‘ಮಾರಾಟಕ್ಕೆ ಜಾಗವಿದ್ದರೆ ಖರೀದಿಸಲು ಸಿದ್ಧ’
‘ನಾನು ವಿಧವೆಯರಿಗೆ ಗನ್ ಪಾಯಿಂಟ್ ಇಟ್ಟು ಆಸ್ತಿ ಬರೆಸಿಕೊಂಡಿದ್ದೇನೆ ಎಂದು ಅವರು ಆರೋಪಿಸಿದ್ದಾರೆ. ಹಾಗಿದ್ದರೆ ಅವರನ್ನು ಕರೆದುಕೊಂಡು ಬಂದು ನನ್ನ ವಿರುದ್ಧ ಎಫ್ಐಆರ್ ದಾಖಲಿಸಲಿ. ನನ್ನ ವಿರುದ್ಧ ಇರುವ ದಾಖಲೆಗಳನ್ನು ಕುಮಾರಸ್ವಾಮಿ ಬಿಚ್ಚಿಡಲಿ’ ಎಂದು ಶಿವಕುಮಾರ್ ಸವಾಲೆಸೆದರು. ‘ಕುಮಾರಸ್ವಾಮಿ ಕೇತಗಾನಹಳ್ಳಿಯಲ್ಲಿ ದಲಿತರ ಭೂಮಿ ಲೂಟಿ ಮಾಡಿದ್ದಾರೆ ಎಂದು ಯೋಗೀಶ್ವರ್ ಹೇಳಿದ್ದಾರೆ. ಅಲ್ಲಂ ವೀರಭದ್ರಪ್ಪ ಖರೀದಿ ಮಾಡಿದ್ದ ಆಸ್ತಿಯನ್ನು ನನ್ನ ಮಗಳು ಖರೀದಿ ಮಾಡಿದ್ದಾಳೆ. ನನ್ನ ಸಾಮರ್ಥ್ಯಕ್ಕೆ ಅನುಸಾರವಾಗಿ ನಾನು ಆಸ್ತಿ ಖರೀದಿ ಮಾಡುತ್ತೇನೆ. ಇನ್ನೂ ಮಾರಾಟಕ್ಕೆ ಸಿದ್ಧವಿರುವ ಜಾಗಗಳಿದ್ದರೆ ಹೇಳಿ ಖರೀದಿಸುತ್ತೇನೆ’ ಎಂದು ಅವರು ತಿಳಿಸಿದರು.