ಕೊಟ್ಟೂರು: ‘ರಾಜ್ಯದಲ್ಲಿ ಗೋ ಹತ್ಯೆ ನಿಷೇಧ ಕಾಯ್ದೆ ಜಾರಿಯಲ್ಲಿದ್ದರೂ ಆದೇಶ ಪಾಲನೆಯಾಗುತ್ತಿಲ್ಲ. ರಾಜ್ಯ ಸರ್ಕಾರ ಗೋ ಹಂತಕರಿಗೆ ರಕ್ಷಣೆಯಾಗಿ ನಿಂತಿರುವುದು ಆತಂಕಕಾರಿ ಬೆಳವಣಿಗೆ’ ಎಂದು ಬಿಜೆಪಿ ಪಕ್ಷದ ಯುವ ಮುಖಂಡ ಎಂ. ಮಲ್ಲಿಕಾರ್ಜುನ್ ಆರೋಪಿಸಿದರು.

ಪಟ್ಟಣದ ತಾಲ್ಲೂಕು ಕಚೇರಿಯಲ್ಲಿ ಸೋಮವಾರ ವಿಶ್ವ ಹಿಂದೂ ಪರಿಷತ್ ಹಾಗೂ ಬಿಜೆಪಿ ಪಕ್ಷದ ವತಿಯಿಂದ ತಹಶೀಲ್ದಾರ್ ಹಾಗೂ ಸರ್ಕಲ್ ಪೊಲೀಸ್ ಇನ್ಸ್ಪೆಕ್ಟರ್ ಅವರಿಗೆ ಮನವಿ ಸಲ್ಲಿಸಿ ಮಾತನಾಡಿದರು.

ಬಿಜೆಪಿ ಮುಖಂಡರಾದ ಬಿ.ಆರ್. ವಿಕ್ರಂ, ಬಸವರಾಜ್ ಕೋನಾಪುರ್, ವಿಶ್ವ ಹಿಂದೂ ಪರಿಷತ್ ಅಧ್ಯಕ್ಷ ಮಂಜುನಾಥ್ ಕಾಸಲ್ ಮಾತನಾಡಿದರು. ವೀರೇಶ್ ಗೌಡ, ಎಂ.ಎಂ.ಜೆ. ವಾಗೀಶ್, ಬಸವರಾಜ್, ನೂತನ್ ಪ್ರಸಾದ್, ಕಲ್ಲೇಶ್ ಪಾಟೀಲ್ ಇದ್ದರು.

ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ
260527-25-179293477

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.