ಶಿರಸಿ: 'ರಾಜ್ಯದಲ್ಲಿ ಮೂರು ವರ್ಷಗಳಿಂದ ಕಾಂಗ್ರೆಸ್ ಆಡಳಿತದಲ್ಲಿದ್ದು, ಮುಖ್ಯಮಂತ್ರಿ ಸ್ಥಾನವನ್ನು ಯಾರು ಯಾವಾಗ ಬಿಡುತ್ತಾರೆ? ಆ ಸ್ಥಾನಕ್ಕೆ ಯಾರು ಏರುತ್ತಾರೆ ಎಂಬುದು ಕಾದು ನೋಡುವುದೇ ಈ ಸರ್ಕಾರದ ದೊಡ್ಡ ಸಾಧನೆ' ಎಂದು ಸಂಸದ ವಿಶ್ವೇಶ್ವರ ಹೆಗಡೆ ಕಾಗೇರಿ ಹೇಳಿದರು.

‘ಕಾಂಗ್ರೆಸ್ ಪಕ್ಷದೊಳಗಿನ ಆಂತರಿಕ ಅಧಿಕಾರ ಹಪಾಹಪಿಯಿಂದ ರಾಜ್ಯದ ಆಡಳಿತ ಯಂತ್ರ ಕುಸಿದಿದೆ. ಮುಖ್ಯಮಂತ್ರಿ ಕುರ್ಚಿಯ ಸಂಗೀತ ಕುರ್ಚಿ ಆಟದಲ್ಲಿ ಇಡೀ ಸರ್ಕಾರ ಮುಳುಗಿದೆ. ಜನರ ಸಮಸ್ಯೆ ಕೇಳುವವರೇ ಇಲ್ಲದಂತಾಗಿದೆ. ನಾಯಕರ ನಡುವಿನ ಈ ಶೀತಲ ಸಮರದಿಂದ ರಾಜ್ಯ ತೀವ್ರ ಆರ್ಥಿಕ ಸಂಕಷ್ಟ ಎದುರಿಸುವಂತಾಗಿದೆ’ ಎಂದು ಅವರು ಮಂಗಳವಾರ ಸುದ್ದಿಗಾರರಿಗೆ ತಿಳಿಸಿದರು.

‘ಸರ್ಕಾರದ ಪಂಚ ಗ್ಯಾರಂಟಿ ಯೋಜನೆಗಳು ಅತ್ಯಂತ ಬೇಜವಾಬ್ದಾರಿಯಿಂದ ಕೂಡಿದ್ದು, ಅವುಗಳ ಸಮರ್ಪಕ ಅನುಷ್ಠಾನಕ್ಕೆ ಯಾವುದೇ ಮುನ್ನೋಟವಿಲ್ಲ. ಬೊಕ್ಕಸ ಖಾಲಿ ಆಗಿರುವುದರಿಂದ ಗ್ಯಾರಂಟಿಗಳ ಹೊರೆ ಸರಿದೂಗಿಸಲು ತೆರಿಗೆ ಹಾಗೂ ದಿನಬಳಕೆ ವಸ್ತುಗಳ ಬೆಲೆ ಏರಿಕೆ ಮಾಡುವ ಮೂಲಕ ಜನರನ್ನು ಇನ್ನಷ್ಟು ಸಂಕಷ್ಟಕ್ಕೆ ದೂಡಲಾಗುತ್ತಿದೆ’ ಎಂದರು.

ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ
260520-20-1882052205

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.