ಬೆಂಗಳೂರು: ರಾಜ್ಯ ಸರ್ಕಾರದ ವ್ಯಾಪ್ತಿಯ ದಿನಗೂಲಿ ನೌಕರರು ಹಾಗೂ ಅವರ ಅವಲಂಬಿತರಿಗೆ ₹5 ಲಕ್ಷದವರೆಗೆ ಆರೋಗ್ಯ ವಿಮೆ ಸೌಲಭ್ಯವನ್ನು ವಿಸ್ತರಿಸಿ ಆರೋಗ್ಯ ಇಲಾಖೆ ಆದೇಶ ಹೊರಡಿಸಿದೆ.

ಗುತ್ತಿಗೆ, ಹೊರಗುತ್ತಿಗೆ ಹಾಗೂ ಗೌರವಧನದ ಆಧಾರದ ಮೇಲೆ ಕಾರ್ಯನಿರ್ವಹಿಸುತ್ತಿದ್ದ ನೌಕರರು ಮತ್ತು ಅವರ ಅವಲಂಬಿತ ಸದಸ್ಯರಿಗೆ ಕಳೆದ ವರ್ಷ ರಾಜ್ಯ ಸರ್ಕಾರವು ₹5 ಲಕ್ಷದವರೆಗೆ ಆರೋಗ್ಯ ವಿಮೆ ಸೌಲಭ್ಯ ಜಾರಿಗೊಳಿಸಿತ್ತು. 3 ಲಕ್ಷ ಸಿಬ್ಬಂದಿ ಈ ವಿಮೆ ವ್ಯಾಪ್ತಿಗೆ ಒಳಪಟ್ಟಿದ್ದರು.

ನಗದುರಹಿತ ಚಿಕಿತ್ಸೆ ಒದಗಿಸುವ ಈ ಯೋಜನೆಯನ್ನು ಅರ್ಹ ದಿನಗೂಲಿ ನೌಕರರಿಗೂ ವಿಸ್ತರಿಸುವಂತೆ ಕರ್ನಾಟಕ ರಾಜ್ಯ ಸರ್ಕಾರಿ ದಿನಗೂಲಿ ನೌಕರರ ಕ್ಷೇಮಾಭಿವೃದ್ಧಿ ಸಂಘ ಸರ್ಕಾರಕ್ಕೆ ಮನವಿ ಮಾಡಿತ್ತು. ಅದರಂತೆ ಈಗ ಯೋಜನೆ ವಿಸ್ತರಿಸಿ ಆದೇಶ ಹೊರಡಿಸಲಾಗಿದೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.