ಬೆಂಗಳೂರು: ‘ರಾಜ್ಯದ ಕಾಂಗ್ರೆಸ್ ಸರ್ಕಾರವು ತನ್ನ ಆಡಳಿತದ ಮೂರೂ ವರ್ಷಗಳಲ್ಲಿ ಜನರನ್ನು ವಂಚಿಸುವ ಕೆಲಸವನ್ನಷ್ಟೇ ಮಾಡಿದೆ’ ಎಂದು ನಿತಿನ್ ನವೀನ್ ಆರೋಪಿಸಿದರು.

ಪಕ್ಷದ ಪ್ರಮುಖರ ಸಮಿತಿ ಸಭೆಯ ನಂತರ ಸುದ್ದಿಗಾರರ ಜತೆ ಮಾತನಾಡಿದ ಅವರು, ‘ಕಾಂಗ್ರೆಸ್ ತನ್ನ ಒಳಜಗಳದ ಕಾರಣಕ್ಕೆ ರಾಜ್ಯದ ಜನರ ಹಿತವನ್ನು ಕಡೆಗಣಿಸಿದೆ. ಜನಹಿತಕ್ಕೂ ತನಗೂ ಸಂಬಂಧವೇ ಇಲ್ಲ ಎಂಬಂತೆ ಸರ್ಕಾರ ವರ್ತಿಸುತ್ತಿದೆ’ ಎಂದು ಟೀಕಿಸಿದರು.

‘ಭ್ರಷ್ಟಾಚಾರ ನಿರ್ಮೂಲನೆ ಹೆಸರಿನಲ್ಲಿ ಅಧಿಕಾರಕ್ಕೆ ಬಂದ ಕಾಂಗ್ರೆಸ್ ನಾಯಕರು, ಈಗ ತಾವೇ ಭ್ರಷ್ಟಾಚಾರದಲ್ಲಿ ತೊಡಗಿದ್ದಾರೆ. ತಮಗಾಗಿ ಸರ್ಕಾರ ನಡೆಸುತ್ತಿದ್ದಾರೆ. ಅಭಿವೃದ್ಧಿ ಕಾರ್ಯಗಳನ್ನು ಮೂಲೆಗೆ ತಳ್ಳಿದ್ದಾರೆ. ದೆಹಲಿಯ ಕಾಂಗ್ರೆಸ್ ತಂಡಕ್ಕೆ ಕರ್ನಾಟಕವು ಎಟಿಎಂ ಆಗಿದೆ’ ಎಂದು ಆಪಾದಿಸಿದರು.

ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ
260525-51-36714794

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.