ಮಂಗಳವಾರ, 30 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

Karnataka Covid-19 Update: 406 ಹೊಸ ಪ್ರಕರಣ ದೃಢ, 10 ಮಂದಿ ಸಾವು

Last Updated 10 ಅಕ್ಟೋಬರ್ 2021, 14:25 IST
ಅಕ್ಷರ ಗಾತ್ರ

ಬೆಂಗಳೂರು: ರಾಜ್ಯದಲ್ಲಿಭಾನುವಾರ ಹೊಸದಾಗಿ406 ಕೋವಿಡ್ ಪ್ರಕರಣಗಳು ದೃಢಪಟ್ಟಿದ್ದು, 10 ಮಂದಿ ಸೋಂಕಿತರು ಮೃತಪಟ್ಟಿದ್ದಾರೆ ಎಂದು ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ತಿಳಿಸಿದೆ.‌

ಇದರೊಂದಿಗೆ ಒಟ್ಟು ಸೋಂಕಿತರ ಸಂಖ್ಯೆ 29,81,027ಕ್ಕೆ ಏರಿಕೆಯಾಗಿದೆ. ಆ ಪೈಕಿ 37,885 ಮಂದಿ ಸಾವಿಗೀಡಾಗಿದ್ದಾರೆ. ಇದುವರೆಗೆ 29,32,959 ಮಂದಿ ಸೋಂಕಿತರು ಗುಣಮುಖರಾಗಿದ್ದಾರೆ. ಸದ್ಯ ರಾಜ್ಯದಲ್ಲಿ 10,154 ಸಕ್ರಿಯ ಪ್ರಕರಣಗಳಿವೆ.

ರಾಜ್ಯದಲ್ಲಿ ಪಾಸಿಟಿವಿಟಿ ದರ ಶೇ 0.35 ರಷ್ಟಿದ್ದು, ಮರಣ ಪ್ರಮಾಣ ಶೇ 2.46 ರಷ್ಟಿದೆ ಎಂದು ಆರೋಗ್ಯ ಇಲಾಖೆ ತಿಳಿಸಿದೆ.‌

ರಾಜಧಾನಿ ಬೆಂಗಳೂರು (156) ಹೊರತು ಪಡಿಸಿ ಬೇರೆ ಜಿಲ್ಲೆಗಳಲ್ಲಿ ನೂರಕ್ಕಿಂತ ಹೆಚ್ಚು ಪ್ರಕರಣಗಳು ವರದಿಯಾಗಿಲ್ಲ. ಹಾಗೆಯೇ, ಬೀದರ್‌, ಚಿಕ್ಕಬಳ್ಳಾಪುರ, ಗದಗ, ಹಾವೇರಿ, ಕಲಬುರಗಿ, ಕೊಪ್ಪಳ, ವಿಜಯಪುರ ಮತ್ತು ಯಾದಗಿರಿಯಲ್ಲಿ ಒಂದೂ ಪ್ರಕರಣಗಳು ವರದಿಯಾಗಿಲ್ಲ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT