ಬೆಂಗಳೂರು: ರಾಜ್ಯದಲ್ಲಿ ಇಂದು 2798 ಕೊರೊನಾ ವೈರಸ್ ಸೋಂಕು ಪ್ರಕರಣಗಳು ಪತ್ತೆಯಾಗಿವೆ. ಅಲ್ಲದೆ, 70 ಮಂದಿ ಮೃತಪಟ್ಟಿದ್ದಾರೆ. ಇದರೊಂದಿಗೆ ರಾಜ್ಯದಲ್ಲಿ ಸೊಂಕಿತರ ಸಂಖ್ಯೆ 36216 ಕ್ಕೆ ಏರಿಕೆಯಾಗಿದೆ. ಇನ್ನೊಂದೆಡೆ, ಕೋವಿಡ್‌ಗೆ ಈ ವರೆಗೆ ಪ್ರಾಣತೆತ್ತವರ ಸಂಖ್ಯೆ 613ಕ್ಕೆ ಏರಿದೆ.

ಇನ್ನು ರಾಜ್ಯದಲ್ಲಿ ಇಂದು 880 ಮಂದಿ ಗುಣಮಖರಾಗಿ ಆಸ್ಪತ್ರೆಯಿಂದ ಬಿಡುಗಡೆಯಾಗಿದ್ದಾರೆ. ರಾಜ್ಯದಲ್ಲಿ ಈ ವರೆಗೆ ಕೊರೊನಾ ವೈರಸ್‌ನಿಂದ 14716 ಮಂದಿ ಗುಣಮುಖರಾಗಿದ್ದಾರೆ ಎಂಬುದು ಸರ್ಕಾರ ಬಿಡುಗಡೆ ಮಾಡಿರುವ ಬುಲೆಟಿನಿಂದ ಗೊತ್ತಾಗಿದೆ.

ರಾಜ್ಯ ರಾಜಧಾನಿ ಬೆಂಗಳೂರಿನಲ್ಲಿ ಇಂದು ಒಂದೇ ದಿನ 1533 ಮಂದಿ ಸೋಂಕಿತರು ಪತ್ತೆಯಾಗಿದ್ದಾರೆ. ಈ ಸಂಖ್ಯೆಯು ಬೆಂಗಳೂರಿನ ಒಟ್ಟಾರೆ ಸೋಂಕಿತರ ಸಂಖ್ಯೆಯನ್ನು 16862ಕ್ಕೆ ಏರಿಸಿದೆ. ಇದೇ ವೇಳೆ ದಕ್ಷಿಣ ಕನ್ನಡದಲ್ಲಿ ಇಂದು 186 ಮಂದಿ, ಉಡುಪಿಯಲ್ಲಿ 90 ಮಂದಿ ಸೋಂಕಿತರು ಪತ್ತೆಯಾಗಿದ್ದಾರೆ. ಬೆಂಗಳೂರು ಗ್ರಾಮಾಂತರದಲ್ಲಿ ಇಂದು 5 ಸೋಂಕಿತರು ಪತ್ತೆಯಾಗಿದ್ದಾರೆ.

ಕೊರೊನಾ ವೈರಸ್ ಸೋಂಕು ರಾಜ್ಯದಲ್ಲಿ ದಿನದಿಂದದಿನಕ್ಕೆ ಹೆಚ್ಚಾಗುತ್ತಲೇ ಇರುವ ಕಾರಣಕ್ಕೆ ಬೆಂಗಳೂರು ಮತ್ತು ಬೆಂಗಳೂರು ಗ್ರಾಮಾಂತರ ಜಿಲ್ಲೆಯನ್ನು ಒಂದು ವಾರ ಲಾಕ್‌ಡೌನ್ ಮಾಡಲು ಸರ್ಕಾರ ನಿರ್ಧರಿಸಿದೆ. ಇದೇ 14ರಿಂದ ಒಂದು ವಾರಗಳ ಕಾಲ, ಅಂದರೆ, 22ರ ಬೆಳಗ್ಗೆ ವರೆಗೆ ಲಾಕ್‌ಡೌನ್ ಜಾರಿಯಲ್ಲಿ ಇರಲಿದೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.