ಮಾಂಡವೀಯ ಅವರಿಗೆ ಬರೆದ ಪತ್ರವನ್ನೂ ಅವರು ಲಗತ್ತಿಸಿದ್ದಾರೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT