ಬೆಂಗಳೂರು: ಕರ್ನಾಟಕ ರಾಜ್ಯ ಪ್ರಾಥಮಿಕ ಶಾಲಾ ಶಿಕ್ಷಕರ ಸಂಘ ಅರಮನೆ ಮೈದಾನದಲ್ಲಿ ಫೆ. 28ರಂದು ರಾಜ್ಯಮಟ್ಟದ ಶೈಕ್ಷಣಿಕ ಮಹಾಸಮ್ಮೇಳನ, ಅಭಿನಂದನಾ ಸಮಾರಂಭ ಹಮ್ಮಿಕೊಂಡಿದೆ.

ತ್ರಿಪುರವಾಸಿನಿಯಲ್ಲಿ ಬೆಳಿಗ್ಗೆ 10ರಿಂದ ಆರಂಭವಾಗುವ ಸಂಘದ ಸುವರ್ಣ ಸಂಭ್ರಮದ ನೆನಪಿಗಾಗಿ ಹಮ್ಮಿಕೊಂಡಿರುವ ಈ ಕಾರ್ಯಕ್ರಮವನ್ನು ಮುಖ್ಯಮಂತ್ರಿ ಸಿದ್ದರಾಮಯ್ಯ ಉದ್ಘಾಟಿಸಲಿದ್ದಾರೆ. ಉಪಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್, ಶಾಲಾ ಶಿಕ್ಷಣ ಸಚಿವ ಮಧು ಬಂಗಾರಪ್ಪ ಸೇರಿದಂತೆ ಹಲವು ಸಚಿವರು, ಶಾಸಕರು, ವಿಧಾನಪರಿಷತ್ ಸದಸ್ಯರು ಸೇರಿದಂತೆ ಹಲವು ಗಣ್ಯರು ಭಾಗವಹಿಸಲಿದ್ದಾರೆ.

ಸಮಾವೇಶದಲ್ಲಿ ಪ್ರಾಥಮಿಕ ಶಾಲಾ ಶಿಕ್ಷಕರ ಹಲವು ಬೇಡಿಕೆಗಳ ಈಡೇರಿಕೆಗೆ ಆಗ್ರಹಿಸಲಾಗುವುದು. ಶಿಕ್ಷಕರ 23 ಬೇಡಿಕೆಗಳನ್ನು ಕಾಲಮಿತಿಯ ಒಳಗೆ ಈಗಾಗಲೇ ಈಡೇರಿಸಿರುವ ಮುಖ್ಯಮಂತ್ರಿ, ಉಪಮುಖ್ಯಮಂತ್ರಿ, ಶಿಕ್ಷಣ ಸಚಿವರನ್ನು ಒಳಗೊಂಡು ವಿಧಾನ ಪರಿಷತ್ ಸದಸ್ಯರು, ಶಿಕ್ಷಣ ಇಲಾಖೆಯ ಅಧಿಕಾರಿಗಳು ಸೇರಿದಂತೆ ಹಲವರನ್ನು ಸನ್ಮಾನಿಸಲಾಗುವುದು ಎಂದು ಸಂಘದ ಅಧ್ಯಕ್ಷ ಚಂದ್ರಶೇಖರ ನುಗ್ಗಲಿ ಮಾಹಿತಿ ನೀಡಿದ್ದಾರೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.