ದಾವಣಗೆರೆ: ಸರಕು ಮತ್ತು ಸೇವಾ ತೆರಿಗೆ (ಜಿಎಸ್ಟಿ) ಸಂಗ್ರಹ ಹಾಗೂ ಹೂಡಿಕೆಯಲ್ಲಿ ದೇಶದಲ್ಲಿ ಎರಡನೇ ಸ್ಥಾನದಲ್ಲಿರುವ ಕರ್ನಾಟಕದ ಹಣಕಾಸು ಸ್ಥಿತಿ ಸುಭದ್ರವಾಗಿದೆ. ದೇಶದ ಆರ್ಥಿಕ ಸ್ಥಿತಿಗಿಂತ ರಾಜ್ಯ ಉತ್ತಮವಾಗಿದೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದರು.

ನಗರದ ಬಾಪೂಜಿ ಎಂಬಿಎ ಕಾಲೇಜು ಹೆಲಿಪ್ಯಾಡ್ನಲ್ಲಿ ಬುಧವಾರ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ‘ದೇಶದ ಜಿಡಿಪಿ ದರ 7.14 ಇದೆ. ರಾಜ್ಯದ ಜಿಡಿಪಿ 8.1 ಇದೆ. ಇದರಲ್ಲಿ ಯಾವ ಸರ್ಕಾರದ ಆರ್ಥಿಕ ಸ್ಥಿತಿ ಚೆನ್ನಾಗಿದೆ? ರಾಜಕೀಯ ಆರೋಪ ಮಾಡುವಾಗ ಎಚ್ಚರ ಇರಬೇಕು’ ಎಂದು ವಿರೋಧ ಪಕ್ಷದ ನಾಯಕ ಆರ್.ಅಶೋಕ ಅವರ ‘ಸಾಲದ ರಾಮಯ್ಯ’ ಆರೋಪಕ್ಕೆ ತಿರುಗೇಟು ನೀಡಿದರು.

₹ 165 ಲಕ್ಷ ಕೋಟಿ ಸಾಲ ಮಾಡಿದ ಮೋದಿ:

‘ರಾಜ್ಯದಲ್ಲಿ ಕಾಂಗ್ರೆಸ್ 2023ರಲ್ಲಿ ಅಧಿಕಾರಕ್ಕೆ ಬರುವ ಹೊತ್ತಿಗೆ ರಾಜ್ಯದ ಸಾಲ ₹ 5.30 ಲಕ್ಷ ಕೋಟಿ ಇತ್ತು. ರಾಜ್ಯದಲ್ಲಿ 2019 ರಿಂದ 2023ರವರೆಗೆ ಬಿಜೆಪಿ ಆಡಳಿತ ನಡೆಸಿತ್ತು. 2027ರ ಮಾರ್ಚ್ ಹೊತ್ತಿಗೆ ರಾಜ್ಯದ ಸಾಲ ₹8.24 ಲಕ್ಷ ಕೋಟಿಗೆ ಏರಿಕೆ ಆಗಲಿದೆ. ಸಾಲ ಯಾರು ಹೆಚ್ಚು ಮಾಡಿದವರು? ಎಂದು ಪ್ರಶ್ನಿಸಿದರು.

‘ನರೇಂದ್ರ ಮೋದಿ ಅವರು ಅಧಿಕಾರಕ್ಕೆ ಬಂದಾಗ ದೇಶದ ಒಟ್ಟು ಸಾಲ ₹ 53.11 ಲಕ್ಷ ಕೋಟಿ ಸಾಲ ಇತ್ತು. ಇದು ಸ್ವಾತಂತ್ರ್ಯ ಬಂದಾಗಿನಿಂದ 2013ರವರೆಗೆ ಎಲ್ಲ ಸರ್ಕಾರಗಳು ಮಾಡಿದ ಸಾಲವಾಗಿತ್ತು. ಈಗ ಸಾಲ ₹ 218 ಲಕ್ಷ ಕೋಟಿಗೆ ತಲುಪಿದೆ. ನರೇಂದ್ರ ಮೋದಿ ಅವರು 12 ವರ್ಷಗಳಲ್ಲಿ ಮಾಡಿದ ಸಾಲ ಒಟ್ಟು ₹165 ಲಕ್ಷ ಕೋಟಿ. ಈಗ ನರೇಂದ್ರ ಮೋದಿ ಅವರನ್ನು ಏನೆಂದು ಕರೆಯವುದು? ಎಂದು ಕುಟುಕಿದರು.

ತಳಸಮುದಾಯದ ಪರ ಆರ್ಥಿಕತೆ:

‘ವಿಶ್ವದಲ್ಲಿ ಎರಡು ರೀತಿಯ ಆರ್ಥಿಕ ವ್ಯವಸ್ಥೆ ಇವೆ. ಮೇಲ್ವರ್ಗದ ಜನರಿಗೆ ಅನುಕೂಲ ಮಾಡಿಕೊಡುವ ಹಾಗೂ ತಳಸಮುದಾಯದ ಜನರ ಏಳಿಗೆಗೆ ಶ್ರಮಿಸುವ ಆರ್ಥಿಕ ಸಿದ್ಧಾಂತಗಳಿವೆ. ಬಿಜೆಪಿ ಮೇಲ್ವರ್ಗದ ಪರವಾಗಿದ್ದರೆ, ಕಾಂಗ್ರೆಸ್ ತಳಸಮುದಾಯದ ಜನರ ಏಳಿಗೆಯ ಪರವಾಗಿದೆ. ಬಸವಣ್ಣ, ಅಂಬೇಡ್ಕರ್ ಹಾಗೂ ಮಹಾತ್ಮ ಗಾಂಧಿ ಅವರ ಆಶಯದಂತೆ ಕಟ್ಟಕಡೆಯ ವ್ಯಕ್ತಿಗಳ ಕಣ್ಣೀರು ಒರೆಸುವ ಕೆಲಸ ಮಾಡುತ್ತಿದ್ದೇವೆ’ ಎಂದು ಹೇಳಿದರು.

‘ಬಿಜೆಪಿ ಗ್ಯಾರಂಟಿ ಯೋಜನೆಗಳನ್ನು ವಿರೋಧ ಮಾಡುತ್ತಿದೆ. ಬಡಜನರ ಕಾರ್ಯಕ್ರಮಗಳನ್ನು ಬಿಜೆಪಿ ಯಾವಾಗಲೂ ವಿರೋಧ ಮಾಡುತ್ತಲೇ ಬರುತ್ತಿದೆ. ಗ್ಯಾರಂಟಿ ಯೋಜನೆಯಲ್ಲಿ ಫಲಾನುಭವಿಗಳ ಬ್ಯಾಂಕ್ ಖಾತೆಗೆ ನೇರವಾಗಿ ಹಣ ವರ್ಗಾವಣೆ ಮಾಡುತ್ತಿದ್ದೇವೆ. ಇದರಿಂದ ಭ್ರಷ್ಟಾಚಾರ ನಡೆಯಲು ಸಾಧ್ಯವಿಲ್ಲ. ಬಿಜೆಪಿ ಆರೋಪಗಳಲ್ಲಿ ಹುರುಳು ಇಲ್ಲ’ ಎಂದು ತಿರುಗೇಟು ನೀಡಿದರು.

ದಾವಣಗೆರೆಗೆ ಬಿಜೆಪಿ ಕೊಡುಗೆ ಏನು?

‘2019ರಿಂದ 2023ರವರೆಗೆ ನಾಲ್ಕು ವರ್ಷ ಅಧಿಕಾರದಲ್ಲಿ ಇದ್ದ ಬಿಜೆಪಿ ರಾಜ್ಯದ ಅಭಿವೃದ್ಧಿಗೆ ಶ್ರಮಿಸಲಿಲ್ಲ. ಮಧ್ಯ ಕರ್ನಾಟಕದ ದಾವಣಗೆರೆಗೆ ಏನು ಕೊಡುಗೆ ಕೊಟ್ಟಿದ್ದೀರಿ ಎಂದು ಪ್ರಶ್ನಿಸಿದ ಅವರು, ‘ದಾವಣಗೆರೆ ಹಾಗೂ ಬಾಗಲಕೋಟೆ ಕ್ಷೇತ್ರಗಳ ಉಪಚುನಾವಣೆಯಲ್ಲಿ ದೊಡ್ಡ ಮತಗಳ ಅಂತರದಲ್ಲಿ ಗೆಲ್ಲುತ್ತೇವೆ ಎಂಬ ವಿಶ್ವಾಸ ಇದೆ’ ಎಂದರು.

‘ಚುನಾವಣಾ ಆಯೋಗ ಕೇಂದ್ರ ಸರ್ಕಾರದ ಹಿಡಿತದಲ್ಲಿ ಇದೆ. ಮತದಾರರ ಪಟ್ಟಿಯನ್ನು ದುರುಪಯೋಗ ಮಾಡಿಕೊಳ್ಳುವ ಅವಕಾಶ ಇರುವುದು ಕೇಂದ್ರಕ್ಕೆ ಮಾತ್ರ. ಜವಾಹರಲಾಲ್ ನೆಹರೂ ಹಾಗೂ ಇಂದಿರಾಗಾಂಧಿ ಅವರು ಅಧಿಕಾರದಲ್ಲಿ ಇದ್ದಾಗ ಆಯೋಗವನ್ನು ದುರುಪಯೋಗ ಮಾಡಿಕೊಂಡ ಆರೋಪ ಕೇಳಿ ಬಂದಿಲ್ಲ. ಇಂತಹ ಆರೋಪಕ್ಕೆ ಗುರಿ ಆಗಿರುವ ದೇಶದ ಏಕೈಕ ಪ್ರಧಾನಿ ನರೇಂದ್ರ ಮೋದಿ’ ಎಂದು ಆರೋಪಿಸಿದರು.

ಜಿಲ್ಲಾ ಉಸ್ತುವಾರಿ ಸಚಿವ ಎಸ್.ಎಸ್.ಮಲ್ಲಿಕಾರ್ಜುನ್, ಉನ್ನತ ಶಿಕ್ಷಣ ಸಚಿವ ಡಾ.ಎಂ.ಸಿ.ಸುಧಾಕರ್, ಮಾಜಿ ಸಚಿವ ಎಚ್.ಆಂಜನೇಯ ಇದ್ದರು.

‘ಏ. 5ರಿಂದ ಪ್ರಚಾರಕ್ಕೆ ಸಚಿವ ಜಮೀರ್’

‘ವಸತಿ ಸಚಿವ ಜಮೀರ್ ಅಹ್ಮದ್ ಖಾನ್ ಅವರು ಏ.5ರಿಂದ ದಾವಣಗೆರೆ ಹಾಗೂ ಬಾಗಲಕೋಟೆ ಉಪಚುನಾವಣೆಯ ಪ್ರಚಾರಕ್ಕೆ ಬರಲಿದ್ದಾರೆ’ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದರು.

‘ಜಮೀರ್ ಅಹ್ಮದ್ ಅವರಿಗೆ ಕೇರಳ ಚುನಾವಣಾ ಜವಾಬ್ದಾರಿ ನೀಡಲಾಗಿದೆ. ಎಐಸಿಸಿ ಪ್ರಧಾನ ಕಾರ್ಯದರ್ಶಿ ವೇಣುಗೋಪಾಲ ಅವರೊಂದಿಗೆ ಈ ಕುರಿತು ಮಾತನಾಡಿದ್ದೇನೆ. ಏ.4ರ ಬಳಿಕ ಜಮೀರ್ ಅವರನ್ನು ಕರ್ನಾಟಕಕ್ಕೆ ಕಳುಹಿಸಿಕೊಡುವುದಾಗಿ ಹೇಳಿದ್ದಾರೆ’ ಎಂದರು.
.VIDEO: ದಾವಣಗೆರೆ ದಕ್ಷಿಣ ಉಪಚುನಾವಣೆ - ಸಮರ್ಥ್ ಹಾಗೂ ಶ್ರೀನಿವಾಸ ನಡುವೆ ಹಣಾಹಣಿ.ದಾವಣಗೆರೆ ದಕ್ಷಿಣ ವಿಧಾನಸಭಾ ಕ್ಷೇತ್ರದ ಉಪಚುನಾವಣೆ: ಪ್ರಚಾರ ಕಣಕ್ಕೆ ಸಿದ್ದರಾಮಯ್ಯ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.