ಅಸಲಿ ವಿಷಯ ಅದಲ್ಲ! ಈಗಲ್ಲ, ಸನ್ಮಾನ್ಯ ಶ್ರೀ @narendramodi ಅವರು ಗುಜರಾತ್ ಮುಖ್ಯಮಂತ್ರಿ ಆಗಿದ್ದಾಗಲೇ ಕೆಎಂಎಫ್ ಅನ್ನು ಮುಗಿಸಲು ಸುಪಾರಿ ಕೊಡಲಾಗಿತ್ತು!! ಅಂದರೆ 2008ರಲ್ಲೇ ಕನ್ನಡಿಗರ ಮೇಲೆ ಅಮುಲ್ ಅನ್ನು ಹೇರಿ, ನಂದಿನಿಯ ಕತ್ತು ಹಿಸುಕುವ ಕರಾಳ ಪ್ರಯತ್ನ ನಡೆದಿತ್ತು. 5/13#ಬಿಜೆಪಿಯ_ವರಸೆ
— ಹೆಚ್.ಡಿ.ಕುಮಾರಸ್ವಾಮಿ | H.D.Kumaraswamy (@hd_kumaraswamy) April 10, 2023
ಅಂದು ಅಮುಲ್ ಘಟಕದ ಬಗ್ಗೆ @JanataDal_S ಪಕ್ಷವು ಭಾರೀ ವಿರೋಧ ವ್ಯಕ್ತಪಡಿಸಿತ್ತು, ಕೆಎಂಎಫ್ʼನ ಅಂದಿನ ಅಧ್ಯಕ್ಷರಾಗಿದ್ದ @hd_revanna ಅವರು, "ಯಾವುದೇ ಕಾರಣಕ್ಕೂ ರಾಜ್ಯದಲ್ಲಿ ಅಮುಲ್ ಹಾಲು ಮಾರಾಟಕ್ಕೆ ಅವಕಾಶ ಕೊಡುವುದಿಲ್ಲ" ಎಂದು ಕಡ್ಡಿತುಂಡು ಮಾಡಿದಂತೆ ಹೇಳಿದ್ದರು. 7/13
— ಹೆಚ್.ಡಿ.ಕುಮಾರಸ್ವಾಮಿ | H.D.Kumaraswamy (@hd_kumaraswamy) April 10, 2023
ಅಂದು ಬಿಜೆಪಿಗರು ಮೋದಿ ಅವರನ್ನು ಮೆಚ್ಚಿಸಲು ಅಮುಲ್ ಪರ ವಕಾಲತ್ತು ವಹಿಸಿ,ನಂದಿನಿಯನ್ನು ಮುಗಿಸಲು ಹೊರಟಿದ್ದರು. ಅಂದಿನ ಮುಖ್ಯಮಂತ್ರಿಗಳೂ ಸೇರಿ ಬಿಜೆಪಿ ಮುಂಚೂಣಿ ನಾಯಕರು ಅಮುಲ್ ಪರ ಬ್ಯಾಟ್ ಬೀಸಿದ್ದರು.ಈಗ ಪಾತ್ರಗಳು ಬದಲಾಗಿವೆ. @CTRavi_BJP, @mla_sudhakar, @drashwathcn ಇತರರು ರಂಗದ ಮೇಲಿದ್ದಾರಷ್ಟೇ. 8/13#ಬಿಜೆಪಿಯ_ವರಸೆ
— ಹೆಚ್.ಡಿ.ಕುಮಾರಸ್ವಾಮಿ | H.D.Kumaraswamy (@hd_kumaraswamy) April 10, 2023
ಕರ್ನಾಟಕದ ಬ್ಯಾಂಕುಗಳು ಹೋದವು, ಭದ್ರಾವತಿಯ ವಿಎಸ್ ಎನ್ ಎಲ್ ಇನ್ನೇನು ಯಾರೋ ಗುಜರಾತಿ ಉದ್ದಿಮೆದಾರನ ಪಾಲಾಗುವ ಹಂತದಲ್ಲಿದೆ. ಈಗ ನಂದಿನಿ... ಲಾಭದಾಯಕವಾಗಿರುವ ರಾಜ್ಯದ ಒಂದೊಂದೇ ಉದ್ಯಮವನ್ನು ಮುಗಿಸಲು @BJP4India ಹೊಂಚು ಹಾಕಿರುವುದು ಸ್ಪಷ್ಟ. 10/13#ಬಿಜೆಪಿಯ_ವರಸೆ
— ಹೆಚ್.ಡಿ.ಕುಮಾರಸ್ವಾಮಿ | H.D.Kumaraswamy (@hd_kumaraswamy) April 10, 2023
ಪ್ರತಿಯೊಂದನ್ನೂ ಪ್ರಶ್ನಿಸುವ, ನ್ಯಾಯ ಕೇಳುವ ಕನ್ನಡಿಗರನ್ನು ದುರ್ಬಲಗೊಳಿಸುವುದೂ ಎಂದರೆ, ಆರ್ಥಿಕವಾಗಿ ಕರ್ನಾಟಕದ ಬೆನ್ನುಮೂಳೆ ಮುರಿಯುವುದು. ಉತ್ತರಕ್ಕೆ ಬೆಣ್ಣೆ, ದಕ್ಷಿಣಕ್ಕೆ ಸುಣ್ಣ ಎಂಬ ನೀತಿ ಅನುಸರಿಸುವ @BJP4India ಡಬಲ್ ಎಂಜಿನ್ ಸರಕಾರವು, ದಕ್ಷಿಣದ ರಾಜ್ಯಗಳ ಜತೆ ಡಬಲ್ ಗೇಮ್ ಆಡುತ್ತಿದೆ. 12/13#ಬಿಜೆಪಿಯ_ವರಸೆ
— ಹೆಚ್.ಡಿ.ಕುಮಾರಸ್ವಾಮಿ | H.D.Kumaraswamy (@hd_kumaraswamy) April 10, 2023
ಒಂದು ಕಡೆ ಸಫಾರಿ! ಇನ್ನೊಂದು ಕಡೆ ಸುಪಾರಿ!! ಇದು ಬಿಜೆಪಿಯು ಆದಿಯಿಂದ ನಡೆದುಕೊಂಡು ಬಂದ ದಾರಿ. ಕೆಎಂಎಫ್ ಮತ್ತು ನಂದಿನಿ ವಿಷಯದಲ್ಲೂ ಆ ಪಕ್ಷದ್ದು ಅದೇ ವರಸೆ. ಸ್ಲೋಗನ್ ನಲ್ಲಿ ಮಾತ್ರ 'ಬಿಜೆಪಿಯೇ ಭರವಸೆ', ಇದೇ ನೋಡಿ ಅದರ ಅಸಲಿ ವರಸೆ!! 2/13#ಬಿಜೆಪಿಯ_ವರಸೆ
— ಹೆಚ್.ಡಿ.ಕುಮಾರಸ್ವಾಮಿ | H.D.Kumaraswamy (@hd_kumaraswamy) April 10, 2023
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.