ಕೊಪ್ಪಳ: ‘ಮುಖ್ಯಮಂತ್ರಿ ಬದಲಾವಣೆ, ಹೊಸ ಮುಖ್ಯಮಂತ್ರಿ ಆಯ್ಕೆಯಂತಹ ಕಾಂಗ್ರೆಸ್ನ ಆಂತರಿಕ ಕಚ್ಚಾಟದಿಂದ ರಾಜ್ಯದಲ್ಲಿ ಒಂದು ವರ್ಷದಿಂದ ಆಡಳಿತ ವ್ಯವಸ್ಥೆ ಸ್ಥಗಿತಗೊಂಡಿದೆ. ಜನರಿಗೆ ಬಹಳಷ್ಟು ತೊಂದರೆಯಾಗುತ್ತಿದೆ’ ಎಂದು ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ. ವಿಜಯೇಂದ್ರ ಹೇಳಿದರು.

ಗುರುವಾರ ಮಾಧ್ಯಮದವರ ಜೊತೆ ಮಾತನಾಡಿದ ಅವರು ‘ಕಾಂಗ್ರೆಸ್ ಪಕ್ಷದಲ್ಲಿ ಯಾರೇ ಸಿ.ಎಂ. ಆದರೂ ರಾಜ್ಯ ಅಭಿವೃದ್ಧಿಯಾಗಲು ಸಾಧ್ಯವಿಲ್ಲ. ಕಾಂಗ್ರೆಸ್ನಲ್ಲಿ ಆಗುತ್ತಿರುವ ಬೆಳವಣಿಗೆ ನಮಗೆ ಮುಖ್ಯವಲ್ಲ. ಅದು ಜನರ ಮೇಲೆ ಬೀರುವ ಪರಿಣಾಮದ ಬಗ್ಗೆ ಮಾತ್ರ ಯೋಚಿಸುತ್ತಿದ್ದೇವೆ’ ಎಂದರು.

ಹೊಸಪೇಟೆ (ವಿಜಯನಗರ) ವರದಿ: ‘ಮೂರು ವರ್ಷಗಳ ಆಡಳಿತದಿಂದ ರಾಜ್ಯವು ದಿವಾಳಿಯ ಹಂತಕ್ಕೆ ತಲುಪಿದೆ. ನೂತನ ಮುಖ್ಯಮಂತ್ರಿಗೆ ಆರ್ಥಿಕ ಸುಧಾರಣೆ ತರಲು ಆಗದು’ ಎಂದು ಬಿ.ವೈ.ವಿಜಯೇಂದ್ರ ತಿಳಿಸಿದರು.

‘ರಾಜ್ಯ ಸರ್ಕಾರವು ಜನರಿಗೆ ಶಾಪವಾಗಿ ಪರಿಣಮಿಸಿದೆ. ಜನರು ಸರ್ಕಾರದ ಮೇಲೆ ವಿಶ್ವಾಸ ಕಳೆದು ಕೊಂಡು ಹಲವು ದಿನಗಳು ಆಗಿವೆ’ ಎಂದು ಸುದ್ದಿಗಾರರಿಗೆ ತಿಳಿಸಿದರು. ‘ರಾಜ್ಯದಲ್ಲಿ ಕಾಂಗ್ರೆಸ್ಗೆ ಸ್ಪಷ್ಟ ಬಹುಮತ ಇದೆ. ನಾವು ಪರಿಣಾಮಕಾರಿ ವಿರೋಧ ಪಕ್ಷವಾಗಿ ಕೆಲಸ ಮಾಡುತ್ತಿದ್ದೇವೆ. ಕಾಂಗ್ರೆಸ್ನ ಆಂತರಿಕ ವಿಷಯದಲ್ಲಿ ಬಿಜೆಪಿ ಮೂಗು ತೂರಿಸುವ ಕೆಲಸ ಮಾಡಲ್ಲ’ ಎಂದರು.

ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ
260529-51-1748014706

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.