ಗುರುವಾರ, 25 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಖಾತೆ ಹಂಚಿಕೆಯಾಗಿಲ್ಲ, ಮಾಧ್ಯಮಗಳಲ್ಲಿ ಹರಿದಾಡುತ್ತಿರುವುದು ನಕಲಿ ಪಟ್ಟಿ: ಕಾಂಗ್ರೆಸ್

Published 27 ಮೇ 2023, 14:32 IST
Last Updated 27 ಮೇ 2023, 14:32 IST
ಅಕ್ಷರ ಗಾತ್ರ

ಬೆಂಗಳೂರು: ಸಚಿವರಾಗಿ ಪ್ರಮಾಣವಚನ ಸ್ವೀಕರಿಸಿರುವವರಿಗೆ ಖಾತೆ ಹಂಚಿಕೆ ಮಾಡಲಾಗಿದೆ ಎಂದು ನಕಲಿ ಪಟ್ಟಿ ತಯಾರಿಸಿ ಸಾಮಾಜಿಕ ಮಾಧ್ಯಮಗಳಲ್ಲಿ ಹರಡಲಾಗಿದೆ ಎಂದು ಕಾಂಗ್ರೆಸ್‌ ಕಿಡಿಕಾರಿದೆ.

ರಾಜ್ಯ ಸರ್ಕಾರದ ಸಚಿವ ಸಂಪುಟಕ್ಕೆ ಹೊಸದಾಗಿ ಸೇರ್ಪಡೆಯಾಗಿರುವ 24 ನಾಯಕರು ಇಂದು ಪ್ರಮಾಣ ಸ್ವೀಕರಿಸಿದ್ದಾರೆ. ಇದರೊಂದಿಗೆ ಸಚಿವ ಸಂಪುಟ ಸಂಪೂರ್ಣ ಭರ್ತಿಯಾಗಿದೆ.

ಮುಖ್ಯಮಂತ್ರಿ ಸಿದ್ದರಾಮಯ್ಯ ಹಾಗೂ ಉಪಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್‌ ಸೇರಿದಂತೆ ಒಟ್ಟು 34 ಸಚಿವರು ಸಂಪುಟದಲ್ಲಿದ್ದಾರೆ. ಈ ಎಲ್ಲರಿಗೂ ಖಾತೆ ಹಂಚಿಕೆ ಮಾಡಲಾಗಿದೆ ಎಂಬ ಪಟ್ಟಿಯೊಂದು ಸಾಮಾಜಿಕ ಮಾಧ್ಯಮಗಳಲ್ಲಿ ಹರಿದಾಡುತ್ತಿದೆ.

ಈ ಬಗ್ಗೆ ಸ್ಪಷ್ಟನೆ ನೀಡಿರುವ ಕಾಂಗ್ರೆಸ್, 'ಸಾಮಾಜಿಕ ಜಾಲತಾಣಗಳಲ್ಲಿ ಹಾಗೂ ಕೆಲವು ಮಾಧ್ಯಮಗಳಲ್ಲಿ ಖಾತೆ ಹಂಚಿಕೆಯಾಗಿರುವ ಬಗ್ಗೆ ನಕಲಿ ಪಟ್ಟಿ ವೈರಲ್ ಆಗಿದೆ. ಇನ್ನೂ ಸಹ ಖಾತೆ ಹಂಚಿಕೆಯಾಗಿರುವುದಿಲ್ಲ. ಯಾರೂ ಊಹಾಪೋಹಗಳಿಗೆ ಕಿವಿಗೊಡಬೇಡಿ. ನಕಲಿ ಸುದ್ದಿಗಳನ್ನು ಹಂಚಬೇಡಿ. ಸರ್ಕಾರ ಅಧಿಕೃತವಾಗಿ ಖಾತೆ ಹಂಚಿಕೆಯ ಪಟ್ಟಿಯನ್ನು ಶೀಘ್ರದಲ್ಲೇ ಬಿಡುಗಡೆ ಮಾಡಲಿದೆ' ಎಂದು ಮನವಿ ಮಾಡಿದೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT