ಬೆಂಗಳೂರು/ಎಚ್.ಡಿ. ಕೋಟೆ: ಕಾಂಗ್ರೆಸ್ ನೇತೃತ್ವದ ಸರ್ಕಾರದ ಎರಡು ವರ್ಷಗಳ ಸಂಭ್ರಮಾಚರಣೆಯನ್ನು ಶೀಘ್ರವೇ ಹಮ್ಮಿಕೊಳ್ಳಲಾಗುವುದು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿದರು.

ಸುದ್ದಿಗಾರರ ಜತೆ ಮಾತನಾಡಿದ ಅವರು, ‘ರಾಜ್ಯದಲ್ಲಿ ಕಾಂಗ್ರೆಸ್ ಅಧಿಕಾರಕ್ಕೆ ಬಂದು ಎರಡು ವರ್ಷ ಪೂರ್ಣಗೊಳಿಸುತ್ತಿದೆ. ಸಂಭ್ರಮಾಚರಣೆ ಹಮ್ಮಿಕೊಳ್ಳಲು ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ, ಲೋಕಸಭೆ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ಅವರ ಅನುಮತಿಯನ್ನು ಪಡೆದಿದ್ದೆವು. ಸಂಪುಟ ಸಭೆಯಲ್ಲೂ ನಿರ್ಧಾರ ತೆಗೆದುಕೊಳ್ಳಲಾಗಿತ್ತು’ ಎಂದರು.

ಭಾರತ–ಪಾಕಿಸ್ತಾನದ ಮಧ್ಯೆ ಯುದ್ಧದ ಸಿದ್ಧತೆ ಆರಂಭವಾದ ಕಾರಣ ಸಂಭ್ರಮಾಚರಣೆ ಮುಂದೂಡುವ ನಿರ್ಧಾರ ತೆಗೆದುಕೊಂಡಿದ್ದೆವು. ಈಗ ಕದನ ವಿರಾಮ ಏರ್ಪಟ್ಟಿದೆ. ಹೈಕಮಾಂಡ್ ಜತೆ ಚರ್ಚಿಸಿ, ಮತ್ತೆ ಸಿದ್ಧತೆ ಆರಂಭಿಸುತ್ತೇವೆ. ನುಡಿದಂತೆ ನಡೆದ ಸರ್ಕಾರದ ಸಾಧನೆಗಳನ್ನು ಜನರಿಗೆ ತಿಳಿಸುತ್ತೇವೆ ಎಂದು ಹೇಳಿದರು.

ಈ ಕುರಿತು ಬೆಂಗಳೂರಿನಲ್ಲಿ ಸುದ್ದಿಗಾರರಿಗೆ ಪ್ರತಿಕ್ರಿಯೆ ನೀಡಿದ ಉಪ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್, ‘ಗಡಿಯಲ್ಲಿನ ಉದ್ವಿಗ್ನ ಪರಿಸ್ಥಿತಿ ನಿರ್ಮಾಣವಾಗಿದ್ದ ಕಾರಣ ಸಂಭ್ರಮಾಚರಣೆ ಮುಂದೂಡಲು ನಿರ್ಧರಿಸಿದ್ದೆವು. ಈಗ ಕದನ ವಿರಾಮ ಘೋಷಣೆಯಾಗಿದೆ. ಕಾರ್ಯಕ್ರಮ ಹಮ್ಮಿಕೊಳ್ಳುತ್ತೇವೆಐದಾರು ಜಿಲ್ಲೆಗಳ ಉಸ್ತುವಾರಿ ಸಚಿವರು, ಶಾಸಕರು, ವಿಧಾನಸಭಾ ಕ್ಷೇತ್ರವಾರು ಕಾರ್ಯಕರ್ತರ ಸಭೆ ನಡೆಸಲು ಸೂಚಿಸಲಾಗಿದೆ’ ಎಂದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.