ಬೆಂಗಳೂರು: ಗೆಜೆಟೆಡ್ ಪ್ರೊಬೇಷನರಿ 384 ಹುದ್ದೆಗಳ ಆಯ್ಕೆಗೆ ನಡೆದ ಮುಖ್ಯ ಪರೀಕ್ಷೆಯಿಂದ 1:3ರ ಅನುಪಾತದಲ್ಲಿ ವ್ಯಕ್ತಿತ್ವ ಪರೀಕ್ಷೆಗೆ (ಸಂದರ್ಶನ) ಅಭ್ಯರ್ಥಿಗಳ ಅರ್ಹತಾ ಪಟ್ಟಿ ಸಿದ್ಧಪಡಿಸಿದ ವೇಳೆ ಭ್ರಷ್ಟಾಚಾರ ನಡೆದಿದೆ ಎಂಬ ಆರೋಪಕ್ಕೆ ಸಂಬಂಧಿಸಿದಂತೆ ರಾಜ್ಯ ಸರ್ಕಾರದ ಮುಖ್ಯ ಕಾರ್ಯದರ್ಶಿ ಶಾಲಿನಿ ರಜನೀಶ್ ಅವರು ಕೆಪಿಎಸ್ಸಿಯಿಂದ ವರದಿ ಕೇಳಿದ್ದಾರೆ.

ಈ ಬಗ್ಗೆ ಪ್ರತಿಕ್ರಿಯಿಸಿರುವ ಕೆಪಿಎಸ್ಸಿ ಕಾರ್ಯದರ್ಶಿ ಕೆ. ಜ್ಯೋತಿ, ‘ಮುಖ್ಯ ಪರೀಕ್ಷೆಯಿಂದ ವ್ಯಕ್ತಿತ್ವ ಪರೀಕ್ಷೆಗೆ ಅರ್ಹರಾದ ಅಭ್ಯರ್ಥಿಗಳ ಪಟ್ಟಿ ತಯಾರಿಸುವ ವೇಳೆಯಲ್ಲಿ ಯಾವುದೇ ರೀತಿಯ ಭ್ರಷ್ಟಾಚಾರ ನಡೆದಿಲ್ಲ. ಅತ್ಯಂತ ಪಾರದರ್ಶಕವಾಗಿ ಪರೀಕ್ಷೆ ನಡೆಸಿ ಅರ್ಹರಾದವರ ಪಟ್ಟಿ ಬಿಡುಗಡೆ ಮಾಡಲಾಗಿದೆ. ಆಧಾರವಿಲ್ಲದೆ ಭ್ರಷ್ಟಾಚಾರದ ಆರೋಪ ಮಾಡುವುದು ಸರಿಯಲ್ಲ’ ಎಂದರು.

‘ಈ ವಿಚಾರವಾಗಿ ಸರ್ಕಾರದ ಮುಖ್ಯ ಕಾರ್ಯದರ್ಶಿ ವರದಿ ಕೇಳಿದ್ದಾರೆ. ಆಯೋಗದಿಂದ ವಿವರವಾದ ವರದಿಯನ್ನು ಗುರುವಾರ (ಫೆ. 5) ಸಲ್ಲಿಸುತ್ತೇವೆ. ಅಭ್ಯರ್ಥಿಗಳು ಮಾಡಿರುವ ಆರೋಪಗಳ ಬಗ್ಗೆ ಆಂತರಿಕವಾಗಿಯೂ ಪರಿಶೀಲಿಸುತ್ತೇವೆ’ ಎಂದರು.

‘ಒಂದೇ ಪರೀಕ್ಷಾ ಕೊಠಡಿಯಲ್ಲಿ ಮುಖ್ಯ ಪರೀಕ್ಷೆ ಬರೆದ 10ಕ್ಕೂ ಹೆಚ್ಚು ಅಭ್ಯರ್ಥಿಗಳು, ಅಲ್ಲದೆ, ಒಂದೇ ಕುಟುಂಬದ ಇಬ್ಬರು, ಮೂವರು ವ್ಯಕ್ತಿತ್ವ ಪರೀಕ್ಷೆಗೆ ಅರ್ಹತೆ ಪಡೆದಿರುವುದು ಅನುಮಾನಗಳಿಗೆ ಕಾರಣವಾಗಿದೆ’ ಎಂದು ಕೆಲವು ಅಭ್ಯರ್ಥಿಗಳು ದೂರಿದ್ದಾರೆ.

ಈ ಬಗ್ಗೆಯೂ ಸ್ಪಷ್ಟನೆ ನೀಡಿರುವ ಜ್ಯೋತಿ, ‘5,700ಕ್ಕೂ ಹೆಚ್ಚು ಅಭ್ಯರ್ಥಿಗಳು ಮುಖ್ಯ ಪರೀಕ್ಷೆ ಬರೆದಿದ್ದಾರೆ. ಒಂದು ಕೊಠಡಿಯಲ್ಲಿ 24 ಅಭ್ಯರ್ಥಿಗಳಿಗೆ ಪರೀಕ್ಷೆ ಬರೆಯಲು ಅವಕಾಶ ಮಾಡಿಕೊಡಲಾಗಿತ್ತು. ಅದರಲ್ಲಿ 10ರಿಂದ 12 ಅಭ್ಯರ್ಥಿಗಳು ಆಯ್ಕೆಯಾಗುವುದು ಸಹಜ’ ಎಂದರು.

ಈ ಹುದ್ದೆಗಳ ನೇಮಕಾತಿಗೆ 2025ರ ಮೇ ತಿಂಗಳಲ್ಲಿ ಮುಖ್ಯ ಪರೀಕ್ಷೆ ನಡೆದಿತ್ತು. 1:3ರ ಅನುಪಾತದಲ್ಲಿ ವ್ಯಕ್ತಿತ್ವ ಪರೀಕ್ಷೆಗೆ 1,152 ಅಭ್ಯರ್ಥಿಗಳು ಅರ್ಹತೆ ಪಡೆದಿದ್ದಾರೆ. ಅರ್ಹರ ಪಟ್ಟಿಯನ್ನು ಸಾಮಾಜಿಕ ಜಾಲತಾಣಗಳಲ್ಲಿ ಹಂಚಿಕೊಂಡಿರುವ ಕೆಲವು ಅಭ್ಯರ್ಥಿಗಳು, ಸಂದರ್ಶನಕ್ಕೆ ಅರ್ಹತೆ ಪಡೆದಿರುವವರ ಆಯ್ಕೆಯ ವೇಳೆಯಲ್ಲಿ ಭ್ರಷ್ಟಾಚಾರ ನಡೆದಿದೆ ಎಂದು ಆಕ್ರೋಶ ವ್ಯಕ್ತಪಡಿಸಿದ್ದಾರೆ. ಪೋಸ್ಟ್ಗಳನ್ನು ಮುಖ್ಯಮಂತ್ರಿ ಸಿದ್ದರಾಮಯ್ಯ, ಪ್ರಧಾನಿ ನರೇಂದ್ರ ಮೋದಿ ಅವರಿಗೂ ಟ್ಯಾಗ್ ಮಾಡಿ, ನ್ಯಾಯ ಒದಗಿಸಬೇಕೆಂದು ಆಗ್ರಹಿಸಿದ್ದಾರೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.