ಶನಿವಾರ, 27 ಜುಲೈ 2024
×
ADVERTISEMENT
ಈ ಕ್ಷಣ :
ADVERTISEMENT

Karnataka Election 2023 | ವರುಣಾದಲ್ಲಿ ಕಾಂಗ್ರೆಸ್–ಬಿಜೆಪಿ ಮೈತ್ರಿ: ಎಚ್‌ಡಿಕೆ

Last Updated 6 ಏಪ್ರಿಲ್ 2023, 11:09 IST
ಅಕ್ಷರ ಗಾತ್ರ

ಮೈಸೂರು: ‘ವರುಣಾ ವಿಧಾನಸಭಾ ಕ್ಷೇತ್ರದಲ್ಲಿ ಕಾಂಗ್ರೆಸ್- ಬಿಜೆಪಿ ಮೈತ್ರಿ ಮಾಡಿಕೊಂಡಿವೆ’ ಎಂದು ಜೆಡಿಎಸ್‌ ಶಾಸಕಾಂಗ ಪಕ್ಷದ ನಾಯಕ ಎಚ್.ಡಿ.ಕುಮಾರಸ್ವಾಮಿ ದೂರಿದರು.

ಪಿರಿಯಾಪಟ್ಟಣ ತಾಲ್ಲೂಕಿನ ಕಂಪಲಾಪುರದಲ್ಲಿ ಪತ್ರಕರ್ತರೊಂದಿಗೆ ಗುರುವಾರ ಮಾತನಾಡಿದ ಅವರು, ‘ಕಾಂಗ್ರೆಸ್ ಅಭ್ಯರ್ಥಿ ಸಿದ್ದರಾಮಯ್ಯ ಅವರನ್ನು ಗೆಲ್ಲಿಸಲು ಬಿಜೆಪಿ ಅನುಕೂಲ ಮಾಡಿಕೊಡುತ್ತಿದೆ. ಬಿಜೆಪಿಯು ಅಲ್ಲಿ ಸಮರ್ಥ ಅಭ್ಯರ್ಥಿ ಕಣಕ್ಕಿಳಿಸುತ್ತಿಲ್ಲ’ ಎಂದರು.

‘ಜೆಡಿಎಸ್ ಯಾರೊಂದಿಗೂ ಒಳ ಒಪ್ಪಂದ ಮಾಡಿಕೊಂಡಿಲ್ಲ. 123 ಸ್ಥಾನ ಗೆಲ್ಲಲು ಹೋರಾಟ ಮಾಡುತ್ತಿದ್ದೇವೆ’ ಎಂದು ಪ್ರತಿಕ್ರಿಯಿಸಿದರು.

‘ವೈ.ಎಸ್.ವಿ.ದತ್ತ ನಮ್ಮ ಪಕ್ಷ ಬಿಟ್ಟು ಹೋಗಿದ್ದರೆ. ಅವರು ಯಾಕೆ ಕಾಂಗ್ರೆಸ್‌ ಟಿಕೆಟ್‌ ತಪ್ಪಿಸಿಕೊಂಡರೋ ಗೊತ್ತಿಲ್ಲ. ಆ ಬಗ್ಗೆ ನಾ‌ನು ಮಾತನಾಡುವುದಿಲ್ಲ’ ಎಂದರು.

ಬಿಜೆಪಿಯು ಪ್ರಚಾರಕ್ಕೆ ಸುದೀಪ್ ಹಾಗೂ ಪವನ್ ಕಲ್ಯಾಣ್ ಕರೆತರುತ್ತಿರುವ ವಿಚಾರದ ಲೇವಡಿ ಮಾಡಿದ ಅವರು, ‘ಪ್ರಧಾನಿ ನರೇಂದ್ರ ಮೋದಿಯಂತಹ ಸ್ಟಾರ್ ನಟರ ಕೈಯಲ್ಲೇ ಜನರನ್ನು ಸೆಳೆಯಲು ಆಗುತ್ತಿಲ್ಲ. ಹೀಗಿರುವಾಗ ಸ್ಟಾರ್ ನಟರು ಏನು ಮಾಡುತ್ತಾರೆ ನೋಡೋಣ’ ಎಂದು ಹೇಳಿದರು.

‘ಹಾಸನ ಟಿಕೆಟ್ ಪಕ್ಷದ ಕಾರ್ಯಕರ್ತನಿಗೇ ಕೊಡುವುದು ಎಂದು ಹೇಳಿದ್ದೇನೆ. ಹಾಗೆಯೇ ನಿರ್ಣಯ ಕೈಗೊಳ್ಳಲಾಗುವುದು. ಕುಟುಂಬದಿಂದ ಯಾರೂ ಸ್ಪರ್ಧಿಸುವುದಿಲ್ಲ’ ಎಂದು ತಿಳಿಸಿದರು.

‘ಭವಾನಿ ರೇವಣ್ಣಗೆ ಟಿಕೆಟ್ ಕೊಟ್ಟರೆ ಅನಿತಾ ಕುಮಾರಸ್ವಾಮಿ ಸ್ಪರ್ಧಿಸುತ್ತಾರೆ’ ಎನ್ನಲಾಗುತ್ತಿದೆಯಲ್ಲಾ ಎಂಬ ಪ್ರಶ್ನೆಗೆ, ‘ಅನಿತಾ ಕುಮಾರಸ್ವಾಮಿ ಸ್ಪರ್ಧಿಸುವ ಪ್ರಶ್ನೆ ಇಲ್ಲ. ಎರಡು ಬಾರಿ ಪಕ್ಷದಲ್ಲಿ ಅಭ್ಯರ್ಥಿ ಇಲ್ಲದಿದ್ದರಿಂದ ಅನಿವಾರ್ಯವಾಗಿ ಸ್ಪರ್ಧಿಸಿದ್ದರು. ಮುಂದೆ ಯಾವುದೇ ಕಾರಣಕ್ಕೂ ಅವರು ಅಭ್ಯರ್ಥಿಯಾಗುವುದಿಲ್ಲ’ ಎಂದು ಸ್ಪಷ್ಟಪಡಿಸಿದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT