ಬೆಂಗಳೂರು: ‘ರಸ್ತೆ ಸಾರಿಗೆ ನಿಗಮಗಳಿಗೆ ಸದ್ಯ ಡೀಸೆಲ್ ಕೊರತೆಯ ಸಮಸ್ಯೆ ಇಲ್ಲ’ ಎಂದು ಸಾರಿಗೆ ಸಚಿವ ರಾಮಲಿಂಗಾ ರೆಡ್ಡಿ ತಿಳಿಸಿದರು.

ಸುದ್ದಿಗಾರರ ಜೊತೆ ಸೋಮವಾರ ಮಾತನಾಡಿದ ಅವರು, ‘ತಕ್ಷಣಕ್ಕೆ ನಾಲ್ಕು ನಿಗಮಗಳಿಗೂ ಯಾವುದೇ ಸಮಸ್ಯೆ ಇಲ್ಲ. ಯುದ್ಧ ಹೀಗೆಯೇ ಮುಂದುವರಿದರೆ ಸಮಸ್ಯೆ ಆಗಬಹುದು’ ಎಂದರು.

ಮತ ಕೇಳುವ ಹಕ್ಕು ಬಿಜೆಪಿಗಿದೆ: ದಾವಣಗೆರೆ ದಕ್ಷಿಣ ಕ್ಷೇತ್ರದಲ್ಲಿ ಮುಸ್ಲಿಂ ಮತಗಳನ್ನು ಸೆಳೆಯಲು ಬಿಜೆಪಿ ಪ್ರಯತ್ನಿಸುತ್ತಿರುವ ಬಗ್ಗೆ ಕೇಳಿದ ಪ್ರಶ್ನೆಗೆ, ‘ಮತ ಕೇಳುವ ಹಕ್ಕು ಬಿಜೆಪಿಗಿದೆ. ಈ ಕ್ಷೇತ್ರದ ಟಿಕೆಟ್ ನೀಡುವಂತೆ ಪಕ್ಷದ ನಾಯಕರಲ್ಲಿ ಮುಸ್ಲಿಮರು ಬೇಡಿಕೆ ಇಟ್ಟಿದ್ದರು. ಆದರೆ, ಕೊಡಲು ಸಾಧ್ಯವಾಗಿಲ್ಲ. ಮುಂದೆ ರಾಜ್ಯಸಭೆ, ಪರಿಷತ್ ಸ್ಥಾನ ಕೊಡುವುದಾಗಿ ತಿಳಿಸಲಾಗಿದೆ’ ಎಂದರು.

‘ಕಾಂಗ್ರೆಸ್ ಪಕ್ಷ ಟಿಕೆಟ್ ಕೊಟ್ಟಿಲ್ಲ ಎಂದು ಮುಸ್ಲಿಂ ಸಮುದಾಯದವರು ಬಿಜೆಪಿಗೆ ಮತ ಹಾಕುವುದಿಲ್ಲ. ಬಿಜೆಪಿ ನಾಯಕರು ಮುಸ್ಲಿಂ ಸಮುದಾಯದವರನ್ನು ಹೇಗೆ ನಡೆಸಿಕೊಳ್ಳುತ್ತಿದ್ದಾರೆಂದು ಗೊತ್ತಿಲ್ಲವೇ? ಅವರೂ ನಮ್ಮ ದೇಶದ ಪ್ರಜೆಗಳು ಎನ್ನುವುದನ್ನು ಬಿಜೆಪಿಯವರು ಅರ್ಥ ಮಾಡಿಕೊಳ್ಳಬೇಕು. ಸಂವಿಧಾನ ಸಮಾನತೆಯ ಹಕ್ಕು ಕೊಟ್ಟಿದೆ’ ಎಂದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.