ಬೆಂಗಳೂರು: ರಾಜ್ಯದಲ್ಲೂ ಕೋವಿಡ್ ಪ್ರಕರಣಗಳು ಏರಿಕೆಯಾಗುತ್ತಿದ್ದು, ಕಳೆದ ಒಂದು ವಾರದಲ್ಲಿ 81 ಪ್ರಕರಣಗಳು ದೃಢಪಟ್ಟಿವೆ. ಒಂದು ವಾರದಲ್ಲಿ 2,619 ಮಂದಿಯನ್ನು ಕೋವಿಡ್ ಪರೀಕ್ಷೆಗೆ ಒಳಪಡಿಸಲಾಗಿತ್ತು. ಆ ಪರೀಕ್ಷೆಯಲ್ಲಿ ಕೋವಿಡ್ ತಗುಲಿರುವುದು ಪತ್ತೆಯಾಗಿದೆ.

ರಾಜ್ಯದಲ್ಲಿ ಜನವರಿ 1ರಿಂದ ಇದುವರೆಗೆ 15,60,681 ಮಂದಿಯನ್ನು ಪರೀಕ್ಷೆಗೆ ಒಳಪಡಿಸಲಾಗಿತ್ತು. ಅದರಲ್ಲಿ 17,044 ಮಂದಿಗೆ ಕೋವಿಡ್ ದೃಢಪಟ್ಟಿದೆ ಎಂದು ಆರೋಗ್ಯ ಇಲಾಖೆ ತಿಳಿಸಿದೆ.

ಇದೇ ಅವಧಿಯಲ್ಲಿ ತೀವ್ರ ಉಸಿರಾಟದ ಸಮಸ್ಯೆ (ಸಾರಿ)ಯಿಂದ ಬಳುತ್ತಿರುವ 156 ರೋಗಿಗಳು ಆಸ್ಪತ್ರೆಗಳಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ. ಆದರೆ, ರಾಜ್ಯದಲ್ಲಿ ಈವರೆಗೂ ಕೋವಿಡ್ನ ಹೊಸ ರೂಪಾಂತರ ತಳಿ ಪತ್ತೆಯಾಗಿಲ್ಲ ಎಂದು ಇಲಾಖೆ ತಿಳಿಸಿದೆ. ಒಂದು ವಾರದಲ್ಲಿ ಡೆಂಗಿ 416, ಚಿಕೂನ್ಗುನ್ಯ 25, ಮಲೇರಿಯಾ 24 ಪ್ರಕರಣಗಳು ಪತ್ತೆಯಾಗಿವೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.