ಭಾನುವಾರ, 14 ಜುಲೈ 2024
×
ADVERTISEMENT
ಈ ಕ್ಷಣ :
ADVERTISEMENT

ದಾವಣಗೆರೆ | ಬಿಜೆಪಿ ಮಹಾಸಂಗಮಕ್ಕೆ ಜನಸಾಗರ

Last Updated 25 ಮಾರ್ಚ್ 2023, 12:16 IST
ಅಕ್ಷರ ಗಾತ್ರ

ದಾವಣಗೆರೆ: ಬೆಣ್ಣೆನಗರಿ ದಾವಣಗೆರೆಯಲ್ಲಿ ಶನಿವಾರ ಮೋದಿ ಹವಾ..ಬಿಜೆಪಿಯ ವಿಜಯ ಸಂಕಲ್ಪ ಯಾತ್ರೆಯ ಸಮಾರೋಪ ಸಮಾರಂಭ ಮಹಾಸಂಗಮದಲ್ಲಿ ಭಾಗವಹಿಸಿದ್ದ ಪ್ರಧಾನಿ ನರೇಂದ್ರ ಮೋದಿ ನೋಡಲು ಜನಸಾಗರವೇ ಹರಿದುಬಂದಿತ್ತು.

ರಾಜ್ಯದ ವಿವಿಧೆಡೆಯಿಂದ ಲಕ್ಷಾಂತರ ಜನರು ತಂಡೋಪತಂಡವಾಗಿ ಬಂದರು.. ಇಲ್ಲಿನ ಸಂಗೊಳ್ಳಿ ರಾಯಣ್ಣ ವೃತ್ತದಿಂದ ಜಿಎಂಐಟಿ ಕಾಲೇಜಿನವರೆಗೆ ಎತ್ತ ಕಣ್ಣಾಯಿಸಿದರೂ ಕೇಸರಿಮಯ. ಎಲ್ಲೆಲ್ಲೂ ಕೇಸರಿ, ಬಿಜೆಪಿ ಬಾವುಟಗಳು ರಾರಾಜಿಸಿದವು.

ದಾರಿಯಲ್ಲಿ ಜನರಿಗೆ ಮಜ್ಜಿಗೆ, ಕುಡಿಯುವ ನೀರು, ಹಣ್ಣಿನ ವ್ಯವಸ್ಥೆ ಮಾಡಲಾಗಿತ್ತು. ಸಾವಿರಾರು ಜನರು ಊಟ ಸವಿದರು. ಬೆಳಿಗ್ಗೆ ಉಪ್ಪಿಟ್ಟು, ಕೇಸರಿ ಬಾತ್, ಮಧ್ಯಾಹ್ನ ಗೋಧಿ ಪಾಯಸ, ಪುಲಾವ್, ಮೊಸರನ್ನು ಸವಿದರು.

ಮೋದಿ ಆಗಮಿಸುತ್ತಿದ್ದಂತೆ ಜನರ ಹರ್ಷೋದ್ಘಾರ ಮುಗಿಲು ಮುಟ್ಟಿತ್ತು.
ಕಾರು, ಲಾರಿ, ಬಸ್‌ಗಳ ಮೂಲಕ ಲಕ್ಷಾಂತರ ಜನರು ಬಂದರು. ದಾವಣಗೆರೆ ಜಿಲ್ಲೆ ಸೇರಿದಂತೆ ಶಿವಮೊಗ್ಗ, ಹಾವೇರಿ, ಚಿತ್ರದುರ್ಗ, ತುಮಕೂರು, ಬಳ್ಳಾರಿ, ವಿಜಯನಗರ, ಗದಗ ಸೇರಿದಂತೆ ವಿವಿಧ ಜಿಲ್ಲೆಗಳ ಜನರು ಬಂದಿದ್ದರು. ಆಗಮಿಸಿದರು. ಬಿಜೆಪಿ ಮುಖಂಡರು, ಶಾಸಕರು ಬಸ್ ವ್ಯವಸ್ಥೆ ಮಾಡಿದ್ದರು. ಸಾವಿರಾರು ಬಸ್‌ಗಳ ಮೂಲಕ ಜನರು ತಂಡೋಪತಂಡವಾಗಿ ಬಂದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT