ಯಲಬುರ್ಗಾ (ಕೊಪ್ಪಳ ಜಿಲ್ಲೆ): ಮುಂದಿನ ಚುನಾವಣೆಯಲ್ಲಿ ಗೆದ್ದರೆ ಮುಖ್ಯಮಂತ್ರಿ ಆಗಲು ಸಿದ್ದರಾಮಯ್ಯ ಹಾಗೂ ಕೆಪಿಸಿಸಿ ಅಧ್ಯಕ್ಷ ಡಿ.ಕೆ. ಶಿವಕುಮಾರ್ ನಡುವೆ ಕಾಂಗ್ರೆಸ್ ನಲ್ಲಿ ಪೈಪೋಟಿ ಎರ್ಪಟ್ಟಿರುವ ಈ ಸಮಯದಲ್ಲಿಯೇ ಶಾಸಕ ಬೈರತಿ ಸುರೇಶ್ ಸೇರಿದಂತೆ ಕಾಂಗ್ರೆಸ್ ನ ಹಲವು ನಾಯಕರು ಮುಂದಿನ ಮುಖ್ಯಮಂತ್ರಿ ಸಿದ್ದರಾಮಯ್ಯ ಆಗಬೇಕು ಎಂದು ಆಗ್ರಹಿಸಿದರು.

ಯಲಬುರ್ಗಾದಲ್ಲಿ ಶನಿವಾರ ನಡೆದ ಕ್ರಾಂತಿವೀರ ಸಂಗೊಳ್ಳಿ ರಾಯಣ್ಣ ಮೂರ್ತಿ ಅನಾವರಣ ಹಾಗೂ ಶಿಲಾಮಂಟಪ ಉದ್ಘಾಟನೆ ಸಮಯದಲ್ಲಿ ಮಾತನಾಡಿದ ಬೈರತಿ ಸುರೇಶ್ 'ದೇಶಕ್ಕೆ ಒಳ್ಳೆಯದನ್ನು ಮಾಡಲು ಸಿದ್ದರಾಮಯ್ಯ ಅನೇಕ ಅಭಿವೃದ್ಧಿ ಕೆಲಸಗಳನ್ನು ಮಾಡಿದ್ದಾರೆ. ಅನೇಕ ಭಾಗ್ಯಗಳನ್ನು ಕೊಟ್ಟಿದ್ದಾರೆ. ಅವರು ಅತ್ಯಂತ ಪ್ರಾಮಾಣಿಕ ರಾಜಕಾರಣಿ. ಹಿಂದಿನ ಎಲ್ಲಾ ಅಭಿವೃದ್ಧಿ ಕೆಲಸಗಳು ಮರಳಿ ಬರಲು ಸಿದ್ದರಾಮಯ್ಯ ಮುಖ್ಯಮಂತ್ರಿ ಆಗಬೇಕು' ಎಂದರು.

ರಾಜ್ಯ ಅಭಿವೃದ್ಧಿ ಆಗಲು ಸಿದ್ದರಾಮಯ್ಯ ಮುಖ್ಯಮಂತ್ರಿ ಆಗುವುದು ಸೂಕ್ತ ಎಂದು ಭಾಷಣದ ಮೇಜು ಕುಟ್ಟಿ ಗಟ್ಟಿಯಾಗಿ ಭಾವಾವೇಷದಿಂದ ಹೇಳಿದರು.

ಕೊಪ್ಪಳ ಕಾಂಗ್ರೆಸ್ ಶಾಸಕ ರಾಘವೆಂದ್ರ ಹಿಟ್ನಾಳ ತಮ್ಮ ಭಾಷಣದಲ್ಲಿ ಸಿದ್ದರಾಮಯ್ಯ ಅವರು ಕೊಟ್ಟ ಅನೇಕ ಭಾಗ್ಯಗಳಿಂದ ಅಭಿವೃದ್ಧಿ ಕೆಲಸಗಳು ಆಗಿವೆ. ಮರಳಿ ಅವರನ್ನೇ ಮುಖ್ಯಮಂತ್ರಿ ಮಾಡಬೇಕು ಎಂದರು. ಕಾಂಗ್ರೆಸ್ ಅಧಿಕಾರಕ್ಕೆ ತರಲು ಎಲ್ಲರೂ ಕೈ ಜೋಡಿಸಬೇಕು ಎಂದು ಮನವಿ ಮಾಡಿದರು.

ಮಾಜಿ ಸಚಿವ ಬಸವರಾಜ ರಾಯರಡ್ಡಿ ಮಾತನಾಡಿ ಯಾವ ವ್ಯಕ್ತಿ ಯಾವ ಪಕ್ಷದವರೇ ಇರಲಿ, ಒಳ್ಳೆಯ ಕೆಲಸ ಮಾಡಿದಾಗ ಅವರನ್ನು ಮೆಚ್ಚಿಕೊಳ್ಳಬೇಕು. ಜನಪರವಾಗಿ ಇರುವ, ಆರ್ಥಿಕ ಶಿಸ್ತು ಹೊಂದಿರುವ ಸಿದ್ದರಾಮಯ್ಯ ಮುಖ್ಯಮಂತ್ರಿ ಆಗಬೇಕು ಎಂದಾಗ ನೆರೆದಿದ್ದ ಹಾಲುಮತ ಸಮಾಜದ ಜನ ಚಪ್ಪಾಳೆ ಹೊಡೆದರು

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.