ಭಾನುವಾರ, 5 ಮೇ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಕಾಂಗ್ರೆಸ್‌ ಸೇರಿದ ವಿವಿಧ ದಲಿತ ಸಂಘಟನೆಗಳ ಪದಾಧಿಕಾರಿಗಳು

Published 6 ಮೇ 2023, 9:56 IST
Last Updated 6 ಮೇ 2023, 9:56 IST
ಅಕ್ಷರ ಗಾತ್ರ

ಬೆಂಗಳೂರು: ಕರ್ನಾಟಕ ಸಾಮರಸ್ಯ ಸಮಿತಿ ರಾಜ್ಯ ಘಟಕದ ಅಧ್ಯಕ್ಷ ಕೃಷ್ಣಪ್ಪ, ಭೀಮ್ ಪ್ರಜಾಸಂಘದ ರಾಜ್ಯ ಘಟಕದ ಅಧ್ಯಕ್ಷ ವೈಟ್ ಫೀಲ್ಡ್ ಮುರುಗೇಶ್, ಕರ್ನಾಟಕ ಸಮಗ್ರ ಸೈನಿಕ ದಳ ಮಹಿಳಾ ಘಟಕದ ಅಧ್ಯಕ್ಷರಾದ ಕಮಲಮ್ಮ, ದಲಿತ ಸಂಘರ್ಷ ಸಮಿತಿ ಪದಾಧಿಕಾರಿಗಳು ಸೇರಿದಂತೆ ವಿವಿಧ ದಲಿತ ಸಂಘಟನೆಗಳ ಪದಾಧಿಕಾರಿಗಳು ಕಾಂಗ್ರೆಸ್ ಪಕ್ಷ ಸೇರಿದ್ದಾರೆ.

ಕೆಪಿಸಿಸಿ ಕಚೇರಿಯಲ್ಲಿ ಶನಿವಾರ ನಡೆದ ಕಾರ್ಯಕ್ರಮದಲ್ಲಿ ಕೆಪಿಸಿಸಿ ಎಸ್‌ಸಿ ಘಟಕದ ಅಧ್ಯಕ್ಷ ಧರ್ಮಸೇನಾ ಅವರ ನೇತೃತ್ವದಲ್ಲಿ ಅವರೆಲ್ಲರೂ ಕಾಂಗ್ರೆಸ್‌ ಸೇರಿದರು.

ಈ ಸಂದರ್ಭದಲ್ಲಿ ಮಾತನಾಡಿದ ಧರ್ಮಸೇನಾ, ‘ದಲಿತರೆಲ್ಲರೂ ಒಗ್ಗೂಡುವ ಪರಿಸ್ಥಿತಿ ನಿರ್ಮಾಣವಾಗಿದೆ. ದಲಿತರ ಏಳಿಗೆ, ಅಭಿವೃದ್ಧಿಗೆ ಕಂಟಕ, ಅಪಾಯ ಎದುರಾದ ಸಂದರ್ಭದಲ್ಲಿ ಕಾಂಗ್ರೆಸ್ ಪಕ್ಷದಲ್ಲಿ ಮಲ್ಲಿಕಾರ್ಜುನ ಖರ್ಗೆ ಅವರನ್ನು ಅಧ್ಯಕ್ಷರನ್ನಾಗಿ ನೇಮಿಸಿ ಪಕ್ಷ ಚೈತನ್ಯ ತುಂಬಿದೆ. ಇನ್ನು ಜಿ. ಪರಮೇಶ್ವರ ಅವರನ್ನು ಪ್ರಣಾಳಿಕೆ ಸಮಿತಿ ಅಧ್ಯಕ್ಷರನ್ನಾಗಿ ಮಾಡಿದೆ. ಆ ಮೂಲಕ ದಲಿತರಿಗೆ ಕಾಂಗ್ರೆಸ್ ಪಕ್ಷದಲ್ಲಿ ಉತ್ತಮ ಸ್ಥಾನಮಾನ ನೀಡಿ ಸಮುದಾಯಕ್ಕೆ ಶಕ್ತಿ ತುಂಬಲಾಗಿದೆ’ ಎಂದರು.

‘ಅಂಬೇಡ್ಕರ್ ಅವರ ಹೆಸರಿನಲ್ಲಿ ರಾಜ್ಯದಲ್ಲಿ ಸುಮಾರು 20 ಸಾವಿರ ಸಂಘಟನೆಗಳಿವೆ. ನಾನು ಕಾಂಗ್ರೆಸ್ ಪರಿಶಿಷ್ಟ ಜಾತಿ ಘಟಕದ ಅಧ್ಯಕ್ಷನಾಗಿ ನೇಮಕಗೊಂಡ ನಂತರ ‘ದಲಿತರ ನಡೆ ಕಾಂಗ್ರೆಸ್ ಕಡೆ‘ ಎಂಬ ಕಾರ್ಯಕ್ರಮದ ಮೂಲಕ ಸ್ಥಳೀಯ ಮಟ್ಟದಲ್ಲಿ ದಲಿತ ಸಮುದಾಯದವರನ್ನು ಕಾಂಗ್ರೆಸ್ ಪಕ್ಷಕ್ಕೆ ಕರೆ ತರಬೇಕು ಎಂದು ನಮ್ಮ ಘಟಕದ ಎಲ್ಲ ಪದಾಧಿಕಾರಿಗಳಿಗೆ ಸೂಚನೆ ನೀಡಿದೆ. ದಲಿತರಿಗಾಗಿ ಕಾಂಗ್ರೆಸ್ ಈಗಾಗಲೇ 10 ವಿಶೇಷ ಕಾರ್ಯಕ್ರಮವನ್ನು ಪ್ರಕಟಿಸಿದೆ. ಇದರ ಹೊರತಾಗಿ ದಲಿತರ ಸಮಸ್ಯೆ ಏನೇ ಇದ್ದರೂ ಅದನ್ನು ಬಗೆಹರಿಸಲು ಕಾಂಗ್ರೆಸ್ ಪ್ರಾಮಾಣಿಕ ಪ್ರಯತ್ನ ಮಾಡಲಿದೆ’ ಎಂದು ತಿಳಿಸಿದರು.

‘ನಮ್ಮ ನೆಚ್ಚಿನ ನಾಯಕರಾದ ಮಲ್ಲಿಕಾರ್ಜುನ ಖರ್ಗೆ ಅವರ ಹತ್ಯೆಗೆ ಸಂಚು ರೂಪಿಸಿರುವ ವಿಚಾರ ಬಹಿರಂಗವಾಗಿದ್ದು, ಇನ್ನು ಪರಮೇಶ್ವರ ಅವರ ತಲೆಗೆ ಕಲ್ಲೇಟು ಬಿದ್ದಿದೆ. ಈ ದಾಳಿ ಯಾರಿಂದ ಆಗಿದೆ ಎಂದು ಪತ್ತೆ ಹಚ್ಚಲು ಸರ್ಕಾರ ವಿಫಲವಾಗಿದೆ. ದೊಡ್ಡ ನಾಯಕರ ಪರಿಸ್ಥಿತಿ ಹೀಗಾದರೆ ಹಳ್ಳಿಗಳಲ್ಲಿರುವ ದಲಿತರ ಪರಿಸ್ಥಿತಿ ಏನು? ಖರ್ಗೆ ಅವರ ಹತ್ಯೆಗೆ ಸಂಚು ರೂಪಿಸಿರುವ ವಿಚಾರ ಖಂಡನೀಯ. ಈ ವಿಚಾರದಲ್ಲಿ ಸರ್ಕಾರ ಸೂಕ್ತ ಕ್ರಮ ಕೈಗೊಳ್ಳಬೇಕು. ಚುನಾವಣಾ ಆಯೋಗ ಈ ವಿಚಾರದಲ್ಲಿ ಸೂಕ್ತ ಕ್ರಮಕೈಗೊಂಡು ದಲಿತರ ರಕ್ಷಣೆ ಮಾಡಬೇಕು’ ಎಂದೂ ಅವರು ಆಗ್ರಹಿಸಿದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT